Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಲೇಖಕ ಹೇಮಂತ್ ಪಾರೇರ ರಚಿಸಿರುವ ‘ಶಕುನದ ಹಕ್ಕಿ’ ಕಾದಂಬರಿ ಬಿಡುಗಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಲೇಖಕ ಹೇಮಂತ್ ಪಾರೇರ ರಚಿಸಿರುವ ‘ಶಕುನದ ಹಕ್ಕಿ’ ಕಾದಂಬರಿ ಬಿಡುಗಡೆ

ಜೂನ್ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಜೂ.1 : ಲೇಖಕ ಹೇಮಂತ್ ಪಾರೇರ ರಚಿಸಿರುವ ‘ಶಕುನದ ಹಕ್ಕಿ’ ಕಾದಂಬರಿ ನಗರದಲ್ಲಿ ಬಿಡುಗಡೆಗೊಂಡಿತು. ನಗರದ ಪತ್ರಿಕಾ ಭವನದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.ಅನಂತಶಯನ ಅವರು ಕಾದಂಬರಿಯನ್ನು ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಅವರು ಗ್ರಾಮೀಣ ಸೊಗಡನ್ನು ಪ್ರೀತಿಸುವ ಕಾದಂಬರಿಗಳು ಹೆಚ್ಚು ಹೆಚ್ಚು ಬರಬೇಕು ಎಂದರು. ಶಕುನದ ಹಕ್ಕಿ ಕಾದಂಬರಿ ಗ್ರಾಮೀಣ ಜನರ ಜೀವನ, ಜನರ ಭಾವನೆ, ಶಕುನದ ಹಕ್ಕಿಯ ಕುರಿತು ಗ್ರಾಮೀಣ ಜನರಲ್ಲಿ ಇಂದಿಗೂ ಇರುವ ಆತಂಕ, ಹೆದರಿಕೆ, ಆಗುಹೋಗುಗಳು, ರಂಜನೆಗಳನ್ನು ಕಾದಂಬರಿ ಕಟ್ಟಿಕೊಡುತ್ತದೆ. ಹೀಗಾಗಿ ಪುಸ್ತಕಕ್ಕೆ “ಶಕುನದ ಹಕ್ಕಿ” ಎಂದು ಹೆಸರಿಡಲಾಗಿದೆ. ಕಾದಂಬರಿಯಲ್ಲಿ ಜಾನಪದ ಸೊಗಡು, ಶಕುನದ ಹಕ್ಕಿಯ ಕೂಗು, ಆತಂಕ, ಗ್ರಾಮೀಣ ಯುವಕರ ಬದುಕು ಅಡಕವಾಗಿದೆ. ಉತ್ತಮ ಗುಣಮಟ್ಟವನ್ನು ಹೊಂದಿರುವ “ಶಕುನದ ಹಕ್ಕಿ” ಯನ್ನು ನಗರದ ನಿವಾಸಿಗಳು ಓದಿದಲ್ಲಿ ಹಳ್ಳಿಯ ಬದುಕನ್ನು ಪ್ರೀತಿಸುವ, ಅದನ್ನು ಎದುರಿಸುವ ಅನುಭವವಾಗುತ್ತದೆ. ಇಂತಹ ಕಾದಂಬರಿಗಳು ಮತ್ತಷ್ಟು ಮೂಡಿ ಬರಲಿ ಎಂದು ಅನಂತಶಯನ ಆಶಿಸಿದರು. ಹಿರಿಯ ಸಾಹಿತಿ ಭಾರದ್ವಾಜ ಕೆ.ಆನಂದ ತೀರ್ಥ ಅವರು ಮಾತನಾಡಿ, ಕಾದಂಬರಿಯನ್ನು ಓದುಗರ ವಿಮರ್ಶೆಗೆ ಬಿಡಬೇಕು. ಓದುಗರು ಅದನ್ನು ಯಾವ ಕೋನದಿಂದ ನೋಡುತ್ತಾರೆ ಎಂಬುವುದು ಮುಖ್ಯ. ಎಲ್ಲರಿಗೂ ಎಲ್ಲವೂ ಇಷ್ಟವಾಗಬೇಕು ಎಂದೇನು ಇಲ್ಲ. ಕಾದಂಬರಿಯ ವಿಮರ್ಶೆ ಬೆಳವಣಿಗೆ ದೃಷ್ಟಿಯಿಂದ ಲೇಖಕರಿಗೂ ಅನುಕೂಲ ಮಾಡಿಕೊಡುತ್ತದೆ. ಹೇಮಂತ್ ಪಾರೇರ ಅವರು ಮತ್ತಷ್ಟು ಅಧ್ಯಯನ ನಡೆಸುವ ಮೂಲಕ ಹೆಚ್ಚಿನ ಸಂಖ್ಯೆಯ ಕೃತಿಗಳನ್ನು ರಚಿಸುವಂತಾಗಲಿ ಎಂದು ಹಾರೈಸಿದರು. ಜಾನಪದ ಪರಿಷತ್ ನ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಹಾಗೂ ಪತ್ರಕರ್ತ ಅನಿಲ್ ಹೆಚ್.ಟಿ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಸಾಹಿತಿಗಳ ಹಾಗೂ ಬರಹಗಾರರ ಕೊರತೆ ಇದೆ ಎಂಬ ಆರೋಪಗಳಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯಾಸಕ್ತರ ಹಾಗೂ ಬರಹಗಾರರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚಿನ ಸಂಖ್ಯೆಯ ಕೃತಿಗಳು ಸಾಹಿತ್ಯ ಲೋಕಕ್ಕೆ ಸೇರ್ಪಡೆಯಾಗುತ್ತಿದೆ. ಇದು ಉತ್ತಮ ಬೆಳವಣಿಗೆ ಎಂದರು. “ಶಕುನದ ಹಕ್ಕಿ” ಕಾದಂಬರಿಯಲ್ಲಿ ಹಳ್ಳಿಯ ಬದುಕು ಸುಂದರವಾಗಿ ಚಿತ್ರಣಗೊಂಡಿದೆ. ಹೇಮಂತ್ ಪಾರೇರ ಅವರು ಈಗಾಗಲೇ ಕವನ ಸಂಕಲನಗಳನ್ನು ಹೊರ ತರುವ ಮೂಲಕ ಸಾಹಿತ್ಯ ಕೃಷಿಯಲ್ಲಿ ಸಕ್ರಿಯರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಾಹಿತಿ ಸಂಗೀತ ರವಿರಾಜ್ ಅವರು ಮಾತನಾಡಿ, “ಶಕುನದ ಹಕ್ಕಿ” ಕಾದಂಬರಿಯಲ್ಲಿ ಗಟ್ಟಿತನವಿದೆ. ಬರಹವನ್ನು ಕೇವಲ ವರ್ಣನೆಗೆ ಮಾತ್ರವೇ ಸೀಮಿತಗೊಳಿಸದೆ ಸಾಮಾಜಿಕ ಬದ್ಧತೆ, ಕಳಕಳಿಯೂ ಅಡಕವಾಗಿದೆ. ಬರಹವನ್ನು ಒಂದು ಜವಾಬ್ದಾರಿ ಎಂಬುವುದನ್ನು ಲೇಖಕರು ಇಲ್ಲಿ ಮನಗಾಣಿಸಿದ್ದಾರೆ. ಸಮಾಜದ ಕೆಟ್ಟ ವ್ಯವಸ್ಥೆಯನ್ನು ಕಾದಂಬರಿಯಲ್ಲಿ ವಿರೋಧಿಸಲಾಗಿದೆ. ಕಾದಂಬರಿ ಓದುಗರನ್ನು ಕೊನೆಯವರೆಗೂ ಸೆಳೆಯುತ್ತದೆ ಎಂದರು.
“ಶಕುನದ ಹಕ್ಕಿ” ಯ ರಚನೆಕಾರ ಹೇಮಂತ್ ಪಾರೇರ ಅವರು ಮಾತನಾಡಿ, ತಮ್ಮ ಕಣ್ಣ ಮುಂದೆಯೇ ಗ್ರಾಮೀಣ ಭಾಗದಲ್ಲಿ ನಡೆದ ಜೂಜಾಟದ ನೈಜ ಘಟನೆಯನ್ನು ವಸ್ತು ವಿಷಯನ್ನಾಗಿಸಿಕೊಂಡು ಈ ಕಾದಂಬರಿ ರಚನೆಯಾಗಿದೆ ಎಂದು ವಿವರಿಸಿದರು. ಈ ಕಾದಂಬರಿಯನ್ನು ತಮ್ಮ ಸಾಹಿತ್ಯ ಗುರುಗಳಾದ ಬಿ.ಜಿ.ಅನಂತಶಯನ ಹಾಗೂ ಭಾರದ್ವಾಜ ಕೆ.ಆನಂದ ತೀರ್ಥ ಕಣಿವೆ ಅವರಿಗೆ ಅರ್ಪಿಸುವುದಾಗಿ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಜಿಲ್ಲೆಯ ವಕೀಲರಾದ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು…

