Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ, ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ : ಜೂ.3 ರಂದು ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*
  • *ಡಾ.ಮಂತರ್ ಗೌಡಗೆ ಸಚಿವ ಸ್ಥಾನ ನೀಡಲು ಒಕ್ಕಲಿಗರ ಸಂಘ ಒತ್ತಾಯ*
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ*
  • *ಕೊಡ್ಲಿಪೇಟೆ ಹಲಸಿನಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು : ಎಸಿ ನಿತಿನ್ ಚಕ್ಕಿ*
  • *ಅತಿಥಿ ಶಿಕ್ಷಕರು-ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ*
  • *ಅಂತರ ಕೆಐಸಿಎಂ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ*
  • *ಸೋಮವಾರಪೇಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಸಾರ್ವಜನಿಕರು ಆರೋಗ್ಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಡಾ.ಲೋಕೇಶ್ ಸಲಹೆ*
  • *ಕೊಡಗಿನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಉದಯ್ ನಿಧಿ ಸ್ಟಾಲಿನ್*
  • *ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ಆಗ್ರಹ : ಸಿಐಟಿಯುನಿಂದ `ಜಿಲ್ಲಾಧಿಕಾರಿ ಕಚೇರಿ ಚಲೋ’ ಪ್ರತಿಭಟನೆ*
  • *ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ, ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ : ಜೂ.3 ರಂದು ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ, ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ : ಜೂ.3 ರಂದು ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*

ಮೇ 31, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 31 : ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಸ್ಥಳೀಯ ಆದಿಮಸಂಜಾತ ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ ಮಾಡಬೇಕು, 2027ರ ಜನಗಣತಿ ಹಾಗೂ ರಾಷ್ಟ್ರೀಯ ಜಾತಿ ಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಒದಗಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಜೂ.3 ರಂದು ಮಡಿಕೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೆಳಿಗ್ಗೆ 10.30 ಗಂಟೆಗೆ ಸತ್ಯಾಗ್ರಹ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು, ಗೃಹ ಸಚಿವರು, ಅಧ್ಯಕ್ಷರು, ಜನಸಂಖ್ಯಾ ಬದಲಾವಣೆ ಕುರಿತ ಉನ್ನತ ಮಟ್ಟದ ಸಮಿತಿ (High Level Committee on Demographic Change ) (H-LCDC), ಭಾರತ ಸರ್ಕಾರ, ನವದೆಹಲಿ, ಜನಗಣತಿ ಆಯುಕ್ತರು ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಮತದಾರರ ಪಟ್ಟಿಯಲ್ಲಿ ಸಂಶಯಾಸ್ಪದ ಪೌರತ್ವ ಹೊಂದಿ ವವರನ್ನು ಸೇರ್ಪಡೆಗೊಳಿಸುತ್ತಿರುವುದರಿಂದ ಕೊಡವ ಭೂಮಿಯು ದೊಡ್ಡ ಪ್ರಮಾಣದ ಜನಸಂಖ್ಯಾ ಬದಲಾವಣೆಯನ್ನು ಎದುರಿಸುತ್ತಿದೆ. ಈ ಅಕ್ರಮ ಮತದಾರರ ಗುರುತಿನ ಚೀಟಿಗಳೇ ಕೊಡವರ ರಾಜಕೀಯ ಅಸ್ತಿತ್ವದ ವಿರೂಪಕ್ಕೆ ಮೂಲ ಕಾರಣವಾಗಿದೆ. ಆದ್ದರಿಂದ ಪ್ರತಿಯೊಬ್ಬ ಮತದಾರನನ್ನು ಭೌತಿಕವಾಗಿ ಪರಿಶೀಲಿಸಲು ಕೊಡಗು ಜಿಲ್ಲೆಯಲ್ಲಿ ಬೂತ್ ಮಟ್ಟದ ‘ವಿಶೇಷ ತೀವ್ರ ಪರಿಷ್ಕರಣೆ’ ನಡೆಸಬೇಕು. ಕೊಡವ ಭೂಮಿಯ ಮಣ್ಣಿಗೆ ಸಂಬಂಧಿಸಿದ 1971ರ ಪೂರ್ವದ ಸಿಂಧು ಪೌರತ್ವ/ಪೂರ್ವಜರ ದಾಖಲೆಗಳನ್ನು ಸಲ್ಲಿಸಲು ವಿಫಲರಾಗುವ ಎಲ್ಲಾ ಅಕ್ರಮ ಮತದಾರರನ್ನು ತಕ್ಷಣವೇ ಪಟ್ಟಿಯಿಂದ ಕೈಬಿಡಬೇಕು. ಅಕ್ರಮ ಮತದಾರರನ್ನು ಸೇರಿಸಲು ನೆರವಾದ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಿಮಿನಲ್ ಕಾನೂನು ಕ್ರಮ ಜರುಗಿಸಬೇಕು. ಸ್ಥಳೀಯ ಆದಿಮಸಂಜಾತ ಕೊಡವರ ಹೆಸರುಗಳ ರದ್ಧತಿಯನ್ನು ತಡೆಗಟ್ಟುವುದು ಮತ್ತು ಅವರ ಕಾನೂನುಬದ್ಧತೆಯನ್ನು ದೃಢೀಕರಿಸಬೇಕು. ವಲಸೆ, ಉದ್ಯೋಗ ಮತ್ತು ಭೂ ದಾಖಲೆಗಳ ಕೊರತೆಯಿಂದಾಗಿ, ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ನೈಜ ಕೊಡವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಹುನ್ನಾರ ನಡೆಯುವ ಸಂಭವ ಹೆಚ್ಚಾಗಿದೆ. ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಅಡಿಯಲ್ಲಿ ‘ವಿಶೇಷ ಕೊಡವ ಪರಿಶೀಲನಾ ಕೋಶ’ವನ್ನು ಸ್ಥಾಪಿಸಬೇಕು. ಈ ಕೋಶವು ವಂಶಾವಳಿ, ಕುಟುಂಬ-ಒಕ್ಕ, ಮನೆ-ಪೆದ, ಕುಲದ ದಾಖಲೆಗಳು ಮತ್ತು ಸಮುದಾಯದ ದೃಢೀಕರಣದ ಆಧಾರದ ಮೇಲೆ ನೈಜ ಕೊಡವ ಮತದಾರರನ್ನು ಗುರುತಿಸಬೇಕು. ಸೂಕ್ತ ಭೌತಿಕ ಪರಿಶೀಲನೆ ಮತ್ತು ವಿಚಾರಣೆಗೆ ಅವಕಾಶ ನೀಡದೆ ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ಕೊಡವ ಮತದಾರನ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಬಾರದು. 2027ರ ಜನಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಕೊಡವರು ಪ್ರತ್ಯೇಕ ಆದಿಮಸಂಜಾತ ಏಕ-ಜನಾಂಗೀಯ ಪ್ರಜಾಸಮೂಹವಾಗಿದ್ದು, ಅವರು ಯಾವುದೇ ಇತರ ಗುಂಪಿನ ಉಪಜಾತಿಯಲ್ಲ. ಮುಂಬರುವ 2027 ರ ರಾಷ್ಟ್ರೀಯ ಜನಗಣತಿ ಮತ್ತು ರಾಷ್ಟ್ರೀಯ ಜಾತಿ ಗಣತಿಯಲ್ಲಿ “ಕೊಡವ” ಜನಾಂಗಕ್ಕೆ ಪ್ರತ್ಯೇಕ ಕೋಡ್ ಮತ್ತು ಕಾಲಂ ನೀಡಬೇಕು. ಭಾರತದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರು ಕೊಡವರ ಪಾರಂಪರಿಕ ವಂಶಾವಳಿ ಮತ್ತು ವಿಶಿಷ್ಟ ಜನಾಂಗೀಯತೆಯ ಕುರಿತಾದ ಪ್ರಸಿದ್ಧ ಮಾನವಶಾಸ್ತ್ರಜ್ಞ ಡಾ. ಎಂ.ಎ. ಕಲಾಂ ಅವರ ಸಂಶೋಧನಾ ಪ್ರಬಂಧವನ್ನು ಹಾಗೂ 1871-72 ರಿಂದ 1931 ರವರೆಗಿನ ಐತಿಹಾಸಿಕ ಜನಗಣತಿ ದಾಖಲೆಗಳನ್ನು ಪ್ರಮಾಣೀಕರಣವಾಗಿ ಪರಿಗಣಿಸಬೇಕು. ಡಾ. ಸುಬ್ರಮಣಿಯನ್ ಸ್ವಾಮಿಯವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಆಶಯದಂತೆ, ಕೊಡವರನ್ನು “ಆದಿಮಸಂಜಾತ ಬುಡಕಟ್ಟು ಜನಾಂಗ” ಎಂದು ಗುರುತಿಸಿ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತವನ್ನು ನೀಡಬೇಕು. ಸಂವಿಧಾನದ ವಿಧಿ 25 ಮತ್ತು 26 ರ ಅಡಿಯಲ್ಲಿ ಕೊಡವರ ಧಾರ್ಮಿಕ ಆಚರಣೆಯ ಅವಿಭಾಜ್ಯ ಅಂಗವಾದ ‘ತೋಕ್ ಸಂಸ್ಕಾರ ಮತ್ತು ಆಯುಧ ಹಕ್ಕನ್ನು’ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಪರಿಗಣಿಸಬೇಕು. ವಿಶ್ವಸಂಸ್ಥೆಯ ಆದಿಮಸಂಜಾತ ಆಸ್ತಿ ಹಕ್ಕುಗಳ ಅಡಿಯಲ್ಲಿ ಕೊಡವರ ಪಾರಂಪರಿಕ ಭೂಮಿಯನ್ನು ಸಂರಕ್ಷಿಸಬೇಕು. ಸಿಕ್ಕಿಂನ ‘ಸಂಘ’ ಮಾದರಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಸಂಸತ್ ಮತ್ತು ವಿಧಾನಸಭಾ ಕ್ಷೇತ್ರವನ್ನು ಮರುವಿಂಗಡಿಸಬೇಕು. ಕೊಡವ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಮತ್ತು ‘ದೇವಟ್ ಪರಂಬ್’ ಜನಾಂಗೀಯ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಹೋಲೋಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು. ವಿಕೃತ ಇತಿಹಾಸಕಾರನೊಬ್ಬ ಕೊಡವರ ಇತಿಹಾಸವನ್ನು ಅತ್ಯಂತ ವಿಕೃತ ನಿರೂಪಣೆಗಳೊಂದಿಗೆ ಕಲುಷಿತಗೊಳಿಸಿದ್ದಾನೆ. ಈ ನಿಂದನಾತ್ಮಕ ಇತಿಹಾಸವನ್ನು ಅಧಿಕೃತವಾಗಿ ರದ್ದುಗೊಳಿಸಬೇಕು ಮತ್ತು ಆ ವಿನಾಶಕಾರಿ ಬೇಜವಾಬ್ದಾರಿ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸತ್ಯಾಗ್ರಹದ ಸಂದರ್ಭ ಒತ್ತಾಯಿಸಲಾಗುವುದು ಎಂದು ಎನ್.ಯು.ನಾಚಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಡಾ.ಮಂತರ್ ಗೌಡಗೆ ಸಚಿವ ಸ್ಥಾನ ನೀಡಲು ಒಕ್ಕಲಿಗರ ಸಂಘ ಒತ್ತಾಯ*

