Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ಆಗ್ರಹ : ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ಆಗ್ರಹ : ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*

ಜೂನ್ 3, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.3 : ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ‘ವಿಶೇಷ ತೀವ್ರ ಪರಿಷ್ಕರಣೆ’ ಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಸ್ಥಳೀಯ ಆದಿಮಸಂಜಾತ ಕೊಡವರ ಚುನಾವಣಾ ಹಕ್ಕುಗಳ ರಕ್ಷಣೆ ಮಾಡಬೇಕು, 2027ರ ಜನಗಣತಿ ಹಾಗೂ ರಾಷ್ಟಿçÃಯ ಜಾತಿ ಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಒದಗಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿಯಲ್ಲಿ ಶಾಂತಿಯುತ ಸತ್ಯಾಗ್ರಹ ನಡೆಸಿತು. ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಮತದಾರರ ಪಟ್ಟಿಯಲ್ಲಿ ಸಂಶಯಾಸ್ಪದ ಪೌರತ್ವ ಹೊಂದಿರುವವರನ್ನು ಸೇರ್ಪಡೆಗೊಳಿಸುತ್ತಿರುವುದರಿಂದ ಕೊಡವ ಭೂಮಿಯು ದೊಡ್ಡ ಪ್ರಮಾಣದ ಜನಸಂಖ್ಯಾ ಬದಲಾವಣೆಯನ್ನು ಎದುರಿಸುತ್ತಿದೆ. ಈ ಅಕ್ರಮ ಮತದಾರರ ಗುರುತಿನ ಚೀಟಿಗಳೇ ಕೊಡವರ ರಾಜಕೀಯ ಅಸ್ತಿತ್ವದ ವಿರೂಪಕ್ಕೆ ಮೂಲ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರತಿಯೊಬ್ಬ ಮತದಾರನನ್ನು ಭೌತಿಕವಾಗಿ ಪರಿಶೀಲಿಸಲು ಕೊಡಗು ಜಿಲ್ಲೆಯಲ್ಲಿ ಬೂತ್ ಮಟ್ಟದ ‘ವಿಶೇಷ ತೀವ್ರ ಪರಿಷ್ಕರಣೆ’ ನಡೆಸಬೇಕು. ಕೊಡವ ಭೂಮಿಯ ಮಣ್ಣಿಗೆ ಸಂಬAಧಿಸಿದ 1971ರ ಪೂರ್ವದ ಸಿಂಧು ಪೌರತ್ವ/ಪೂರ್ವಜರ ದಾಖಲೆಗಳನ್ನು ಸಲ್ಲಿಸಲು ವಿಫಲರಾಗುವ ಎಲ್ಲಾ ಅಕ್ರಮ ಮತದಾರರನ್ನು ತಕ್ಷಣವೇ ಪಟ್ಟಿಯಿಂದ ಕೈಬಿಡಬೇಕು. ಅಕ್ರಮ ಮತದಾರರನ್ನು ಸೇರಿಸಲು ನೆರವಾದ ಅಧಿಕಾರಿಗಳು ಮತ್ತು ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಿಮಿನಲ್ ಕಾನೂನು ಕ್ರಮ ಜರುಗಿಸಬೇಕು. ಸ್ಥಳೀಯ ಆದಿಮಸಂಜಾತ ಕೊಡವರ ಹೆಸರುಗಳ ರದ್ಧತಿಯನ್ನು ತಡೆಗಟ್ಟುವುದು ಮತ್ತು ಅವರ ಕಾನೂನುಬದ್ಧತೆಯನ್ನು ದೃಢೀಕರಿಸಬೇಕು. ವಲಸೆ, ಉದ್ಯೋಗ ಮತ್ತು ಭೂ ದಾಖಲೆಗಳ ಕೊರತೆಯಿಂದಾಗಿ, ಮತದಾರರ ಪಟ್ಟಿ ಪರಿಷ್ಕರಣೆ ಸಮಯದಲ್ಲಿ ನೈಜ ಕೊಡವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಹುನ್ನಾರ ನಡೆಯುವ ಸಂಭವ ಹೆಚ್ಚಾಗಿದೆ. ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಅಡಿಯಲ್ಲಿ ‘ವಿಶೇಷ ಕೊಡವ ಪರಿಶೀಲನಾ ಕೋಶ’ವನ್ನು ಸ್ಥಾಪಿಸಬೇಕು. ಈ ಕೋಶವು ವಂಶಾವಳಿ, ಕುಟುಂಬ-ಒಕ್ಕ, ಮನೆ-ಪೆದ, ಕುಲದ ದಾಖಲೆಗಳು ಮತ್ತು ಸಮುದಾಯದ ದೃಢೀಕರಣದ ಆಧಾರದ ಮೇಲೆ ನೈಜ ಕೊಡವ ಮತದಾರರನ್ನು ಗುರುತಿಸಬೇಕು. ಸೂಕ್ತ ಭೌತಿಕ ಪರಿಶೀಲನೆ ಮತ್ತು ವಿಚಾರಣೆಗೆ ಅವಕಾಶ ನೀಡದೆ ಯಾವುದೇ ಕಾರಣಕ್ಕೂ ಒಬ್ಬನೇ ಒಬ್ಬ ಕೊಡವ ಮತದಾರನ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಬಾರದು. 2027ರ ಜನಗಣತಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಕೋಡ್ ಮತ್ತು ಕಾಲಂ ಕೊಡವರು ಪ್ರತ್ಯೇಕ ಆದಿಮಸಂಜಾತ ಏಕ-ಜನಾಂಗೀಯ ಪ್ರಜಾಸಮೂಹವಾಗಿದ್ದು, ಅವರು ಯಾವುದೇ ಇತರ ಗುಂಪಿನ ಉಪಜಾತಿಯಲ್ಲ. ಮುಂಬರುವ 2027 ರ ರಾಷ್ಟ್ರೀಯ ಜನಗಣತಿ ಮತ್ತು ರಾಷ್ಟ್ರೀಯ ಜಾತಿ ಗಣತಿಯಲ್ಲಿ “ಕೊಡವ” ಜನಾಂಗಕ್ಕೆ ಪ್ರತ್ಯೇಕ ಕೋಡ್ ಮತ್ತು ಕಾಲಂ ನೀಡಬೇಕು. ಭಾರತದ ರಿಜಿಸ್ಟಾçರ್ ಜನರಲ್ ಮತ್ತು ಜನಗಣತಿ ಆಯುಕ್ತರು ಕೊಡವರ ಪಾರಂಪರಿಕ ವಂಶಾವಳಿ ಮತ್ತು ವಿಶಿಷ್ಟ ಜನಾಂಗೀಯತೆಯ ಕುರಿತಾದ ಪ್ರಸಿದ್ಧ ಮಾನವ ಶಾಸ್ತ್ರಜ್ಞ ಡಾ. ಎಂ.ಎ. ಕಲಾಂ ಅವರ ಸಂಶೋಧನಾ ಪ್ರಬಂಧವನ್ನು ಹಾಗೂ 1871-72 ರಿಂದ 1931 ರವರೆಗಿನ ಐತಿಹಾಸಿಕ ಜನಗಣತಿ ದಾಖಲೆಗಳನ್ನು ಪ್ರಮಾಣೀಕರಣವಾಗಿ ಪರಿಗಣಿಸಬೇಕು. ಡಾ. ಸುಬ್ರಮಣಿಯನ್ ಸ್ವಾಮಿಯವರು ಕರ್ನಾಟಕ ಉಚ್ಚ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಆಶಯದಂತೆ, ಕೊಡವರನ್ನು “ಆದಿಮಸಂಜಾತ ಬುಡಕಟ್ಟು ಜನಾಂಗ” ಎಂದು ಗುರುತಿಸಿ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವಯಂ ಆಡಳಿತವನ್ನು ನೀಡಬೇಕು. ಸಂವಿಧಾನದ ವಿಧಿ 25 ಮತ್ತು 26 ರ ಅಡಿಯಲ್ಲಿ ಕೊಡವರ ಧಾರ್ಮಿಕ ಆಚರಣೆಯ ಅವಿಭಾಜ್ಯ ಅಂಗವಾದ ‘ತೋಕ್ ಸಂಸ್ಕಾರ ಮತ್ತು ಆಯುಧ ಹಕ್ಕನ್ನು’ ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಪರಿಗಣಿಸಬೇಕು.
