Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅತಿಥಿ ಶಿಕ್ಷಕರು-ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ*
  • *ಅಂತರ ಕೆಐಸಿಎಂ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ*
  • *ಸೋಮವಾರಪೇಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಸಾರ್ವಜನಿಕರು ಆರೋಗ್ಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಡಾ.ಲೋಕೇಶ್ ಸಲಹೆ*
  • *ಕೊಡಗಿನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಉದಯ್ ನಿಧಿ ಸ್ಟಾಲಿನ್*
  • *ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ಆಗ್ರಹ : ಸಿಐಟಿಯುನಿಂದ `ಜಿಲ್ಲಾಧಿಕಾರಿ ಕಚೇರಿ ಚಲೋ’ ಪ್ರತಿಭಟನೆ*
  • *ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ*
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡವ ಸಮಾಜಗಳ ಒಕ್ಕೂಟ ಮನವಿ*
  • *ಶಾಸಕದ್ವಯರಿಗೆ ಸಚಿವ ಸ್ಥಾನಕ್ಕಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿಶೇಷ ಪೂಜೆ*
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮೂರ್ನಾಡು ಕೊಡವ ಸಮಾಜ ಒತ್ತಾಯ*
  • *ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ಅಂಗಾಂಶ ಕೃಷಿ ಬಾಳೆ ಬೇಸಾಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಸಾರ್ವಜನಿಕರು ಆರೋಗ್ಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಡಾ.ಲೋಕೇಶ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಸಾರ್ವಜನಿಕರು ಆರೋಗ್ಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಡಾ.ಲೋಕೇಶ್ ಸಲಹೆ*

ಮೇ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮೇ 30 NEWS DESK : ಆರೋಗ್ಯ ಸಮಸ್ಯೆಗಳು ಆರಂಭಿಕ ಹಂತದಲ್ಲೇ ಪತ್ತೆಯಾದರೆ ಚಿಕಿತ್ಸೆ ಸುಲಭವಾಗುತ್ತದೆ. ಜಿಲ್ಲಾಸ್ಪತ್ರೆಯಲ್ಲಿ ದೊರೆಯುವ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆಯ ಡೀನ್ ಡಾ.ಲೋಕೇಶ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸೋಮವಾರಪೇಟೆ ತಾಲೂಕು ಘಟಕ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ-ಬೋಧಕ ಆಸ್ಪತ್ರೆ ಹಾಗೂ ಮಾದಾಪುರ ಗ್ರಾಮ ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವ ಉದ್ದೇಶದಿಂದ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಆರೋಗ್ಯ ತಪಾಸಣೆಯನ್ನು ನಿರ್ಲಕ್ಷಿಸದೆ ನಿಯಮಿತವಾಗಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಎಂಬಿಬಿಎಸ್ ಸೇರಿದಂತೆ ಆರೋಗ್ಯ ವಿಜ್ಞಾನ ಕೋರ್ಸ್‍ಗಳು ಲಭ್ಯವಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬಹುದು ಎಂದರು. ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ನಂಜುಂಡಯ್ಯ ಮಾತನಾಡಿ, ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗೆ ಸರ್ಕಾರದಿಂದ ಹಲವು ಸೌಲಭ್ಯಗಳು ಲಭ್ಯವಿವೆ. ಗರ್ಭಧಾರಣೆಯ ಆರಂಭದಿಂದಲೇ ನಿಯಮಿತ ತಪಾಸಣೆ, ಪೌಷ್ಟಿಕ ಆಹಾರ ಹಾಗೂ ವೈದ್ಯರ ಸಲಹೆಗಳನ್ನು ಪಾಲಿಸುವುದು ತಾಯಿ ಮತ್ತು ಮಗುವಿನ ಆರೋಗ್ಯಕ್ಕೆ ಅಗತ್ಯವಾಗಿದೆ. ಬೋಧಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಸೇವೆ, ಹೆರಿಗೆ ಸೌಲಭ್ಯ, ನವಜಾತ ಶಿಶುಗಳ ಆರೈಕೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಸವಿತಾ ರೈ ಮಾತನಾಡಿ, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಎಲ್ಲಾ ರೀತಿಯ ಆರೋಗ್ಯ ಸೇವೆಗಳು ಒಂದೇ ಸೂರಿನಲ್ಲಿ ದೊರೆಯುತ್ತಿದೆ. ಅಚ್ಚಕಟ್ಟಾದ ಸೇವೆ ಸಿಗುತ್ತಿದೆ. ಗ್ರಾಮೀಣ ಜನರಿಗೆ ಸೌಲಭ್ಯ ಸಿಗಬೇಕೆಂಬ ಉದ್ದೇಶದಿಂದ ಇಂತಹ ಸ್ಥಳಗಳಲ್ಲಿ ಅರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಜನರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ವೈದ್ಯಕೀಯ ಸೇವೆಗಳ ಪ್ರಯೋಜನ ಪಡೆಯಬೇಕು ಎಂದು ಹೇಳಿದರು. ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವ ಕುಂಬೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಜನರಿಗೆ ಆರೋಗ್ಯ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಇಂತಹ ಶಿಬಿರಗಳನ್ನು ಸಂಘದ ವತಿಯಿಂದ ಆಯೋಜಿಸಲಾಗುತ್ತಿದೆ ಎಂದು ಹೇಳಿದರು. ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಜನರಿಗೆ ನೆರವಾಗುವ ಕಾರ್ಯಕ್ರಮಗಳನ್ನು ಮುಂದೆಯೂ ಹಮ್ಮಿಕೊಳ್ಳಲಾಗುವುದು ಎಂದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ನಿಯಮಿತ ವ್ಯಾಯಾಮವನ್ನು ಪ್ರತಿನಿತ್ಯ ಮಾಡಿದರೆ, ಆರೋಗ್ಯವಂತರಾಗಿರಬಹುದು. ಅರೋಗ್ಯ ಇದ್ದರೆ ಮಾತ್ರ ಕೆಲಸವನ್ನು ಬದ್ದತೆಯಿಂದ ಮಾಡಲು ಸಾಧ್ಯ ಎಂದು ಅಭಿಪ್ರಾಯಿಸಿದರು. ವೇದಿಕೆಯಲ್ಲಿ ಪಂಚಾಯಿತಿ ಆಡಳಿತಾಧಿಕಾರಿ ಹೇಮಂತ್, ಪಿಡಿಒ ರವಿ, ಕರವೇ ಅಧ್ಯಕ್ಷ ಬಬಿನ್ ನಾಗಂಡ ಇದ್ದರು. ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಮಹಿಳಾ ಮತ್ತು ಮಕ್ಕಳ ಆರೋಗ್ಯ ತಪಾಸಣೆ, ಕೀಲು, ನೇತ್ರ, ಮಾನಸಿಕ, ಚರ್ಮ, ಸರ್ಜರಿ ಸೇರಿದಂತೆ ವಿವಿಧ ಸೇವೆಗಳನ್ನು ಒದಗಿಸಲಾಯಿತು. ವೈದ್ಯರು ಸಾರ್ವಜನಿಕರ ಆರೋಗ್ಯ ಸಮಸ್ಯೆಗಳನ್ನು ಆಲಿಸಿ ಅಗತ್ಯ ಸಲಹೆ ನೀಡಿದರು. 373 ಮಂದಿ ಪರೀಕ್ಷೆ ಮಾಡಿಸಿಕೊಂಡರು. ಸಾರ್ವಜನಿಕರು, ಪಂಚಾಯಿತಿ ಸಿಬ್ಬಂದಿಗಳು ಮತ್ತು ಪತ್ರಕರ್ತರು ರಕ್ತದಾನ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅತಿಥಿ ಶಿಕ್ಷಕರು-ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ*

