Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆ – ದುಷ್ಪರಿಣಾಮಗಳ ಕುರಿತು ಕಾನೂನು ಅರಿವು*
  • *ಪೊನ್ನಂಪೇಟೆ : ಜೂ.5 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*
  • *ವಿರಾಜಪೇಟೆ : ಸ್ವಯಂ ಸೇವೆ ಎಂಬುವುದು ಅಂತ್ಯವಿಲ್ಲದ ನಿರಂತರ ಪ್ರಕ್ರಿಯೆ : ಬೆನೆಡಿಕ್ಟ್ ಆರ್ ಸಲ್ಡಾನ*
  • *ವಿದ್ಯಾರ್ಥಿನಿಯ ಪ್ರವೇಶ ಶುಲ್ಕ ಭರಿಸಿದ ನಿವೃತ್ತ ಪೊಲೀಸ್*
  • *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆ*
  • *ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ : ಪರಿಶೀಲನೆ*
  • *ಮಡಿಕೇರಿಯ ಬ್ರಹ್ಮಾಕುಮಾರೀಸ್ ಲೈಟ್ ಹೌಸ್ ನಲ್ಲಿ ಜೂ.5 ರಂದು ಉಚಿತ ಸಸಿಗಳ ವಿತರಣೆ*
  • *ಮಡಿಕೇರಿ ನಗರಸಭೆಯಿಂದ ಮಳೆಗಾಲದ ಮುನ್ನೆಚ್ಚರಿಕೆ : ರೂ.10 ಲಕ್ಷದಲ್ಲಿ ರಾಜ ಕಾಲುವೆ, ಚರಂಡಿಗಳ ಶುಚಿತ್ವ*
  • *ಕಾಡಾನೆ ಸಾವು*
  • *ಯುಪಿಎಸ್‌ಸಿ ಪರೀಕ್ಷೆಗೆ ಉಚಿತ ತರಬೇತಿ : ಅರ್ಜಿ ಸಲ್ಲಿಸಲು ಜೂ.30 ಕೊನೆ ದಿನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆ*

