Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೀ.ಮಾ.ಕಾರ್ಯಪ್ಪ ಕಾಲೇಜಿನ ವಾರ್ಷಿಕೋತ್ಸವ : 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆ ನೀಡಿದೆ : ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ*

ಮೇ 26, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಮೇ 26 NEWS DESK : ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಐತಿಹಾಸಿಕ ಹಿನ್ನೆಲೆ ಹೊಂದಿದೆ. ಮಾತ್ರವಲ್ಲದೇ ತನ್ನ 77 ವರ್ಷಗಳ ಸುದೀರ್ಘ ಸೇವೆಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳಲು ವೇದಿಕೆ ನೀಡಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಉಪ ಕಲಪತಿ ಪ್ರೊ. ಅಶೋಕ್ ಸಂಗಪ್ಪ ಆಲೂರ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ವಾರ್ಷಿಕೋತ್ಸವ, ಕ್ರೀಡೆ ಮತ್ತು ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂತಹ ಮಹಾನ್ ಕಾಲೇಜನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ಕೆಲಸವನ್ನು ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ನಿರಂತರವಾಗಿ ಮಾಡಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಕಾಲೇಜಿನ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. :: ವಿದ್ಯಾರ್ಥಿಗಳು ದೇಶದ ಶಕ್ತಿ ::  ಹಿರಿಯ ಪತ್ರಕರ್ತ, ಕೊಡಗು ಚಾನಲ್ ಪ್ರಧಾನ ಸಂಪಾದಕ ಜಿ.ವಿ ರವಿಕುಮಾರ್ ಮಾತಾಡಿ, ವಿದ್ಯಾರ್ಥಿಗಳಿಗೆ ಗುರಿ ಮತ್ತು ಪರಿಶ್ರಮ ಅತೀ ಮುಖ್ಯ. ಸೋಮಾರಿತನ ಬಿಟ್ಟು ಸಮಾಜದ ತಿಳುವಳಿಕೆ ಹೊಂದಬೇಕು. ವಿದ್ಯಾರ್ಥಿ ಶಕ್ತಿಯೇ ದೇಶದ ಶಕ್ತಿ ಎಂಬುದನ್ನು ಮನಗಾಣಬೇಕು ಎಂದು ತಮಿಳುನಾಡು ಚುನಾವಣೆಯನ್ನು ಉದಾಹರಿಸಿ ಎಂದು ಸಲಹೆ ನೀಡಿದರು. ಪ್ರಪಂಚ ವೇಗವಾಗಿ ಬದಲಾಗುತ್ತಿದ್ದು, ವಿದ್ಯಾರ್ಥಿಗಳು ಕೂಡ ಅದರಲ್ಲಿ ಒಂದಾಗಬೇಕು. ಸಮಯ ಬಹಳ ಮುಖ್ಯವಾಗಿದ್ದು ಬದುಕಲ್ಲಿ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಪ್ರತಿ ವಿಷಯವನ್ನು ಅಧ್ಯಯನ ಮಾಡಬೇಕು. ಯಾವ ವಿಷಯದ ಬಗ್ಗೆಯೂ ಕೀಳರಿಮೆ ಸಲ್ಲದು ಎಂದು ಕಿವಿ ಮಾತು ಹೇಳಿದರು. ಸಾಮಾಜಿಕ ಜವಾಬ್ದಾರಿಯ ಜೊತೆಯಲ್ಲಿ ಮಾನವೀಯತೆ ಬೆಳೆಸಿಕೊಂಡ ಮುನ್ನಡೆಯಿರಿ ಎಂದು ರವಿ ಕುಮಾರ್ ಹೇಳಿದರು.
