
ಮಡಿಕೇರಿ ಮೇ 29 NEWS DESK : ಸೋಮವಾರಪೇಟೆ 66/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್2 ಕೊಡ್ಲಿಪೇಟೆ ಫೀಡರ್‍ನಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಮೇ, 30 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಅವರೆದಾಳು, ಬ್ಯಾಡಗೊಟ್ಟ, ದೊಡ್ಡಕುಂದ, ಚಿಕ್ಕಕುಂದ, ನೀರುಗುಂದ, ಬೆಸೂರು, ದೊಡ್ಡಭಂಡಾರ, ಕಟ್ಟೆಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ ಅವರು ಕೋರಿದ್ದಾರೆ.