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026

ಸರ್ವದೈವತ ಪದವಿ ಪೂರ್ವ ಕಾಲೇಜಿನ ಮೂರು ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

ನವೆಂಬರ್ 3, 2026

ಶಿಕ್ಷಣ ಇಲಾಖೆಯ ವಿಶೇಷ ಸಭೆ ಹಾಗೂ ಸಂವಾದಕ್ಕೆ ಜ್ಞಾನಗಂಗಾ ಶಾಲೆಯ ಬಿ.ಎಸ್. ನಿಂಗಪ್ಪ ಆಯ್ಕೆ

ನವೆಂಬರ್ 3, 2026

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ

ನವೆಂಬರ್ 3, 2026

2027ರ ಕೊಡವ ಜಮ್ಮ ಮುಸ್ಲಿಂ ಕುಟುಂಬಗಳ ಕ್ರೀಡಾ ಸಂಭ್ರಮಕ್ಕೆ ಸಿದ್ಧತೆ; ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟದ ಧ್ವಜ ಹಸ್ತಾಂತರ: ಎರಡು ಕುಟುಂಬಗಳಿಗೆ ಆತಿಥ್ಯದ ಜವಾಬ್ದಾರಿ

ನವೆಂಬರ್ 3, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಹೊಸ ವೈಭವ ತಂದುಕೊಟ್ಟ ಶಾಸಕ ಡಾ.ಮಂತರ್ ಗೌಡ : ಪ್ರಕಾಶ್ ಆಚಾರ್ಯ ಬಣ್ಣನೆ : ನಾಲ್ಕು ವರ್ಷಗಳ ದಸರಾ ಯಶಸ್ಸಿನ ಹಿಂದೆ ಶಾಸಕರ ಇಚ್ಛಾಶಕ್ತಿ ಮತ್ತು ವಿಶೇಷ ಆಸಕ್ತಿ : ದಸರಾ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ

ನವೆಂಬರ್ 3, 2026

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಅರಿಯೋಣ: ಉ.ರಾ. ನಾಗೇಶ್

ನವೆಂಬರ್ 3, 2026

ಕುಶಾಲನಗರದಲ್ಲಿ ಸ್ವಚ್ಛತಾ ಜಾಗೃತಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಇನ್ನರ್ ವೀಲ್ ಸಂಸ್ಥೆಯಿಂದ ಕಸದ ಬುಟ್ಟಿ ಕೊಡುಗೆ

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.