ಕೆನರಾ ಬ್ಯಾಂಕ್‍ನ ಪ್ರಾದೇಶಿಕ ವ್ಯವಸ್ಥಾಪಕ ವಿನಾಯಕ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮತ್ತು ಕೆನರಾ ಬ್ಯಾಂಕ್ ನಡುವೆ ಸುದೀರ್ಘ ಸೇವೆಯ ಇತಿಹಾಸವಿದೆ. ಬ್ಯಾಂಕ್ ಸೇವೆ ಮತ್ತು ಕಾಲೇಜಿನ ಅಗತ್ಯತೆಗಳನ್ನು ತಿಳಿಸಿದಲ್ಲಿ ಮತ್ತಷ್ಟು ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. :: ‘ಝೆಂಜಿ’ಗಳಿಂದ ಬದಲಾವಣೆ :: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ರಾಕೇಶ್ ಮಾತನಾಡಿ, ಝೆಂಜಿಗಳಿಂದ ದೇಶದಲ್ಲಿ ಬದಲಾವಣೆ ತರಲು ಸಾಧ್ಯವಿದೆ. 77 ಸಂವತ್ಸರಗಳನ್ನು ಕಂಡಿರುವ ಕಾಲೇಜು ಕಟ್ಟಡ ಇಂದು ಶಿಥಿಲಾವಸ್ಥೆಯಲ್ಲಿದೆ. ಕೊಡಗಿನ ವಿದ್ಯಾರ್ಥಿಗಳು ವಲಸೆ ಹೋಗುತ್ತಿರುವ ಕಾರಣದಿಂದ ಹಲವು ಕೋರ್ಸ್‍ಗಳು ಕಡಿತವಾಗುತ್ತಿದೆ ಎಂದು ವಿಷಾಧಿಸಿದರು. ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬೇಡಿ ಎಂದು ಮನವಿ ಮಾಡಿದರಲ್ಲದೇ, ಹೋರಾಟದ ಮೂಲಕವಾದರೂ ಯುವ ಸಮೂಹ ಕಾಲೇಜನ್ನು ಉಳಿಸಿಕೊಳ್ಳಬೇಕು. ಆ ದಿಸೆಯಲ್ಲಿ ಝೆಂಜಿ ಪೀಳಿಗೆ ನಿರ್ಧಾರ ಮಾಡಬೇಕು ಎಂದು ಕರೆ ನೀಡಿದರು. ಝೆಂಜಿ ಪೀಳಿಗೆ ರೀಲ್ಸ್ ಬಿಟ್ಟು ತಮ್ಮ ಭವಿಷ್ಯ ಕಟ್ಟಿಕೊಳ್ಳುವ ಕಡೆ ಗಮನ ಹರಿಸಬೇಕು. ಆಧುನಿಕ ಯುಗದಲ್ಲಿ ಸುಲಭವಾಗಿ ಸಿಗುವ ವಿಫುಲ ಅವಕಾಶಗಳನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಬೇಕು. ಕಲಿಕೆಯನ್ನು ಶ್ರದ್ಧೆಯಿಂದ ಮಾಡಬೇಕು ಎಂದು ಹೇಳಿದರಲ್ಲದೇ, ಸಮಾಜ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕಾರಾತ್ಮಕ ಬದಲಾವಣೆ ತರಲು ಝೆಂಜಿ ಪೀಳಿಗೆಯಿಂದ ಮಾತ್ರವೇ ಸಾಧ್ಯ ಎಂದು ಪ್ರತಿಪಾದಿಸಿದರು. :: ಶ್ರಮದಿಂದ ‘ಇತಿಹಾಸ’ ಸಾಧ್ಯ ::  ಕಾಲೇಜು ಹಳೇ ವಿದಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ ಮಾತನಾಡಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಾಧಕರ ಕಾಲೇಜು. ಅಷ್ಟೋಂದು ದೊಡ್ಡ ಮಟ್ದದ ಸಾಧಕರು ಈ ಕಾಲೇಜಿನ ಮೂಲಕ ವಿದ್ಯಾರ್ಜನೆ ಮಾಡಿದ್ದಾರೆ. ರಾಜಕೀಯ, ಸೇನೆ, ನಾಗರಿಕ ಸೇವೆಯಲ್ಲಿ ಇಂದಿಗೂ ಈ ಕಾಲೇಜಿನ ಮಾಜಿ ವಿದ್ಯಾರ್ಥಿಗಳಿದ್ದಾರೆ. ಕಾಲೇಜು ದಿನಗಳಲ್ಲಿ ಶ್ರಮ ವಹಿಸಿದವರು ಮಾತ್ರವೇ ಇಂತಹ ಸಾಧನೆಯ ಇತಿಹಾಸ ಬರೆಯುತ್ತಾರೆ ಎಂದು ಸಲಹೆ ನೀಡಿದರು. ಕಷ್ಟಪಟ್ಟರೆ ಮಾತ್ರವೇ ಗುರಿ ತಲುಪಲು ಸಾಧ್ಯ ಎಂದು ಹೇಳಿದರು. :: ಸಾಧನೆಯೇ ಜೀವಂತ :: ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಪ್ರಾಂಶುಪಾಲ ಮೇಜರ್ ಪ್ರೋ. ಬಿ.