ಮೇ 31, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ*

ಮೇ 31, 2026

*ಕೊಡ್ಲಿಪೇಟೆ ಹಲಸಿನಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು : ಎಸಿ ನಿತಿನ್ ಚಕ್ಕಿ*

ಮೇ 30, 2026

*ಡಾ.ಮಂತರ್ ಗೌಡಗೆ ಸಚಿವ ಸ್ಥಾನ ನೀಡಲು ಒಕ್ಕಲಿಗರ ಸಂಘ ಒತ್ತಾಯ*

ಮೇ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 31 : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸಚಿವ ಸಂಪುಟದಲ್ಲಿ…

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಒತ್ತಾಯ*

ಮೇ 31, 2026

*ಕೊಡ್ಲಿಪೇಟೆ ಹಲಸಿನಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ : ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಹಾಗೂ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು : ಎಸಿ ನಿತಿನ್ ಚಕ್ಕಿ*

ಮೇ 30, 2026

*ಅತಿಥಿ ಶಿಕ್ಷಕರು-ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ*

ಮೇ 30, 2026

*ಅಂತರ ಕೆಐಸಿಎಂ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ*

ಮೇ 30, 2026

*ಸೋಮವಾರಪೇಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ : ಸಾರ್ವಜನಿಕರು ಆರೋಗ್ಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ : ಡಾ.ಲೋಕೇಶ್ ಸಲಹೆ*

ಮೇ 30, 2026

*ಕೊಡಗಿನಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಉದಯ್ ನಿಧಿ ಸ್ಟಾಲಿನ್*

ಮೇ 30, 2026

*ಕನಿಷ್ಠ ವೇತನಕ್ಕೆ ವೈಜ್ಞಾನಿಕ ರೂಪದ ನಿಯಮ ಜಾರಿಗೆ ಆಗ್ರಹ : ಸಿಐಟಿಯುನಿಂದ `ಜಿಲ್ಲಾಧಿಕಾರಿ ಕಚೇರಿ ಚಲೋ’ ಪ್ರತಿಭಟನೆ*

ಮೇ 30, 2026

*ಬಾವಿಯಲ್ಲಿ ವೃದ್ಧೆಯ ಮೃತದೇಹ ಪತ್ತೆ*

ಮೇ 30, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡವ ಸಮಾಜಗಳ ಒಕ್ಕೂಟ ಮನವಿ*

ಮೇ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.