Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*
  • *ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*
  • *ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*
  • *ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*
  • *ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*
  • *ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*
  • *ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*
  • *ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆಯಾ ತಾಲ್ಲೂಕು ಗುತ್ತಿಗೆದಾರರಿಗೆ ಕಾಮಗಾರಿ : ಕೊಡಗು ಗುತ್ತಿಗೆದಾರರ ಸಂಘ ನಿರ್ಧಾರ*

ಮೇ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 28 : ತಾಲ್ಲೂಕು ಮಟ್ಟದಲ್ಲಿ ನಡೆಯುವ ರೂ.50 ಲಕ್ಷಕ್ಕೆ ಒಳಪಟ್ಟ ಕಾಮಗಾರಿಗಳನ್ನು ಆಯಾ ತಾಲ್ಲೂಕಿನ ಗುತ್ತಿಗೆದಾರರೇ ಪಡೆಯಬೇಕು ಎಂದು ಈಗಾಗಲೇ ಕೊಡಗು ಜಿಲ್ಲಾ ಲೋಕೋಪಯೋಗಿ ಗುತ್ತಿಗೆದಾರರ ಸಂಘ ಮಡಿಕೇರಿ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ಸಂಘಗಳಿಗೆ ಮನವಿ ಮಾಡಿದೆ. ಇದರೊಂದಿಗೆ ಹೊರ ಜಿಲ್ಲೆಯ ಗುತ್ತಿಗೆದಾರರ ಮನವೊಲಿಸುವ ಪ್ತಯತ್ನ ಮಾಡಲಾಗುತ್ತದೆ ಎಂದು ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ವಿ.ಎ.ಲಾರೆನ್ಸ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರ ಸಂಕಷ್ಟ್ಟದ ಪರಿಹಾರಕ್ಕೆ ಪೂರಕವಾಗಿ, ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿನ 50 ಲಕ್ಷ ರೂ. ಮೊತ್ತದ ಕಾಮಗಾರಿಯ ಟೆಂಡರನ್ನು ಇತರ ತಾಲ್ಲೂಕು ಮತ್ತು ಜಿಲ್ಲೆಯವರು ಪಡೆಯದಂತೆ ಸಂಘ ಮಹತ್ವದ ನಿರ್ಣಯವನ್ನು ಕೈಗೊಂಡಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುವ ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಸಂಬoಧಿಸಿದoತೆ, ಹೊರ ಜಿಲ್ಲೆಯ ಗುತ್ತಿಗೆದಾರರು ಶೇ.25 ರಿಂದ 30 ರಷ್ಟು ಕಡಿಮೆ ಮೊತ್ತಕ್ಕೆ ಟೆಂಡರ್‌ಗಳನ್ನು ಕರೆಯುತ್ತಿರುವುದು ಸಮಸ್ಯೆಯನ್ನು ಸೃಷ್ಟಿಸಿದೆ. ಇಷ್ಟು ಕಡಿಮೆ ಮೊತ್ತಕ್ಕೆ ಟೆಂಡರ್ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿರ್ವಹಿಸುವುದು ಅಸಾಧ್ಯ. ಕಡಿಮೆ ಮೊತ್ತ ಕರೆದ ಟೆಂಡರ್ ಕಾಮಗಾರಿಗಳ ಗುಣಮಟ್ಟ ಸಂಪೂರ್ಣ ಹದಗೆಟ್ಟಿರುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವುದಕ್ಕೆ ಪೂರಕವಾಗಿ ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳ ಇಂಜಿನಿಯರ್‌ಗಳು ಕಾರ್ಯನಿರ್ವಹಿಸಬೇಕಾಗುತ್ತದೆ. ಆದರೆ, ಪ್ರಸ್ತುತ ಜಿಲ್ಲೆಯಲ್ಲಿ ಅಗತ್ಯ ಇಂಜಿನಿಯರ್‌ಗಳ ಕೊರತೆ ಇರುವುದರಿಂದ, ಕಾಮಗಾರಿಗಳ ಗುಣಮಟ್ಟದ ಮೌಲ್ಯಮಾಪನ ಸಮರ್ಪಕವಾಗಿ ನಡೆಯುತ್ತಿಲ್ಲ. ಇದನ್ನೆ ಬಂಡವಾಳವಾಗಿಸಿಕೊoಡ ಹೊರ ಜಿಲ್ಲೆಯ ಗುತ್ತಿಗೆದಾರರು, ಅತ್ಯಂತ ಕಡಿಮೆ ಮೊತ್ತಕ್ಕೆ ಟೆಂಡರ್ ಕರೆದು ಕಳಪೆ ಕಾಮಗಾರಿಗಳನ್ನು ನಿರ್ವಹಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿರುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಕೆಲವರು ನಕಲಿ ದಾಖಲೆಗಳ ಮೂಲಕ ಗುತ್ತಿಗೆಯನ್ನು ಪಡೆಯುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಈಗಾಗಲೆ 4- 5 ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಜಿಲ್ಲಾ ಸಂಘ ಕಾರ್ಯಪ್ರವೃತ್ತವಾಗಿದೆ ಮತ್ತು ಅವರ ವಿರುದ್ಧ ಪೊಲೀಸರಿಗೆ ದೂರು ನೀಡುವ ನಿಟ್ಟಿನಲ್ಲಿಯೂ ಪ್ರಯತ್ನಗಳು ನಡೆದಿದೆ ಎಂದು ಸ್ಪಷ್ಟಪಡಿಸಿದರು. ಸರಕಾರದ ಅಭಿವೃದ್ಧಿ ಕಾಮಗಾರಿಗಳನ್ನು ಕಡಿಮೆ ಮೊತ್ತಕ್ಕೆ ಟೆಂಡರ್ ಕರೆದು, ಕಳಪೆ ಗುಣಮಟ್ಟದಿಂದ ನಿರ್ವಹಿಸಲಾಗುತ್ತಿದ್ದು, ಇದನ್ನು ಪರಿಶೀಲಿಸಲು ತಾಲ್ಲೂಕು ಮಟ್ಟದಲ್ಲಿ ಸಂಘದಿoದಲೆ “ಸ್ಕ್ವಾಡ್” ರಚಿಸಿಕೊಳ್ಳಲು ಉದ್ದೇಶಿಸಲಾಗಿದೆ. ಈ ಸ್ಕ್ವಾಡ್ ಗಳ ಮೂಲಕ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ನಡೆದಿರುವ ಪ್ರಕರಣಗಳ ಬಗ್ಗೆ ಲೋಕಾಯುಕ್ತಕ್ಕೆ ದೂರನ್ನು ನೀಡಲು ಜಿಲ್ಲಾ ಸಂಘ ನಿರ್ಧರಿಸಿದೆ ಲಾರೆನ್ಸ್ ತಿಳಿಸಿದರು. ಜಿಲ್ಲೆಯ ಗುತ್ತಿಗೆದಾರರು ಹಣದ ಮುಗ್ಗಟ್ಟಿನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಾಡಿರುವ ಕೆಲಸದ ಬಿಲ್ ಗಳಿಗೆ ಸಮರ್ಪಕವಾಗಿ ಹಣ ಪಾವತಿಯಾಗಿಲ್ಲ. ಈ ಹಿಂದೆ ಪ್ರಾಕೃತಿಕ ವಿಕೋಪದ ಸಂದರ್ಭ ನಿರ್ವಹಿಸಿದ ಕಾಮಗಾರಿಗಳ ಬಿಲ್ ಹಣವೂ ದೊರಕಿಲ್ಲ. ಇವುಗಳನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ.ಎ.ರವಿ ಚಂಗಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಅರುಣ್ ಕುಮಾರ್ ಹಾಗೂ ಮಡಿಕೇರಿ ತಾಲ್ಲೂಕು ಕಾರ್ಯದರ್ಶಿ ಕೆ.ವಿ.ಕವನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧೆ: ವಿಜೇತರ ಪಟ್ಟಿ ಪ್ರಕಟ*