ಜೂನ್ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.4 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಮೈಸೂರಿನ ಮಹಾರಾಜ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೌರವ ಸಲ್ಲಿಸಲಾಯಿತು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಮಾತನಾಡಿ, ಮರೆಯಲು ಅಸಾಧ್ಯವಾದಂತಹ ದಿವ್ಯ ಚೇತನ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ನಾಡಿಗೆ ಮಾಡಿದ ಸೇವೆಯನ್ನು ಎಷ್ಟು ವರ್ಣಿಸಿದರೂ ಸಾಲದು. ಇಂದು ಶತಮಾನೋತ್ಸವ ಆಚರಿಸುತ್ತಿರುವ ಎಲ್ಲ ಸಂಘ-ಸಂಸ್ಥೆಗಳನ್ನು ಪ್ರಾರಂಭಿಸಿದ್ದು, ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಮೊದಲ ಸಭೆಯಲ್ಲಿ ಅವರು ಮಾತನಾಡುತ್ತಾ, “ಮೈಸೂರು ರಾಜ್ಯದ ಆಡಳಿತದಲ್ಲಿ ನಾವು ಒಂದು ಹೊಸ ಪ್ರಯೋಗವನ್ನು ಆರಂಭಿಸಿದ್ದೇವೆ. ನಮ್ಮ ಪ್ರಜೆಗಳಿಗೆ ಅಖಂಡ ಸುಖ ಸಂಪತ್ತನ್ನು ಒದಗಿಸಿ ಕೊಡಬೇಕೆಂಬುದು ನನ್ನ ಜೀವನದ ಪರಮೊದ್ದೇಶ” ಎಂದರು. ಅದಕ್ಕಾಗಿ 1923ರಲ್ಲಿ ಹೊಸ, ಪ್ರಜಾ ಪ್ರತಿನಿಧಿ ಸಭೆಯನ್ನು ಶಾಸನಬದ್ದ ಸಂಸ್ಥೆಯನ್ನಾಗಿ ಮಾರ್ಪಡಿಸಿದರು. ಕನ್ನಡ ಸಾಹಿತ್ಯ ಪರಿಷತ್ತನ್ನು ಮಾತ್ರ ಇವರು ಸ್ಥಾಪಿಸಲಿಲ್ಲ. ಇತ್ತೀಚಿಗೆ ಶತಮಾನೋತ್ಸವ ಆಚರಿಸಿದ ರಾಜ್ಯಮಟ್ಟದ ಎಲ್ಲ ಸಂಸ್ಥೆಗಳ ಸ್ಥಾಪಕರು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು. ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್, ಸ್ಟೇಟ್ ಅಪೆಕ್ಸ್ ಬ್ಯಾಂಕ್, ಲ್ಯಾಂಡ್ ಬ್ಯಾಂಕ್, ಮೈಸೂರು ರಾಜ್ಯ ಕೈಗಾರಿಕಾ ಬ್ಯಾಂಕ್, ವಿಶ್ವವಿದ್ಯಾಲಯ, ಮಹಾರಾಜ ಕಾಲೇಜು, ಮಹಾರಾಣಿ ಕಾಲೇಜು, ಯುವರಾಜ ಕಾಲೇಜು, ವಾಣಿವಿಲಾಸ ಸಾಗರದ ಆಣೆಕಟ್ಟು, ಭಾರತದ ಮೊದಲ ಬೃಹತ್ ಅಣೆಕಟ್ಟು ಕೃಷ್ಣರಾಜಸಾಗರ ಅಣೆಕಟ್ಟು, ಶಿವನಸಮುದ್ರದಲ್ಲಿ ಭಾರತದ ಅತಿ ದೊಡ್ಡ ವಿದ್ಯುತ್ ಉತ್ಪಾದನಾ ಕೇಂದ್ರ, ಮೈಸೂರು ಸ್ಯಾಂಡಲ್ ವುಡ್ ಫ್ಯಾಕ್ಟರಿ, ಮೈಸೂರು ಬಲ್ಬ್ ಫ್ಯಾಕ್ಟರಿ, ಮೈಸೂರು ಸೋಪ್ಸ್ ಅಂಡ್ ಟಿಟರ್ಜಿಡೆಂಟ್ಸ್, ಬೆಂಗಳೂರಿನ ವಾಣಿಜ್ಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಮೈಸೂರಿನ ತಾಂತ್ರಿಕ ಕಾಲೇಜು, ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆ, ಮಂಗಳೂರಿನಲ್ಲಿ ಹಂಚಿನ ಕಾರ್ಖಾನೆ, ಸಿಮೆಂಟ್ ಕಾರ್ಖಾನೆ, ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ, ಮೈಸೂರ್ ಪೇಂಟ್ಸ್ ಫ್ಯಾಕ್ಟರಿ, ಭದ್ರಾವತಿಯ ಉಕ್ಕು ಕಾರ್ಖಾನೆ, ಪೇಪರ್ ಕಾರ್ಖಾನೆ, ಬೆಂಗಳೂರಿನ ಮಿಂಟೋ ಆಸ್ಪತ್ರೆ , ಮೈಸೂರಿನ ಕ್ಷಯಾ ಆಸ್ಪತ್ರೆ, ರಾಜ್ಯ ವ್ಯಾಪ್ತಿ 250ಕ್ಕೂ ಹೆಚ್ಚು ಆಸ್ಪತ್ರೆಗಳು, ಕೊಡಗಿನಲ್ಲಿ ಕಾಫಿ ಸಂಶೋಧನಾ ಕೇಂದ್ರಗಳನ್ನು ಪ್ರಾರಂಭಿಸಿದರು. ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯಲ್ಲಿ ಗ್ರಾಮ ನಿರ್ಮಲೀಕರಣ, ವೈದ್ಯಕೀಯ ಸಹಾಯ, ವಿದ್ಯಾ ಪ್ರಚಾರ, ನೀರಿನ ಸೌಕರ್ಯ, ಪ್ರಯಾಣ ಸೌಲಭ್ಯ ಮುಂತಾದ ಕ್ಷೇತ್ರಗಳು ಸ್ವಯಂಆಡಳಿತ ಸಂಸ್ಥೆಗಳಾದವು. ಹೊಸ ರೈಲು ದಾರಿಗಳ ನಿರ್ಮಾಣಗಳಾದವು. ದೇಶದಲ್ಲಿ ಆಗಿ ಹೋದ ಎಲ್ಲಾ ರಾಜರುಗಳಿಗೆ ಜನಸೇವೆಯಲ್ಲಿ ಅಗ್ರಗಣ್ಯರಾಗಿ ನಿಲ್ಲುವವರು ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಎಂದರು ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್, ಸಂಘಟನಾ ಕಾರ್ಯದರ್ಶಿ ವಾಸು ರೈ, ಕುಶಾಲನಗರ ತಾಲೂಕು ಗೌರವಕೋಶಾಧಿಕಾರಿ ಕೆ.ವಿ ಉಮೇಶ್, ಸದಸ್ಯರುಗಳಾದ ಭಾರತಿ ರಮೇಶ್, ರೇಣುಕಾ, ಅಜಯ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಳಕೆ – ದುಷ್ಪರಿಣಾಮಗಳ ಕುರಿತು ಕಾನೂನು ಅರಿವು*