ವಿಶ್ವಸಂಸ್ಥೆಯ ಆದಿಮಸಂಜಾತ ಆಸ್ತಿ ಹಕ್ಕುಗಳ ಅಡಿಯಲ್ಲಿ ಕೊಡವರ ಪಾರಂಪರಿಕ ಭೂಮಿಯನ್ನು ಸಂರಕ್ಷಿಸಬೇಕು. ಸಿಕ್ಕಿಂನ ‘ಸಂಘ’ ಮಾದರಿಯಲ್ಲಿ ಕೊಡವರಿಗಾಗಿ ಪ್ರತ್ಯೇಕ ಸಂಸತ್ ಮತ್ತು ವಿಧಾನಸಭಾ ಕ್ಷೇತ್ರವನ್ನು ಮರುವಿಂಗಡಿಸಬೇಕು. ಕೊಡವ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಮತ್ತು ‘ದೇವಟ್ ಪರಂಬ್’ ಜನಾಂಗೀಯ ಹತ್ಯಾಕಾಂಡವನ್ನು ವಿಶ್ವಸಂಸ್ಥೆಯ ಹೋಲೋಕಾಸ್ಟ್ ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು ಎಂದು ಎನ್.ಯು.ನಾಚಪ್ಪ ಒತ್ತಾಯಿಸಿದರು. ವಿಕೃತ ಇತಿಹಾಸಕಾರನೊಬ್ಬ ಕೊಡವರ ಇತಿಹಾಸವನ್ನು ಅತ್ಯಂತ ವಿಕೃತ ನಿರೂಪಣೆಗಳೊಂದಿಗೆ ಕಲುಷಿತಗೊಳಿಸಿದ್ದಾನೆ. ಈ ನಿಂದನಾತ್ಮಕ ಇತಿಹಾಸವನ್ನು ಅಧಿಕೃತವಾಗಿ ರದ್ದುಗೊಳಿಸಬೇಕು ಮತ್ತು ಆ ವಿನಾಶಕಾರಿ ಬೇಜವಾಬ್ದಾರಿ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಷ್ಟçಪತಿಗಳು, ಪ್ರಧಾನಮಂತ್ರಿಗಳು, ಗೃಹ ಸಚಿವರು, ಅಧ್ಯಕ್ಷರು, ಜನಸಂಖ್ಯಾ ಬದಲಾವಣೆ ಕುರಿತ ಉನ್ನತ ಮಟ್ಟದ ಸಮಿತಿ, ಜನಗಣತಿ ಆಯುಕ್ತರು ಹಾಗೂ ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಿದರು. ಚೋಳಪಂಡ ಜ್ಯೋತಿ ನಂಜಪ್ಪ, ಲೆಫ್ಟಿನೆಂಟ್ ಕರ್ನಲ್ ಬಿ.ಎಂ.ಪಾರ್ವತಿ, ಮುದ್ದಿಯಡ ಲೀಲಾವತಿ, ಮೆ|| ಅಳಮಂಡ ಜೈ ಗಣಪತಿ, ಪಟ್ಟಮಾಡ ಕುಶ, ನಂದೇಟಿರ ರವಿ ಸುಬ್ಬಯ್ಯ, ಮಂದಪoಡ ಮನೋಜ್ ಮಂದಣ್ಣ, ಕಿರಿಯಮಾಡ ಶೇರಿನ್, ಅರೇಯಡ ಗಿರೀಶ್, ಅಪ್ಪಾರಂಡ ಪ್ರಸಾದ್ ಕುಶಾಲಪ್ಪ, ಪುದಿಯೋಕಡ ಕಾಶಿ ಕರುಂಬಯ್ಯ, ಮಣವಟ್ಟಿರ ಚಿಣ್ಣಪ್ಪ, ಪುದಿಯೋಕಡ ಪೃಥ್ವಿ, ಪುಟ್ಟಿಚಂಡ ಡಾನ್ ದೇವಯ್ಯ, ಬೇಪಡಿಯಂಡ ಬಿದ್ದಪ್ಪ, ಸಾದೆರ ರಮೇಶ್, ಪಾಲೇಕಂಡ ಪ್ರಧಾನ್ ಪೂಣಚ್ಚ, ಚೋಳಪಂಡ ನಾಣಯ್ಯ, ನಂದಿನೆರವoಡ ಮಿಟ್ಟು ಅಪ್ಪಯ್ಯ, ನಂದಿನೆರವAಡ ಅಯ್ಯಣ್ಣ, ಚೊಕ್ಕಂಡ ಕಟ್ಟಿ, ಅಚ್ಚಕಾಳೇರ ನವೀನ್ ಮೊಣ್ಣಪ್ಪ, ಕೂತಂಡ ರೋಷನ್ ಮತ್ತಿತರರು ಪಾಲ್ಗೊಂಡಿದ್ದರು. ಜಿಲ್ಲಾಡಳಿತದ ಪರವಾಗಿ ಅಪರ ಜಿಲ್ಲಾಧಿಕಾರಿ ಡಾ.ಸಹನಾ ಆದಿಮನಿ ಅವರು ಜ್ಞಾಪನಾ ಪತ್ರವನ್ನು ಸ್ವೀಕರಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.