Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ನಗರಸಭೆಯಿಂದ ಮಳೆಗಾಲದ ಮುನ್ನೆಚ್ಚರಿಕೆ : ರೂ.10 ಲಕ್ಷದಲ್ಲಿ ರಾಜ ಕಾಲುವೆ, ಚರಂಡಿಗಳ ಶುಚಿತ್ವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ನಗರಸಭೆಯಿಂದ ಮಳೆಗಾಲದ ಮುನ್ನೆಚ್ಚರಿಕೆ : ರೂ.10 ಲಕ್ಷದಲ್ಲಿ ರಾಜ ಕಾಲುವೆ, ಚರಂಡಿಗಳ ಶುಚಿತ್ವ*

ಜೂನ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.4 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗಿದ್ದು, ಮಡಿಕೇರಿ ನಗರಸಭೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಮಳೆ ನೀರು ಸರಾಗವಾಗಿ ಹರಿಯಲು ಅನುಕೂಲವಾಗುವಂತೆ ರಾಜಕಾಲುವೆ ಮತ್ತು ಚರಂಡಿಗಳ ಶುಚಿತ್ವಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ 10 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯರಿಗೆ ಉತ್ತರ ನೀಡಿದ ಪೌರಾಯುಕ್ತ ಕೆ.ಆರ್.ರಮೇಶ್ ಅವರು ಎಲ್ಲಾ ವಾರ್ಡ್‍ಗಳಿಗೂ ಸಿಬ್ಬಂದಿಯನ್ನು ನೇಮಿಸಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದರು. ರಾಜ ಕಾಲುವೆ ಮತ್ತು ಚರಂಡಿ ಶುಚಿತ್ವಕ್ಕೆ 10 ಲಕ್ಷ ರೂ. ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿ ನಡೆಸಲಾಗುತ್ತಿದೆ. ಇಂದಿರಾನಗರ, ಮಂಗಳದೇವಿ ನಗರ, ಚಾಮುಂಡೇಶ್ವರಿ ನಗರ ಹಾಗೂ ಆಝಾದ್ ನಗರಗಳಲ್ಲಿ ಅಪಾಯಕಾರಿ ಪ್ರದೇಶಗಳಲ್ಲಿರುವ ಮನೆಗಳಿಗೆ ನೋಟಿಸ್ ನೀಡಲು ತಯಾರಿ ನಡೆಸಲಾಗಿದೆ. ಒಟ್ಟು 6 ಸಮುದಾಯ ಭವನಗಳಲ್ಲಿ ಕಾಳಜಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ನಗರಸಭೆಯ ಹಿರಿಯ ಸದಸ್ಯ ಕೆ.ಎಸ್.ರಮೇಶ್ ಅವರು ಮಳೆ ಜೋರಾಗುವ ಮೊದಲು ರಾಜ ಕಾಲುವೆಗಳು, ಎಲ್ಲಾ ವಾರ್ಡ್‍ಗಳ ಚರಂಡಿಗಳು ಮತ್ತು ರಸ್ತೆ ಬದಿಯ ಕುರುಚಲು ಕಾಡುಗಳನ್ನು ಕಡಿದು ಸ್ವಚ್ಛಗೊಳಿಸಬೇಕು. ಇದರಿಂದ ರಸ್ತೆಗಳು ಹಾಳಾಗುವುದನ್ನು ತಡೆಯಬಹುದು. ನಗರಸಭೆ ಹೆಚ್ಚುವರಿಯಾಗಿ ಜೆಸಿಬಿ ಮತ್ತು ಹಿಟಾಚಿ ಯಂತ್ರ ಸಹಿತ ಅಗತ್ಯ ಕಾರ್ಮಿಕರನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇತರ ಸದಸ್ಯರು ಮಾತನಾಡಿ ಮಡಿಕೇರಿ ನಗರಸಭೆಯ ಕೆಲಸ ಕಾರ್ಯಗಳು ಸುಗಮವಾಗಿ ನಡೆಯದಿರಲು ಮುಖ್ಯವಾಗಿ ಸಿಬ್ಬಂದಿಗಳ ಕೊರತೆಯೇ ಕಾರಣ. ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಿ ಕೆಲಸಗಳು ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ನಗರಸಭೆಯ ವ್ಯಾಪ್ತಿಗೆ ಒಳಪಡುವ ಆಸ್ತಿ ಒತ್ತುವರಿಯಾಗುತ್ತಿದೆ. ಎಸ್.ಪಿ. ಕಚೇರಿ ಪಕ್ಕದಲ್ಲೇ ಜಾಗ ಒತ್ತುವರಿ ಮಾಡಲಾಗಿದೆ. ಅಲ್ಲಿರುವ ಶೆಡ್ ನ್ನು ತೆರವು ಮಾಡುವಂತೆ ಎಸ್‍ಡಿಪಿಐ ಸದಸ್ಯ ಅಮೀನ್ ಮೊಹಿಸಿನ್ ಆಗ್ರಹಿಸಿದರು. ಇದಕ್ಕೆ ಧ್ವನಿಗೂಡಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಶೆಡ್ ನ್ನು ತಕ್ಷಣ ತೆರವು ಮಾಡಬೇಕು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಗರ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳು ತಲೆ ಎತ್ತುತ್ತಿದ್ದು, ಗಾಂಧಿ ಮೈದಾನದ ಸಮೀಪದ ಕಟ್ಟಡ ನಿರ್ಮಾಣದಲ್ಲಿ ಸಂಪೂರ್ಣ ಕಾನೂನು ಉಲ್ಲಂಘನೆಯಾಗಿದೆ. ಹಿಂದಿನ ಸಾಮಾನ್ಯ ಸಭೆಯ ನಿರ್ಣಯದಂತೆ ಕಾಮಗಾರಿ ಸ್ಥಗಿತಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಮೀನ್ ಮೊಹಿಸಿನ್ ಆರೋಪಿಸಿದರು. ಈ ಸಂದರ್ಭ ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷ ಎಸ್‍ಡಿಪಿಐ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಕೆಲವು ಸದಸ್ಯರು ಸದನದ ಬಾವಿಗೆ ಇಳಿದು ಅಸಮಾಧಾನ ವ್ಯಕ್ತಪಡಿಸಿದರು. *ಕಾಮಗಾರಿ ಆರಂಭ* ನಗರೋತ್ಥಾನದ 4ನೇ ಹಂತದ ಕಾಮಗಾರಿ ಕುರಿತು ಮುಂದಿನ 1 ವಾರದ ಒಳಗೆ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಗುತ್ತಿಗೆದಾರರಿಗೆ ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಲು ಸಭೆ ನಿರ್ಧರಿಸಿತು. ಉಪಾಧ್ಯಕ್ಷ ಮಹೇಶ್ ಜೈನಿ, ಆರೋಗ್ಯ ಇಲಾಖೆ, ಇಂಜಿನಿಯರಿಂಗ್ ವಿಭಾಗ, ಕಂದಾಯ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.