Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹೊನ್ನಮ್ಮನ ಕನಸಿಗೆ ಮತ್ತೊಂದು ಗರಿ*
  • *ಸೆಸ್ಕ್‌ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಅತ್ತೆ-ಮಾವಂದಿರನ್ನು ಚೆನ್ನಾಗಿ ನೋಡಿಕೊಂಡಲ್ಲಿ ಸಂಸಾರಕ್ಕೆ ಅರ್ಥ : ಶರಣಮ್ಮ ಎಸ್.ಜಂಗಿನ*
  • *ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಅಭಿವೃದ್ಧಿ ಶೂನ್ಯ : ಬಹುಮತ ನೀಡಿದ ಜನರಿಗೆ ಬಿಜೆಪಿಯಿಂದ ಮೋಸ*
  • *ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*
  • *ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದ ಕಟ್ಟಡದಲ್ಲಿ ಆಸ್ಪತ್ರೆ ಆರಂಭಿಸಲು ಹೇರೂರು ಗ್ರಾಮಸ್ಥರ ಒತ್ತಾಯ*
  • *ಕಾವ್ಯಶ್ರೀ ಕಾಂತ್‍ರಾಜ್‍ಗೆ ಕರ್ನಾಟಕ ಕನ್ನಡ ರತ್ನ ಪ್ರಶಸ್ತಿ*
  • *ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*
  • *ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 
  • *ಕೊಡಗು : ವಿದ್ಯುತ್ ಅಡಚಣೆ : ಸಹಾಯವಾಣಿ ಕೇಂದ್ರ ಆರಂಭ*
  • *ಮುಂಗಾರು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*