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ : ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಕೊಡುಗೆಗಳು*

ಸೆಪ್ಟೆಂಬರ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ NEWS DESK ಸೆ.14 : ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಕುಶಾಲನಗರದ ಖ್ಯಾತ ಜಿ…

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಸೆಪ್ಟೆಂಬರ್ 14, 2026

*ಕುಶಾಲನಗರ ಪಿ.ಎಂ.ಶ್ರೀ ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶೋತ್ಸವ ಜಾಗೃತಿ; ಪರಿಸರ ಪೂರಕ ಗಣೇಶೋತ್ಸವ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ; ಪಿ.ಓ.ಪಿ., ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಲು ಕರೆ*

ಸೆಪ್ಟೆಂಬರ್ 13, 2026

*ಮಡಿಕೇರಿ ದಸರಾ ಶೋಭಾಯಾತ್ರೆಗೆ ದಿನಾಂಕ ನಿಗದಿ : ಅ.20ರಂದು ದಶಮಂಟಪಗಳ ಮೆರವಣಿಗೆ*

ಸೆಪ್ಟೆಂಬರ್ 13, 2026

*ಗೌರಿ–ಗಣೇಶ ಹಬ್ಬ: 2,400 ವಿಶೇಷ ಬಸ್‌ಗಳ ವ್ಯವಸ್ಥೆ*

ಸೆಪ್ಟೆಂಬರ್ 13, 2026

*ಗೌರಿ ಗಣೇಶೋತ್ಸವ : ಕಾನೂನು ಪಾಲನೆಗೆ ಆದ್ಯತೆ ನೀಡಿ : ಎಸ್‌ಪಿ ಬಿಂದುಮಣಿ ಮನವಿ*

ಸೆಪ್ಟೆಂಬರ್ 13, 2026

*ಇಂಡಿಯಾ ಸ್ಕಿಲ್ : ಹೆಸರು ನೋಂದಣಿಗೆ ಅವಕಾಶ*

ಸೆಪ್ಟೆಂಬರ್ 12, 2026

*ಬೆಳ್ಳುಮಾಡು ಶ್ರೀ ಮಾದೇರಪ್ಪ ದೇವಾಲಯದ ಜೀರ್ಣೋದ್ಧಾರಕ್ಕೆ ರೂ.3 ಲಕ್ಷ ಅನುದಾನ*

ಸೆಪ್ಟೆಂಬರ್ 12, 2026

*ಸೆ.14 ರಂದು ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಣೆ*

ಸೆಪ್ಟೆಂಬರ್ 12, 2026

*ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಅಗತ್ಯ ಸಿದ್ಧತೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್.ಹಾದಿಮನಿ ಸೂಚನೆ*

ಸೆಪ್ಟೆಂಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.