Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*
  • *ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*
  • *ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 
  • *ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*
  • *ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*
  • *ಶರಣ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ*
  • *ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನು ಕೇವಲ 3 ದಿನಗಳು ಮಾತ್ರ*
  • *ಫಲಾನುಭವಿಗಳಿಗೆ ಪರವಾನಗಿ ಹಸ್ತಾಂತರ*
  • *ಮಾಪಿಳೆತೋಡು-ಹುದಿಕೇರಿ ರಸ್ತೆ ಅಭಿವೃದ್ಧಿಗೆ ಚಾಲನೆ*
  • *ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ಆಗ್ರಹ : ಸಿಐಟಿಯುನಿಂದ `ಜಿಲ್ಲಾಧಿಕಾರಿ ಕಚೇರಿ ಚಲೋ’ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ಆಗ್ರಹ : ಸಿಐಟಿಯುನಿಂದ `ಜಿಲ್ಲಾಧಿಕಾರಿ ಕಚೇರಿ ಚಲೋ’ ಪ್ರತಿಭಟನೆ*

ಮೇ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 30 NEWS DESK : ಸರಕಾರಿ ಹಾಗೂ ಖಾಸಗಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ತರಬೇಕು ಮತ್ತು ಕೇಂದ್ರ ಸರಕಾರ ಅನುಷ್ಠಾನಗೊಳಿಸುತ್ತಿರುವ 4 ಕಾರ್ಮಿಕ ಸಂಹಿತೆಗಳನ್ನು ತಡೆದು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಕೊಡಗು ಜಿಲ್ಲಾ ಸಮಿತಿ `ಜಿಲ್ಲಾಧಿಕಾರಿ ಕಚೇರಿ ಚಲೋ’ ಪ್ರತಿಭಟನೆ ನಡೆಸಿತು. ಸಿಐಟಿಯು ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ರಾಜ್ಯದಲ್ಲಿ ಬೃಹತ್ ಸಂಖ್ಯೆಯಲ್ಲಿರುವ ಸಂಘಟಿತ, ಅಸಂಘಟಿತ ಮತ್ತು ಯೋಜನಾ ಕಾರ್ಮಿಕರ ಬದುಕನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರ ಸರಕಾರ ಜಾರಿಗೆ ತರುತ್ತಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನ ನೀಡಿರುವ ಅಧಿಕಾರವನ್ನು ರಾಜ್ಯ ಸರಕಾರ ಬಳಸಿಕೊಂಡು ಇದನ್ನು ತಡೆಯಬೇಕು. ಆ ಮೂಲಕ ಸೂಕ್ತ ತಿದ್ದುಪಡಿಗಳೊಂದಿಗೆ ನಿಯಮಾವಳಿಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದರು. ಏಪ್ರಿಲ್ 2025ರಲ್ಲಿ ಕನಿಷ್ಠ ವೇತನದ ಕರಡು ಅಧಿಸೂಚನೆ ಹೊರಡಿಸಲಾಗಿದ್ದರೂ, ಇಲ್ಲಿಯವರೆಗೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ರಾಜ್ಯದಲ್ಲಿನ ಕಾರ್ಮಿಕರಿಗೆ ನೀಡಬೇಕಾದ ವೈಜ್ಞಾನಿಕ ರೂಪದ ಕನಿಷ್ಠ ವೇತನವನ್ನು ಅಂತಿಮಗೊಳಿಸಿಲ್ಲ. 2017ರ ನಂತರ 9 ವರ್ಗಗಳಿಂದ ಪುನರ್ ವಿಮರ್ಶೆಯಾಗದಿರುವ ಕನಿಷ್ಠ ವೇತನವನ್ನು ಪೂರ್ವಾನ್ವಯವಾಗುವಂತೆ ತುಟ್ಟಿ ಭತ್ಯೆಯೊಂದಿಗೆ, ವಲಯ 3ರ ಅಕುಶಲ ಕಾರ್ಮಿಕರಿಗೆ ಮಾಸಿಕ ರೂ.31 ಸಾವಿರದಂತೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. ಪ್ರಕಟಿತ ಕನಿಷ್ಠ ವೇತನಕ್ಕಿಂತಲೂ ಕಡಿಮೆ ವೇತನ ಪಡೆಯುವ ಸರಕಾರಿ, ಖಾಸಗಿ ವಲಯಗಳಲ್ಲಿ, ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ನೌಕರರು ಹಾಗೂ ಎಲ್ಲಾ ಸ್ವರೂಪದ ಬಾಹ್ಯಮೂಲ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಕಾರ್ಮಿಕ ಸಂಹಿತೆಗಳಿಗೆ ಕಾರ್ಮಿಕರ ಪರವಾಗಿ ರಾಜ್ಯ ಸರಕಾರದ ತಿದ್ದುಪಡಿಗಳ ನಂತರವೇ ನಿಯಮಾವಳಿಗಳನ್ನು ರೂಪಿಸಿ ಜಾರಿಗೆ ತರಬೇಕು. ಖಾಯಂ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡುವ ಮೂಲಕ ಹಾಗೂ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು ಎಂದು ಪಿ.ಆರ್.ಭರತ್ ಒತ್ತಾಯಿಸಿದರು. ಬಳಿಕ ಸರಕಾರಕ್ಕೆ ಜಿಲ್ಲಾಡಳಿತದ ಮೂಲಕ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭ ಸಿಐಟಿಯು ಅಧ್ಯಕ್ಷ ಎ.ಸಿ.ಸಾಬು, ಉಪಾಧ್ಯಕ್ಷ ಕೆ.ಕೆ.ಹರಿದಾಸ್, ಸರಕಾರಿ ಆಸ್ಪತ್ರೆ ಸ್ವಚ್ಛತಾ ನೌಕರರ ಸಂಘದ ಅಧ್ಯಕ್ಷೆ ಹೆಚ್.ಕೆ.ಜಾನಕಿ, ಗ್ರಾ.ಪಂ ನೌಕರರ ಸಂಘದ ಕುಶಾಲನಗರ ತಾಲೂಕು ಕಾರ್ಯದರ್ಶಿ ಹೆಚ್.ಎಂ.ದಿನೇಶ್, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರ ಸಂಘದ ಪ್ರಮುಖರಾದ ಕೆ.ಸಿ.ಇಂದಿರಾ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ್ದ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*

ಜೂನ್ 20, 2026

*ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*

ಜೂನ್ 20, 2026

*ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 

ಜೂನ್ 20, 2026

*ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*

ಜೂನ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.20 NEWS DESK : ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳು ಉತ್ತಮ ಆರೋಗ್ಯ ಸೇವೆ ಒದಗಿಸುವುದರ ಜೊತೆಗೆ…

*ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 

ಜೂನ್ 20, 2026

*ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*

ಜೂನ್ 20, 2026

*ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*

ಜೂನ್ 19, 2026

*ಶರಣ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ*

ಜೂನ್ 19, 2026

*ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನು ಕೇವಲ 3 ದಿನಗಳು ಮಾತ್ರ*

ಜೂನ್ 19, 2026

*ಫಲಾನುಭವಿಗಳಿಗೆ ಪರವಾನಗಿ ಹಸ್ತಾಂತರ*

ಜೂನ್ 19, 2026

*ಮಾಪಿಳೆತೋಡು-ಹುದಿಕೇರಿ ರಸ್ತೆ ಅಭಿವೃದ್ಧಿಗೆ ಚಾಲನೆ*

ಜೂನ್ 19, 2026

*ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಜೂನ್ 19, 2026

*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಗಮನಹರಿಸಿ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*

ಜೂನ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.