ಮೇ 30, 2026

*ಅಂತರ ಕೆಐಸಿಎಂ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ*

ಮೇ 30, 2026

*ಕೊಡಗಿನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಉದಯ್ ನಿಧಿ ಸ್ಟಾಲಿನ್*

ಮೇ 30, 2026

*ಅಂತರ ಕೆಐಸಿಎಂ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ*

ಮೇ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 30 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಇವರ ವತಿಯಿಂದ ನಡೆಸಿರುವ ಅಂತರ ಕೆಐಸಿಎಂ…

*ಸೋಮವಾರಪೇಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಸಾರ್ವಜನಿಕರು ಆರೋಗ್ಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಡಾ.ಲೋಕೇಶ್ ಸಲಹೆ*

ಮೇ 30, 2026

*ಕೊಡಗಿನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಉದಯ್ ನಿಧಿ ಸ್ಟಾಲಿನ್*

ಮೇ 30, 2026

*ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ಆಗ್ರಹ : ಸಿಐಟಿಯುನಿಂದ `ಜಿಲ್ಲಾಧಿಕಾರಿ ಕಚೇರಿ ಚಲೋ’ ಪ್ರತಿಭಟನೆ*

ಮೇ 30, 2026

*ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ*

ಮೇ 30, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡವ ಸಮಾಜಗಳ ಒಕ್ಕೂಟ ಮನವಿ*

ಮೇ 30, 2026

*ಶಾಸಕದ್ವಯರಿಗೆ ಸಚಿವ ಸ್ಥಾನಕ್ಕಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿಶೇಷ ಪೂಜೆ*

ಮೇ 30, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮೂರ್ನಾಡು ಕೊಡವ ಸಮಾಜ ಒತ್ತಾಯ*

ಮೇ 30, 2026

*ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ಅಂಗಾಂಶ ಕೃಷಿ ಬಾಳೆ ಬೇಸಾಯ*

ಮೇ 29, 2026

*ಸೋಮವಾರಪೇಟೆ : ಮೇ 30 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.