
ಮಡಿಕೇರಿ ಜೂ.1 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ 11ನೇ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮವು ಬಲಂಬೇರಿಯಲ್ಲಿರುವ ಪಾಲಂದಿರ ಐನ್ ಮನೆಯಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಪತ್ನಿ ಕಾಂಚನ್ ಪೊನ್ನಣ್ಣ ಅವರು ಭಾಗವಹಿಸಿ, ಶುಭಹಾರೈಸಿದರು. ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಪಾಲಂದಿರ ಕುಟುಂಬದ ಪಟ್ಟೆದಾರರಾದ ನಂಜಪ್ಪ, ಪಾಲಂದಿರ ಕುಟುಂಬಸ್ಥರು, ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.









