
ಸುಂಟಿಕೊಪ್ಪ NEWS DESK ಜೂ.4 : ಕಾಡಾನೆಯೊಂದು ಅಸ್ವಾಭಾವಿಕವಾಗಿ ಸಾವಿಗೀಡಾಗಿರುವ ಘಟನೆ ಸುಂಟಿಕೊಪ್ಪ ಸಮೀಪ 7ನೇ ಹೊಸಕೋಟೆಯಲ್ಲಿ ನಡೆದಿದೆ. ಸುಮಾರು 25 ವರ್ಷದ ಕಾಡಾನೆ ಬುಧವಾರ ರಾತ್ರಿ ಕೆಸರಿನಲ್ಲಿ ಸಿಲುಕಿ ಮೇಲೆ ಬಾರಲಾಗದೆ ಉಸಿರುಗಟ್ಟಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಗುರುವಾರ ಈ ಘಟನೆ ಬೆಳಕಿಗೆ ಬಂದಿದ್ದು, ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅರಣ್ಯ ಇಲಾಖೆಯ ವೈದ್ಯ ಡಾ.ಮುಜೀಬ್ ಅವರು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯ ಸಂಸ್ಕಾರ ಮಾಡಲಾಯಿತು. ಎಸಿಎಫ್ ನವೀನ್‌ಕುಮಾರ್, ಕುಶಾಲನಗರ ವಲಯ ಆರ್‌ಎಫ್‌ಓ ರಕ್ಷಿತ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದರು.