ರಾಘವ ಮಾತನಾಡಿ, ಓರ್ವ ವ್ಯಕ್ತಿಯ ಸಾಧನೆ ಮಾತ್ರವೇ ಆತ ಸತ್ತ ಮೇಲೂ ಜೀವಂತವಿರುತ್ತದೆ. ಅಂತಹ ಸಾಧಕರ ಸಾಲಿನಲ್ಲಿ ಈ ಕಾಲೇಜು ವಿದ್ಯಾರ್ಥಿಗಳ ಹೆಸರು ಇರಬೇಕು ಎಂದು ಆಶಿಸಿದರು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಹೇಳಿದರು. :: ಸನ್ಮಾನದ ಗೌರವ: ಕೆನರಾ ಬ್ಯಾಂಕ್‍ನ ಪ್ರಾದೇಶಿಕ ವ್ಯವಸ್ಥಾಪಕ ವಿನಾಯಕ ವಿನಾಯಕ, ಕಾಲೇಜು ಹಳೇ ವಿದಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ, ಮಾಜಿ ವಿದ್ಯಾರ್ಥಿ ಹರ್ಷ್ ದೇವಯ್ಯ, ಪ್ರಾಣಿ ಶಾಸ್ತ್ರ ವಿಭಾಗದ ಕೃಷ್ಣ, ಗ್ರಂಥಾಲಯ ಮೇಲ್ವಿಚಾರಕಿ ಡಾ.ವಿಜಯಲತಾ, ಎನ್‍ಸಿಸಿ ಜೂನಿಯರ್ ಅಂಡರ್ ಆಫೀಸರ್ ಚರಿಷ್ಮ ರೈ, ಮೇಜರ್ ಪ್ರೋ. ಬಿ.ರಾಘವ, ಕೊಡಗು ವಿ.ವಿ ಉಪ ಕುಲಪತಿ ಪ್ರೋ. ಅಶೋಕ್ ಸಂಗಪ್ಪ ಆಲೂರ, ಹಿರಿಯ ಪತ್ರಕರ್ತ ಜಿ.ವಿ ರವಿಕುಮಾರ್, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ.ರಾಕೇಶ್ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭ ಶೈಕ್ಷಣಿಕ ಸಾಧನೆಗಾಗಿ ವಿದ್ಯಾರ್ಥಿಗಳಿಗೆ ದತ್ತಿ ನಿಧಿ ಪ್ರತಿಭಾ ಪುರಸ್ಕಾರ, ಎನ್‍ಸಿಸಿ, ಎನ್‍ಎಸ್‍ಎಸ್ ಹಾಗೂ ಕ್ರೀಡೆಯಲ್ಲಿ ಕಾಲೇಜನ್ನು ಪ್ರತಿನಿಧಿಸಿ ಗೌರವಕ್ಕೆ ಪಾತ್ರರಾದವರಿಗೆ ಗಣ್ಯರು ಪ್ರೋತ್ಸಾಹ ಧನ, ನೆನಪಿನ ಕಾಣಿಕೆ ಮತ್ತು ಪ್ರಮಾಣ ಪತ್ರಗಳನ್ನು ನೀಡಿದರು. ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನಗಳನ್ನು ವಿತರಿಸಿದರು. ಕಾಲೇಜು ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. :: ಸಾಂಸ್ಕೃತಿಕ  ಕಾರ್ಯಕ್ರಮ :: ಸಭಾ ಕಾರ್ಯಕ್ರಮದ ಬಳಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಸಮೂಹ ನೃತ್ಯ, ಹಾಡುಗಾರಿಕೆ ಮತ್ತಿತ್ತರ ಸಾಂಸ್ಕøತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾಲೇಜು ವಾರ್ಷಿಕೋತ್ಸವಕ್ಕೆ ಮೆರುಗು ತುಂಬಿದರು. ಸಭಾಂಗಣದಲ್ಲಿದ್ದ ವಿದ್ಯಾರ್ಥಿಗಳು ಚಪ್ಪಾಳೆ, ಶಿಳ್ಳೆ ಸಹಿತ ಹರ್ಷೊದ್ಘಾರಗಳಿಂದ ಕಲಾವಿದ ವಿದ್ಯಾರ್ಥಿ ಪ್ರತಿಭೆಗಳನ್ನು ಪ್ರೋತ್ಸಾಹಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.