ಮೇ 23, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 23 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಮೊದಲ ಬಾರಿಗೆ ಮೃತ ದಾನಿಯಿಂದ ಅಂಗಾಂಗ ಸಂಗ್ರಹಣೆ ಯಶಸ್ವಿಯಾಗಿ ನೆರವೇರಿದ್ದು, ಕೊಡಗು ಜಿಲ್ಲೆಯ ವೈದ್ಯಕೀಯ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಿದೆ. ಗೋಣಿಕೊಪ್ಪ ಸಮೀಪದ ಅರವತ್ತೋಕ್ಲು ಗ್ರಾಮದ 46 ವರ್ಷದ ಡಾಲು ಅವರು ಅಪಘಾತದಲ್ಲಿ ತೀವ್ರ ತಲೆಗೆ ಗಾಯಗೊಂಡು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ವೈದ್ಯರು ಬ್ರೇನ್‍ಸ್ಟೆಮ್ ಡೆತ್ ಶಂಕೆ ವ್ಯಕ್ತಪಡಿಸಿದರು. ಭಾರತೀಯ ಕಾನೂನು ಪ್ರಕಾರ ಎರಡು ಹಂತಗಳಲ್ಲಿ ವೈದ್ಯಕೀಯ ಸಮಿತಿಯಿಂದ ಪರೀಕ್ಷೆ ನಡೆಸಿ, 48 ಗಂಟೆಗಳ ವೀಕ್ಷಣೆಯ ಬಳಿಕ ಬ್ರೇನ್‍ಸ್ಟೆಮ್ ಡೆತ್ ದೃಢಪಡಿಸಲಾಯಿತು. ಈ ಸಂದರ್ಭದಲ್ಲಿ ಡಾಲು ಅವರ ಪತ್ನಿ ರಾಜೇಶ್ವರಿ ಹಾಗೂ ಕುಟುಂಬ ಸದಸ್ಯರು ಮಹತ್ವದ ಮಾನವೀಯ ನಿರ್ಧಾರ ಕೈಗೊಂಡು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಈಗಾಗಲೇ SOTTO ಹಾಗೂ NOTTO ಮಾನ್ಯತೆ ಪಡೆದಿರುವ ಹಿನ್ನೆಲೆ, ಪ್ರಕರಣವನ್ನು ರಾಜ್ಯ ಅಂಗಾಂಗ ಮತ್ತು SOTTO ಗೆ ವರದಿ ಮಾಡಲಾಯಿತು. SOTTO ಮಾರ್ಗದರ್ಶನದಲ್ಲಿ ಅಂಗಾಂಗ ಸಂಗ್ರಹಣೆಯ ಪ್ರಕ್ರಿಯೆ ಕೈಗೊಳ್ಳಲಾಯಿತು. ಡೀನ್ ಮತ್ತು ನಿರ್ದೇಶಕರಾದ ಡಾ. ಲೋಕೇಶ್ ಎ.ಜೆ., ಆಸ್ಪತ್ರೆಯ ಅಧೀಕ್ಷಕರಾದ ಡಾ. ಸೋಮಶೇಖರ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ನಂಜುಂಡಯ್ಯ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಐಸಿಯು ತಂಡದ ಡಾ. ನಿಶೀದ್ ಜೋಸೆಫ್ ಹಾಗೂ ನಸಿರ್ಂಗ್ ಅಧಿಕಾರಿ ಪವನ್ ಅವರು ರೋಗಿಯ ದೇಹದ ಸ್ಥಿತಿಯನ್ನು ಸ್ಥಿರವಾಗಿಟ್ಟುಕೊಳ್ಳಲು ನಿರಂತರ ಶ್ರಮಿಸಿದರು. ಬೆಳಗಿನ 2 ಗಂಟೆಗೆ ಆರಂಭವಾದ ಶಸ್ತ್ರಚಿಕಿತ್ಸೆಯಲ್ಲಿ ಎರಡು ಮೂತ್ರಪಿಂಡಗಳು, ಹೃದಯ ಕವಾಟಗಳು ಮತ್ತು ಕಣ್ಣುಗಳ ಕಾರ್ನಿಯಾಗಳನ್ನು ಯಶಸ್ವಿಯಾಗಿ ಸಂಗ್ರಹಿಸಲಾಯಿತು. ಮೈಸೂರಿನಿಂದ ಆಗಮಿಸಿದ ಯೂರೋಸರ್ಜನ್‍ಗಳಾದ ಡಾ. ಸಚಿನ್ ಧಾರವಾಡ್ಕರ್ ಮತ್ತು ಡಾ. ವಿಜಯಕುಮಾರ್ ಮೂತ್ರಪಿಂಡ ಸಂಗ್ರಹಣೆ ನಡೆಸಿದರು. ಡಾ. ಅಭಿನಂದನ್ ಮತ್ತು ಡಾ. ಚಂದ್ರಶೇಖರ್ ಹೃದಯ ಕವಾಟಗಳನ್ನು, ಡಾ. ಶ್ರುತಿ ಮತ್ತು ತಂಡ ಕಾರ್ನಿಯಾಗಳನ್ನು ಸಂಗ್ರಹಿಸಿದರು. ನಸಿರ್ಂಗ್ ಸಿಬ್ಬಂದಿಯಾದ ಜಯಶ್ರೀ, ಅನಿಲ್ ಮತ್ತು ಮಂಜುನಾಥ್ ಹಾಗೂ ಹಿರಿಯ ನಸಿರ್ಂಗ್ ಅಧಿಕಾರಿಗಳಾದ ವಸಂತ್ ಮತ್ತು ಮಹೇಶ್ ಈ ಕಾರ್ಯವನ್ನು ಸಮರ್ಥವಾಗಿ ನಿರ್ವಹಿಸಿದರು. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ಅಂಗಾಂಗ ಸಾಗಣೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಿದರು. ಸ್ಥಳೀಯ ಜನಪ್ರತಿನಿಧಿಗಳಾದ ಶಾಸಕರಾದ ಮಂಥರ್ ಗೌಡ ಮತ್ತು ಎ.ಎಸ್.