Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*
  • *ಜೂ.7 ರಂದು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ*
  • *ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*
  • *ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
  • *ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಸಾಮಾಜಿಕ ಕಳಕಳಿ ಮೆರೆದ ಆಟೋ ಚಾಲಕ*
  • *ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ಆಗ್ರಹ : ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಸಂಭ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*

ಜೂನ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.3 NEWS DESK  : ನೂತನ ಸಚಿವ ಸಂಪುಟದಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಹಾಗೂ ವಿರಾಜಪೇಟೆ ತಾಲೂಕು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹಿಸಿದೆ. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ನ ಜಿಲ್ಲಾ ಉಪಾಧ್ಯಕ್ಷರಾದ ಜೋಕೀಂ ರಾಡ್ರಿಗೀಸ್ ಅವರು, ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಡಿ.ಕೆ.ಶಿವಕುಮಾರ್ ರವರು ಪ್ರಮಾಣ ವಚನ ಸ್ವೀಕರಿಸಿದ್ದು, ಕ್ರೈಸ್ತ ಬಾಂಧವರ ಪರವಾಗಿ ಅವರಿಗೆ ಶುಭಾಶಯಗಳನ್ನು ಕೋರಿದರು. ವಿರಾಜಪೇಟೆ ಕ್ಷೇತ್ರದ ಜನಪ್ರಿಯ ಶಾಸಕರಾದ ಎ.ಎಸ್.ಪೊನ್ನಣ್ಣ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಹಾಗೂ ಅವರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದರು. ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಿದಲ್ಲಿ ಕೊಡಗು ಮತ್ತಷ್ಟು ಅಭಿವೃದ್ಧಿಗೊಳ್ಳಲಿದೆ. ಇಂದು ಶಾಸಕರು ಸಂಪೂರ್ಣವಾಗಿ ಅನುದಾನವನ್ನು ತಂದು ಅಭಿವೃದ್ಧಿಯ ಹರಿಕಾರರು ಆಗಿದ್ದಾರೆ. ಎಲ್ಲೆಡೆ ರಸ್ತೆಗಳು ಕಾಂಕ್ರಿಟೀಕರಣಗೊಳ್ಳುತಿದ್ದು ಶಾಸಕರ ಕಾರ್ಯವೈಖರಿಗೆ ಒಂದು ಉದಾಹರಣೆಯಾಗಿದೆ ಎಂದು ಹೇಳಿದರು. ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ನ ವಿರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ಅಗಸ್ಟೀನ್ ಕ್ಷೇವಿಯರ್ ಮಾತನಾಡಿ, ಶಾಸಕ ಪೊನ್ನಣ್ಣ ಅವರು ರಾಜ್ಯದ ಏಕೈಕ ಕೊಡವ ಸಮುದಾಯದ ಶಾಸಕರಾಗಿದ್ದು, ಬಹಳ ವರ್ಷಗಳಿಂದ ಸಚಿವ ಸ್ಥಾನ ಸಿಗುವಲ್ಲಿ ಜಿಲ್ಲೆಗೆ ಪ್ರಾತಿನಿದ್ಯವಿಲ್ಲದಾಗಿದೆ. ಬಿ ಜೆ ಪಿ ಭದ್ರಕೋಟೆಯಾದ ವಿರಾಜಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲು ಶಾಸಕರ ಶ್ರಮ ಅಪಾರವಾಗಿದ್ದು, ಎಲ್ಲರಿಗೂ ಸಮಾನ ನ್ಯಾಯವನ್ನು ಒದಗಿಸುವ ಕಾರ್ಯವನ್ನು ಶಾಸಕರು ಮಾಡಿದ್ದಾರೆ. ಅವರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಮನವಿ ಮಾಡಿದರು. ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ನ ಜಿಲ್ಲಾ ಸಂಚಾಲಕರಾದ ಜ್ಯೂಡಿವಾಸ್ ಮಾತನಾಡಿ, ಕೊಡಗು ಜಿಲ್ಲೆಯು ತನ್ನದೇಯಾದ ಭೌಗೋಳಿಕ ಪ್ರದೇಶವನ್ನು ಹೊಂದಿದೆ. ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ರವರು ಕ್ರೀಡೆ, ಧಾರ್ಮಿಕ ಕಾರ್ಯಗಳಿಗೆ ಮಹತ್ವವನ್ನು ನೀಡಿದ್ದು ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದಾರೆ. ತಲಕಾವೇರಿ, ಭಾಗಮಂಡಲ ಹಾಗೂ ಇನ್ನಿತರ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಕಾರಣಕರ್ತರಾಗಿದ್ದಾರೆ. ಘನತೆವೆತ್ತ ಸರ್ಕಾರವು ನೂತನ ಸಚಿವ ಸಂಪುಟದಲ್ಲಿ ಅವರಿಗೆ ಕ್ಯಾಬಿನೆಟ್ ಸಚಿವ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿದರು. ಕೊಡಗು ಜಿಲ್ಲಾ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮರ್ವಿನ್ ಲೋಬೋ ಮಾತನಾಡಿ ನಮ್ಮ ಶಾಸಕರು ರಸ್ತೆಗಳ ಅಭಿವೃದ್ಧಿ, ಮನೆ ಮನೆಗಳಿಗೂ ನೀರು ತಲುಪಿಸುವ ವ್ಯವಸ್ಥೆ, ಕ್ರೀಡಾ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಹೆಚ್ಚಿನ ಮೊತ್ತದ ಅನುದಾನವನ್ನು ನೀಡಿದ್ದು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿರುತ್ತಾರೆ. ಇಂದು ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಡಿ ಕೆ ಶಿವಕುಮಾರ್ ರವರ ಸಂಪುಟದಲ್ಲಿ ಶಾಸಕ ಎ ಎಸ್ ಪೊನ್ನಣ್ಣ ರವರಿಗೆ ಕ್ಯಾಬಿನೆಟ್ ಸಚಿವ ಸ್ಥಾನವನ್ನು ನೀಡುವುದರ ಜೊತೆಗೆ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆಯ್ಕೆ ಮಾಡಬೇಕು ಎಂದು ನೂತನ ಮುಖ್ಯಮಂತ್ರಿಗಳಲ್ಲಿ ಅವರು ಆಗ್ರಹಿಸಿದರು. ಗೋಷ್ಠಿಯಲ್ಲಿ ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ನ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಡ್ಯಾನಿಯಲ್ ಸಲ್ಡಾನಾ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ*

