
ಮಡಿಕೇರಿ NEWS DESK ಜೂ.2 : ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾ ವೈ. ಅವರಿಗೆ ಉತ್ತಮ ಸೇವೆಯನ್ನು ಪರಿಗಣಿಸಿ ಜ್ಞಾನಜ್ಯೋತಿ ಸಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಟ್ರಸ್ಟ್ “ಸಮಾಜ ಸೇವಾ ರತ್ನ” ಪ್ರಶಸ್ತಿಯನ್ನು ನೀಡಿ ಗೌರವಿಸಿತು.
ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆದ “ನಾಡು-ನುಡಿ ಸಾಂಸ್ಕೃತಿಕ ಉತ್ಸವ 2026” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ.ಮಮತಾ ವೈ. ಅವರು ಈ ಹಿಂದೆ ಡಾ.ಬಿ.ಆರ್.ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಡಿಕೇರಿ ಘಟಕದಿಂದ ಉತ್ತಮ ಸೇವಾ ಪ್ರಶಸ್ತಿಯನ್ನು ಪಡೆದಿದ್ದಾರೆ.