ಪೊನ್ನಣ್ಣ ರವರು ಸಂಪೂರ್ಣ ಬೆಂಬಲ ನೀಡಿದರು. ನಂತರ ಡಾಲು ಅವರ ಪಾರ್ಥಿವ ಶರೀರವನ್ನು “ವಾಕ್ ಆಫ್ ಆನರ್” ಮೂಲಕ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ನಸಿರ್ಂಗ್ ತಂಡ ದಾನಿಯ ಸೇವೆಯನ್ನು ಗೌರವಿಸಿದರು. ಕುಟುಂಬವನ್ನು ಸನ್ಮಾನಿಸಲಾಯಿತು. ಈ ಕುರಿತು ಮಾತನಾಡಿದ ಡೀನ್ ಡಾ. ಲೋಕೇಶ್ ಎ.ಜೆ., “ಇದು ಕೊಡಗು ಜಿಲ್ಲೆಯ ವೈದ್ಯಕೀಯ ಕ್ಷೇತ್ರಕ್ಕೆ ಐತಿಹಾಸಿಕ ಕ್ಷಣ. ಅಂಗಾಂಗ ದಾನದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ” ಎಂದು ಹೇಳಿದರು. ಭಾರತದಲ್ಲಿ ಅಂಗಾಂಗಗಳ ಅಗತ್ಯ ಹೆಚ್ಚುತ್ತಿರುವ ಸಂದರ್ಭದಲ್ಲಿ, ಡಾಲು ಅವರ ಕುಟುಂಬದ ಈ ನಿರ್ಧಾರ ಅನೇಕ ಜೀವಗಳಿಗೆ ಹೊಸ ಆಶೆಯಾಗಿ ಪರಿಣಮಿಸಿದೆ. ಡೀನ್ ಮತ್ತು ನಿರ್ದೇಶಕರಾದ ಡಾ. ಲೋಕೇಶ್ ಎ.ಜೆ., ಆಸ್ಪತ್ರೆಯ ಅಧೀಕ್ಷಕರಾದ ಡಾ. ಸೋಮಶೇಖರ್ ಡಾ. ನಂಜುಂಡಯ್ಯ, ಡಾ. ಅಭಿನಂದನ್, ಡಾ ಧನಂಜಯ , ಡಾ. ನಿಶೀದ್ ಜೋಸೆಫ್ ಡಾ. ಅಯ್ಯಪ್ಪ,ಡಾ ಚೇತನ್, ಡಾ. ಪ್ರಮೋದ್, ಡಾ. ಅಮಿತಾ, ಡಾ. ಅಮೂಲ್ಯ, ಡಾ. ಅಕ್ಷತಾ, ಡಾ ಚಂದ್ರಶೇಖರ್,ಡಾ. ಕೃಪಾಲಿನಿ, ಡಾ . ಶೃತಿ, ಡಾ ಆತೀಶ್, ಡಾ ಉಮೇಶ್ ಬಾಬು, ಡಾ ಕಿಶೋರ್ ಕುಮಾರ್, ಡಾ ಪ್ರಸನ್ನ, ಕೌನ್ಸಿಲರ್ಗಳಾದ ವಿನೋದ್ ಕುಮಾರ್, ಕಾರ್ತಿಕ್ ಸ್ನಾತಕೋತ್ತರ ವೈದ್ಯರು, ಶುಶ್ರೂಷಕ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿಗಳು ಹಾಜರಿದ್ದರು. *ನೀವು ಕೂಡ ಹೇಗೆ ಭಾಗಿಯಾಗಬಹುದು?*
ಡಾಲು ಅವರ ಕುಟುಂಬಕ್ಕೆ ನೀಡಬಹುದಾದ ಅತ್ಯುತ್ತಮ ಗೌರವವೆಂದರೆ ಕೇವಲ ಪ್ರಶಂಸೆ ಅಲ್ಲ — ಕಾರ್ಯ.
ಆನ್‍ಲೈನ್‍ನಲ್ಲಿ ನೋಂದಣಿ ಮಾಡಿ: NOTTO ವೆಬ್‍ಸೈಟ್ notto.abdm.gov.in ನಲ್ಲಿ ಆಧಾರ್ ಬಳಸಿ ಕೆಲವೇ ನಿಮಿಷಗಳಲ್ಲಿ ಅಂಗಾಂಗ ದಾನಕ್ಕೆ ನೋಂದಾಯಿಸಬಹುದು. ಕರ್ನಾಟಕದಲ್ಲಿ ಜೀವಸಾರ್ಥಕತೆ (SOTTO-Karnataka) ಮೂಲಕವೂ ನೋಂದಣಿ ಸಾಧ್ಯ. ಸಹಾಯಕ್ಕಾಗಿ ಕರೆ ಮಾಡಿ: NOTTO ಸಹಾಯವಾಣಿ 1800-11-4770 ಮೂಲಕ ಮಾಹಿತಿ ಪಡೆಯಬಹುದು. *ಇಡೀ ದೇಶಕ್ಕೆ ಮಹತ್ವದ್ದು?* ಭಾರತದಲ್ಲಿ 2024ರಲ್ಲಿ ಸುಮಾರು 18,900 ಅಂಗಾಂಗ ಪ್ರತಿರೋಪಣ ಶಸ್ತ್ರಚಿಕಿತ್ಸೆಗಳು ನಡೆದಿವೆ — ಇದು ದೇಶದ ಇತಿಹಾಸದಲ್ಲೇ ಅತಿ ಹೆಚ್ಚು ಮತ್ತು ಅಮೇರಿಕಾ ಹಾಗೂ ಚೀನಾ ನಂತರ ವಿಶ್ವದಲ್ಲಿ ಮೂರನೇ ಸ್ಥಾನ. ಆದರೆ ಮೃತ ದಾನಿಗಳ ಸಂಖ್ಯೆ ಕೇವಲ 1,100 ರμÉ್ಟೀ. ದೇಶದಲ್ಲಿ 63,000 ಕ್ಕೂ ಹೆಚ್ಚು ಜನ ಮೂತ್ರಪಿಂಡಕ್ಕಾಗಿ ಕಾಯುತ್ತಿದ್ದಾರೆ. ಸುಮಾರು 22,000 ಜನರಿಗೆ ಯಕೃತ್ ಅಗತ್ಯವಿದೆ. ಪ್ರತಿ ವರ್ಷ 1.6 ಲಕ್ಷ ರಸ್ತೆ ಅಪಘಾತ ಸಾವುಗಳು ಸಂಭವಿಸುತ್ತಿದ್ದರೂ, ಬಹುತೇಕ ಅಂಗಾಂಗಗಳು ದಾನವಾಗುವುದಿಲ್ಲ. ಕಾರಣ — ಕುಟುಂಬಗಳು ಈ ಬಗ್ಗೆ ಎಂದಿಗೂ ಚರ್ಚಿಸಿರದೇ ಇರುವುದು ಮತ್ತು “ಬ್ರೇನ್ ಡೆತ್” ಕುರಿತು ಸರಿಯಾದ ಅರಿವು ಇಲ್ಲದಿರುವುದು. ಒಬ್ಬ ದಾನಿ ಎಂಟು ಜನರ ಜೀವ ಉಳಿಸಬಹುದು ಅಥವಾ ಅವರ ಬದುಕನ್ನು ಸಂಪೂರ್ಣ ಬದಲಾಯಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹೊನ್ನಮ್ಮನ ಕನಸಿಗೆ ಮತ್ತೊಂದು ಗರಿ*