ಜೂನ್ 3, 2026

*ಜೂ.7 ರಂದು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ*

ಜೂನ್ 3, 2026

*ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*

ಜೂನ್ 3, 2026

*ಜೂ.7 ರಂದು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ*

ಜೂನ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.3 NEWS DESK  : ಕೊಡಗು ಪ್ರೆಸ್ ಕ್ಲಬ್‍ನ 2026ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಜೂ.7 ರಂದು…

*ಶಾಸಕ ಎ.ಎಸ್.ಪೊನ್ನಣ್ಣರಿಗೆ ಸಚಿವ ಸ್ಥಾನ ನೀಡಲು ರೋಮನ್ ಕ್ಯಾಥೊಲಿಕ್ ಅಸೋಸಿಯೇಷನ್ ಆಗ್ರಹ*

ಜೂನ್ 3, 2026

*ಹಿಂದುಳಿದ ಒಕ್ಕಲಿಗರ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಕೆ.ಎಸ್.ಗೋಪಾಲಕೃಷ್ಣ ನೇಮಕ*

ಜೂನ್ 3, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ : ಯುವ ಸಮೂಹ ದುಶ್ಚಟಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜೂನ್ 3, 2026

*ಜೂ.21 ರಂದು ಅಂತರ ರಾಷ್ಟ್ರೀಯ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಜೂನ್ 3, 2026

*ಸಾಮಾಜಿಕ ಕಳಕಳಿ ಮೆರೆದ ಆಟೋ ಚಾಲಕ*

ಜೂನ್ 3, 2026

*ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*

ಜೂನ್ 3, 2026

*ಅಕ್ರಮ ಮತದಾರರ ಗುರುತಿನ ಚೀಟಿಗಳನ್ನು ರದ್ದುಗೊಳಿಸಲು ಆಗ್ರಹ : ಸಿಎನ್‌ಸಿಯಿಂದ ಶಾಂತಿಯುತ ಸತ್ಯಾಗ್ರಹ*

ಜೂನ್ 3, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಸಂಭ್ರಮ*

ಜೂನ್ 3, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಒತ್ತಾಯ*

ಜೂನ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.