Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 

ಮೇ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಸಿದ್ದಾಪುರ ಮೇ.22 NEWS DESK : ಚುನಾವಣೆ ಸಂದರ್ಭ ನೀಡಿದ ಭರವಸೆಯಂತೆ ಅಂದಾಜು 7 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಯೋಜನೆಗಳನ್ನು ಗ್ರಾಮಕ್ಕೆ ನೀಡಿ  ನುಡಿದಂತೆ ನಡೆದುಕೊಂಡ ಶಾಸಕ ಡಾ.ಮಂತರ್ ಗೌಡ ಅವರ  ಜನಪರ ಕಾಳಜಿಗೆ ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಾಸಕರನ್ನ  ಅದ್ದೂರಿಯಾಗಿ ಬರಮಾಡಿಕೊಂಡು ಸನ್ಮಾನಿಸಿ ಗೌರವಿಸಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲು ನೆಲ್ಲಿಹುದಿಕೇರಿ ವಿವಿಧ ವಾರ್ಡುಗಳಿಗೆ ಆಗಮಿಸಿದ ಶಾಸಕರಿಗೆ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರೆ, ಪುರುಷರು, ಯುವಕರು ಸನ್ಮಾನಿಸಿ ಗೌರವಿಸಿ ಸಿಹಿ ಹಂಚಿ ಬರಮಾಡಿಕೊಂಡರು. ಇದೇ ಸಂದರ್ಭ ಮಾತನಾಡಿದ ಶಾಸಕರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸರ್ಕಾರದ ಯೋಜನೆಗಳನ್ನು ಪ್ರತಿ ಮನೆಗಳಿಗೆ ತಲುಪುವಂತೆ ಮಾಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ನೀಡಿ  ಅಭಿವೃದ್ಧಿಯೊಂದಿಗೆ ಸ್ವಾವಲಂಬಿ ಜೀವನ ನಡೆಸಲು ಎಲ್ಲ ರೀತಿಯ ಯೋಜನೆಗಳನ್ನು ನೀಡುತ್ತಿದೆ. ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೂಲಕ ಅಭಿವೃದ್ಧಿಯೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ  ನಮ್ಮ ರಾಜ್ಯ ಪ್ರಗತಿಯತ್ತ ಸಾಗಲಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವುದು ನಮ್ಮ ಕರ್ತವ್ಯವಾಗಿದ್ದು, ಹಲವು ವರ್ಷಗಳಿಂದಲೂ ಅಭಿವೃದ್ಧಿ ಕಾಣದೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದ ಜನರಿಗೆ  ಇದೀಗ ಅಭಿವೃದ್ಧಿ ಭಾಗ್ಯ ದೊರೆತಂತಾಗಿದೆ.  ಸರ್ಕಾರ ಜನರ ಪರವಾಗಿ ಕೆಲಸ ಮಾಡುತ್ತಿದ್ದು, ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು. ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ರಸ್ತೆ ಚರಂಡಿ ನಿರ್ಮಾಣಗಳಿಗೆ ವಾರ್ಡ್ ವ್ಯಾಪ್ತಿಯಲ್ಲಿ ಜಾಗ ಬಿಟ್ಟು ಕೊಡಬೇಕೆಂದು ಮನವಿ ಮಾಡಿದರು.  ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಾಬು ವಾರ್ಗೀಸ್ ಮಾತನಾಡಿ, ಹಲವು ವರ್ಷಗಳಿಂದಲೂ ಪ್ರಮುಖ ರಸ್ತೆಗಳು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ನಡೆಯದೆ ಈ ಭಾಗದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರು.  ಶಾಸಕ ಮಂತರ್ ಗೌಡರು ಚುನಾವಣೆ ಸಂದರ್ಭದಲ್ಲಿ  ಗ್ರಾಮಕ್ಕೆ ಭೇಟಿ ನೀಡಿ  ಜನರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಇದೀಗ ನುಡಿದಂತೆ ನಡೆದುಕೊಂಡು ಇದುವರೆಗೂ ಅಂದಾಜು 7 ಕೋಟಿ ರು ವೆಚ್ಚದಲ್ಲಿ  ವಿದ್ಯುತ್ ಸಮಸ್ಯೆ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ, ಕಿರು ಸೇತುವೆ, ತಡೆಗೋಡೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಬಹುತೇಕ ನಡೆದಿದ್ದು, ಮತ್ತಷ್ಟು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದಾರೆ ಎಂದು ಹೇಳಿದರು. ಗ್ರಾಮದಲ್ಲಿ ಮತ್ತಷ್ಟು ಸಮಸ್ಯೆಗಳಿದ್ದು, ಬಗೆಹರಿಸಿ ಕೊಡಬೇಕೆಂದು ಮನವಿ ಮಾಡಿದರು. ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರುಗಳಾದ ಎಂ.ಕೆ.ಹಕಿಂ, ಧನಲಕ್ಷ್ಮಿ, ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಸೈಯದ್ ಬಾವ, ಅಭಿವೃದ್ಧಿ ಅಧಿಕಾರಿ ನಂಜುಂಡಸ್ವಾಮಿ, ಚೆಸ್ಕಾಂ ಇಲಾಖೆಯ ಮಂಜುನಾಥ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಸುನಿತಾ ಮಂಜುನಾಥ್, ಕಾಂಗ್ರೆಸ್ ಜಿಲ್ಲಾ ಸಮಿತಿ ಸದಸ್ಯ ಕೆ.ಎಂ.ಬಶೀರ್, ಜೋಸೆಫ್ ಶ್ಯಾಮ್, ಪ್ರಮುಖರಾದ ಎಸ್ ದೂಲ್ ಪಾಡಿ,  ಮುಸ್ತಫ, ಅನಿಫ್, ವಸಂತ್ ಕುಮಾರ್ ಹೊಸ ಮನೆ, ಪ್ರಮೀಳಾ, ಕೆ.ಎಂ.ಮುಸ್ತಫ, ಅಪ್ಸಲ್, ಸಿಹಾಬ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಗ್ರಾಮಸ್ಥರು ಪಂಚಾಯಿತಿ ಮಾಜಿ ಸದಸ್ಯರಗಳು ಹಾಜರಿದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.