Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೆರಿಗೆ ಹೊರೆ ಜನಸಾಮಾನ್ಯರನ್ನು ಕಂಗಾಲಾಗಿಸಿದೆ : ಕೊಡಗು ಆಮ್ ಆದ್ಮಿ ಪಾರ್ಟಿ ಅಸಮಾಧಾನ*

ಮೇ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಮೇ 28 : ಸರಕಾರ ವಿಧಿಸುತ್ತಿರುವ ತೆರಿಗೆ ಹೊರೆ ದೇಶದ ಜನಸಾಮಾನ್ಯರನ್ನು ಕಂಗಾಲಾಗಿಸಿದೆ ಎಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಜಿಲ್ಲಾ ಘಟಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಕಾನೂನು ಸಲಹೆಗಾರ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು ಮಧ್ಯ ಪ್ರಾಚ್ಯದ ಯುದ್ಧದ ಹಿನ್ನೆಲೆ ತೈಲದ ಕೊರತೆ ಇರುವುದರಿಂದ ಬೆಲೆ ಹೆಚ್ಚಳವೆನ್ನಲಾಗುತ್ತ್ತಿದೆ. ಬೆಲೆ ಹೆಚ್ಚಳ ಮಾಡಿದರೆ ಕೊರತೆ ಇರುವ ತೈಲ ಲಭ್ಯವಾಗುತ್ತದೆಯೇ ಎಂದು ಲೇವಡಿ ಮಾಡಿದರು. ತೈಲ ಬೆಲೆ ಹೆಚ್ಚಳದಿಂದ ಬೃಹತ್ ತೈಲ ಕಂಪೆನಿಗಳು ಲಾಭ ಪಡೆಯುತ್ತಿವೆ, ಇಂತಹ ವಿಚಾರಗಳನ್ನು ಜನಸಾಮಾನ್ಯರು ಪ್ರಶ್ನಿಸಬೇಕಿದೆ. ಒಂದು ಟೂತ್ ಪೇಸ್ಟ್ ಕೊಳ್ಳುವಾಗ ಅದಾನಿ ನೀಡುವಷ್ಟೆ ತೆರಿಗೆಯನ್ನು ಸಮಾಜದ ಕೆಳ ಸ್ತರದಲ್ಲಿರುವ ಜನಸಾಮಾನ್ಯರು ಕೂಡ ನೀಡುತ್ತಾರೆ. ಪ್ರಸ್ತುತ ಅತ್ಯಧಿಕ ತೆರಿಗೆ ಪಾವತಿಸುತ್ತಿರುವವರು ಜನಸಾಮಾನ್ಯರೇ ಆಗಿದ್ದಾರೆ. ಇಂದಿನ ತೆರಿಗೆಗಳು ಹೆಚ್ಚಿನ ಹೊರೆಯಾಗುತ್ತಿರುವುದು ಕಳವಳಕಾರಿ ಎಂದರು. ಪ್ರಮುಖ ರಾಜಕೀಯ ಪಕ್ಷಗಳು ಜನ ಹಿತಕ್ಕೆ ಪೂರಕವಾಗಿ ಕಾರ್ಯನಿರ್ವಹಿಸದೆ ಸ್ವಹಿತಾಸಕ್ತಿ ಮತ್ತು ಕುಟುಂಬ ರಾಜಕಾರಣದಲ್ಲಿ ತೊಡಗಿಸಿಕೊಂಡಿವೆ. ಕೇವಲ ದೇವರು ಧರ್ಮದ ವಿಚಾರಗಳನ್ನಷ್ಟೆ ಮುಂದಿರಿಸಿಕೊAಡು ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಗುಡಿ ಗೋಪುರ ದೇವಸ್ಥಾನಗಳ ಒಳಗಿರುವ ದೇವರನ್ನು ಹೊರ ತಂದು ಅವುಗಳ ಹೆಸರಿನಲ್ಲಿ ಓಟು ಪಡೆಯುವ ಪ್ರಯತ್ನಗಳು ನಡೆಯುತ್ತಿದೆ. ಆಡಳಿತ ಪಕ್ಷದ ಇಂತಹ ಧೋರಣೆಗಳನ್ನು ಜನ ಪ್ರಶ್ನಿಸುವುದು ಅತ್ಯವಶ್ಯಕವಾಗಿದೆ. ಆದರೆ ದೌರ್ಭಾಗ್ಯವೆಂದರೆ ಕೇಂದ್ರ ಸರಕಾರವನ್ನು ಪ್ರಶ್ನಿಸುವುದಕ್ಕೆ ಬದಲಾಗಿ, ಪ್ರತಿ ಪಕ್ಷಗಳನ್ನು ಪ್ರಶ್ನಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರವು ಇಂಧನ ಬೆಲೆ ಹೆಚ್ಚಳ ಮಾಡುತ್ತಿದ್ದರೆ, ರಾಜ್ಯದ ಕಾಂಗ್ರೆಸ್ ಪ್ರಮುಖರನ್ನು ನೀವೇಕೆ ಇಂಧನ ದರ ಕಡಿಮೆ ಮಾಡುತ್ತಿಲ್ಲವೆಂದು ಪ್ರಶ್ನಿಸಲಾಗುತ್ತಿದೆ ಎಂದು ವ್ಯಂಗ್ಯವಾಡಿದರು. ಆಮ್ ಆದ್ಮಿ ಪಕ್ಷಕ್ಕೆ ಯಾವುದೇ ಪಕ್ಷಗಳು ವೈರಿಗಳಲ್ಲ. ಬದಲಾಗಿ ಎದುರಾಳಿಗಳಷ್ಟೆ ಎಂದು ಸ್ಪಷ್ಟಪಡಿಸಿದ ಕೆ.ಪಿ.ಬಾಲಸುಬ್ರಹ್ಮಣ್ಯ ಅವರು, ಅದೇ ಬಿಜೆಪಿ ಎಎಪಿಯನ್ನು ಶತ್ರುವಿನಂತೆ, ವೈರಿಯಂತೆ ಕಾಣುತ್ತಿದೆ. ಪ್ರಸ್ತುತ ಕೇವಲ ಅಭಿವೃದ್ಧಿ ಕಾರ್ಯಗಳಿಂದಷ್ಟೆ ಚುನಾವಣೆ ಗೆಲ್ಲುತ್ತೇನೆ ಎನ್ನುವುದು ಮರೀಚಿಕೆ. ಧರ್ಮ ದೇವರುಗಳ ಆಧಾರದಲ್ಲಿ ಮತ ಪಡೆಯುವ ಮೂಲಕ ರಾಜಕೀಯ ಅಧಿಕಾರ ಪಡೆದು ದುಡ್ಡು ಹೊಡೆಯುವ ಪ್ರಯತ್ನವಷ್ಟೆ ನಡೆಯುತ್ತಿದೆಯೆಂದು ಆರೋಪಿಸಿದರು. ಸಂವಿಧಾನದಲ್ಲಿ ಇರುವಂತೆ ಜಾತ್ಯತೀತ ಚಿಂತನೆಗಳನ್ನು ಸಮಾಜದಲ್ಲಿ ಪಸರಿಸುವ, ಗ್ರಾಮ ಸ್ವರಾಜ್ಯವನ್ನು ಸ್ಥಾಪಿಸುವ ಚಿಂತನೆಯನ್ನು ಆಮ್ ಆದ್ಮಿ ಪಾರ್ಟಿ ಹೊಂದಿದೆ. ಜನ ಸಾಮಾನ್ಯರು ತಮ್ಮ ಸಂಕಷ್ಟಗಳನ್ನು ಮತ್ತು ಸಮಸ್ಯೆಗಳನ್ನು ಹೇಳಿಕೊಂಡರೆ ಅದರ ನೈಜತೆಯನ್ನು ಪರಿಶೀಲಿಸಿ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುವುದು ಎಂದರು. ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ ಅವರು ಮಾತನಾಡಿ ಕೊಡಗು ಜಿಲ್ಲೆಯ ಸಮಸ್ಯೆಗಳು ಹಾಗೂ ಜನಸಾಮಾನ್ಯರ ಮೂಲಭೂತ ಕೊರತೆಗಳ ಬಗ್ಗೆ ಪಕ್ಷ ಚಿಂತನೆ ಹರಿಸಲಿದೆ. ಪಕ್ಷದ ನೂತನ ಕಚೇರಿ ಸಮಸ್ಯೆಗಳ ಪರಿಹಾರಕ್ಕೆ ಸದಾ ಸಕ್ರಿಯವಾಗಿರುತ್ತದೆ ಎಂದು ತಿಳಿಸಿದರು. ಯುವ ಘಟಕದ ಅಧ್ಯಕ್ಷ ಎಂ.ಕೆ.ಆಶಿಕ್ ಮಾತನಾಡಿ, ಪಕ್ಷದ ಸದಸ್ಯತ್ವ ಅಭಿಯಾನವನ್ನು ನಡೆಸಲಿದ್ದು, ಜಿಲ್ಲೆಯ ಜನತೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ ಹಾಗೂ ಸದಸ್ಯ ಮಂಜುನಾಥ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.