ಮೇ 23, 2026

*ಸೆಸ್ಕ್‌ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಅತ್ತೆ-ಮಾವಂದಿರನ್ನು ಚೆನ್ನಾಗಿ ನೋಡಿಕೊಂಡಲ್ಲಿ ಸಂಸಾರಕ್ಕೆ ಅರ್ಥ : ಶರಣಮ್ಮ ಎಸ್.ಜಂಗಿನ*

ಮೇ 23, 2026

*ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಅಭಿವೃದ್ಧಿ ಶೂನ್ಯ : ಬಹುಮತ ನೀಡಿದ ಜನರಿಗೆ ಬಿಜೆಪಿಯಿಂದ ಮೋಸ*

ಮೇ 23, 2026

*ಸೆಸ್ಕ್‌ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಅತ್ತೆ-ಮಾವಂದಿರನ್ನು ಚೆನ್ನಾಗಿ ನೋಡಿಕೊಂಡಲ್ಲಿ ಸಂಸಾರಕ್ಕೆ ಅರ್ಥ : ಶರಣಮ್ಮ ಎಸ್.ಜಂಗಿನ*

ಮೇ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 23 NEWS DESK : ಮಹಿಳೆಯರು ವಿಜ್ಞಾನ, ತಂತ್ರಜ್ಞಾನ, ಸಾಹಿತ್ಯ, ಸಂಗೀತ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ…

*ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಅಭಿವೃದ್ಧಿ ಶೂನ್ಯ : ಬಹುಮತ ನೀಡಿದ ಜನರಿಗೆ ಬಿಜೆಪಿಯಿಂದ ಮೋಸ*

ಮೇ 23, 2026

*ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*

ಮೇ 23, 2026

*ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದ ಕಟ್ಟಡದಲ್ಲಿ ಆಸ್ಪತ್ರೆ ಆರಂಭಿಸಲು ಹೇರೂರು ಗ್ರಾಮಸ್ಥರ ಒತ್ತಾಯ*

ಮೇ 23, 2026

*ಕಾವ್ಯಶ್ರೀ ಕಾಂತ್‍ರಾಜ್‍ಗೆ ಕರ್ನಾಟಕ ಕನ್ನಡ ರತ್ನ ಪ್ರಶಸ್ತಿ*

ಮೇ 22, 2026

*ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*

ಮೇ 22, 2026

*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 

ಮೇ 22, 2026

*ಕೊಡಗು : ವಿದ್ಯುತ್ ಅಡಚಣೆ : ಸಹಾಯವಾಣಿ ಕೇಂದ್ರ ಆರಂಭ*

ಮೇ 22, 2026

*ಮುಂಗಾರು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮೇ 22, 2026

*ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ*

ಮೇ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.