
ಮಡಿಕೇರಿ NEWS DESK ಜೂ.2 : ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರ ರಚನೆಯ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ತೀಯನ್ ಮಹಾಸಭಾ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭಾದ ಸಂಘಟನಾ ಕಾರ್ಯದರ್ಶಿ ಸುದರ್ಶನ್ ಎನ್.ಸಿ ಅವರು ದಕ್ಷ ಆಡಳಿತಕ್ಕೆ ಹೆಸರಾಗಿರುವ ಜಿಲ್ಲೆಯ ಇಬ್ಬರು ಶಾಸಕರು ಸಚಿವ ಸ್ಥಾನವನ್ನು ಅಲಂಕರಿಸಲು ಸಮರ್ಥರಾಗಿದ್ದಾರೆ. ಇವರ ಸೇವೆ ರಾಜ್ಯ ಮಟ್ಟಕ್ಕೆ ವ್ಯಾಪಿಸಲು ಸಚಿವ ಸ್ಥಾನವನ್ನು ನೀಡುವುದು ಸೂಕ್ತ ಎಂದು ತಿಳಿಸಿದ್ದಾರೆ. ಕೊಡಗಿನ ಅಭಿವೃದ್ಧಿಗೆ ಆದ್ಯತೆ ನೀಡಿರುವ ಶಾಸಕರು ಕಳೆದ ಮೂರು ವರ್ಷಗಳಲ್ಲಿ ಅನೇಕ ಪ್ರಗತಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಎಲ್ಲಾ ಸಮುದಾಯವನ್ನು ಒಗ್ಗಟ್ಟಿನಿಂದ ಮುನ್ನಡೆಸುತ್ತಿದ್ದು, ಪ್ರತಿಯೊಂದು ಜನಾಂಗದ ಶ್ರೇಯೋಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ಇವರಿಬ್ಬರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ, ಅಲ್ಲದೆ ಜನಪರ ಕಾರ್ಯಗಳು ಅನುಷ್ಠಾನಗೊಳ್ಳಲಿದೆ. ನೂತನ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಇಬ್ಬರು ಸಜ್ಜನ ರಾಜಕಾರಣಿಗಳಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ಸಚಿವರಿಲ್ಲ ಎನ್ನುವ ಕೊಡಗಿನ ಕೊರತೆಯನ್ನು ತುಂಬಬೇಕು ಎಂದು ಸುದರ್ಶನ್ ಎನ್.ಸಿ ಮನವಿ ಮಾಡಿದ್ದಾರೆ.