ಜೂನ್ 4, 2026

*ಪೊನ್ನಂಪೇಟೆ : ಜೂ.5 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 4, 2026

*ವಿರಾಜಪೇಟೆ : ಸ್ವಯಂ ಸೇವೆ ಎಂಬುವುದು ಅಂತ್ಯವಿಲ್ಲದ ನಿರಂತರ ಪ್ರಕ್ರಿಯೆ : ಬೆನೆಡಿಕ್ಟ್ ಆರ್ ಸಲ್ಡಾನ*

ಜೂನ್ 4, 2026

*ಪೊನ್ನಂಪೇಟೆ : ಜೂ.5 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ*

ಜೂನ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.4 NEWS DESK : ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ…

*ವಿರಾಜಪೇಟೆ : ಸ್ವಯಂ ಸೇವೆ ಎಂಬುವುದು ಅಂತ್ಯವಿಲ್ಲದ ನಿರಂತರ ಪ್ರಕ್ರಿಯೆ : ಬೆನೆಡಿಕ್ಟ್ ಆರ್ ಸಲ್ಡಾನ*

ಜೂನ್ 4, 2026

*ವಿದ್ಯಾರ್ಥಿನಿಯ ಪ್ರವೇಶ ಶುಲ್ಕ ಭರಿಸಿದ ನಿವೃತ್ತ ಪೊಲೀಸ್*

ಜೂನ್ 4, 2026

*ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆ*

ಜೂನ್ 4, 2026

*ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ : ಪರಿಶೀಲನೆ*

ಜೂನ್ 4, 2026

*ಮಡಿಕೇರಿಯ ಬ್ರಹ್ಮಾಕುಮಾರೀಸ್ ಲೈಟ್ ಹೌಸ್ ನಲ್ಲಿ ಜೂ.5 ರಂದು ಉಚಿತ ಸಸಿಗಳ ವಿತರಣೆ*

ಜೂನ್ 4, 2026

*ಮಡಿಕೇರಿ ನಗರಸಭೆಯಿಂದ ಮಳೆಗಾಲದ ಮುನ್ನೆಚ್ಚರಿಕೆ : ರೂ.10 ಲಕ್ಷದಲ್ಲಿ ರಾಜ ಕಾಲುವೆ, ಚರಂಡಿಗಳ ಶುಚಿತ್ವ*

ಜೂನ್ 4, 2026

*ಕಾಡಾನೆ ಸಾವು*

ಜೂನ್ 4, 2026

*ಯುಪಿಎಸ್‌ಸಿ ಪರೀಕ್ಷೆಗೆ ಉಚಿತ ತರಬೇತಿ : ಅರ್ಜಿ ಸಲ್ಲಿಸಲು ಜೂ.30 ಕೊನೆ ದಿನ*

ಜೂನ್ 4, 2026

*ಹೊರ ರಾಜ್ಯದ ವ್ಯಕ್ತಿಗಳಿಂದ ಕೊಡಗಿನಲ್ಲೂ ಮತದಾನ : ದ್ವಿಮುಖ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ವಂಚನೆ ತಡೆಗಟ್ಟಲು ಸಿಎನ್‌ಸಿ ಆಗ್ರಹ*

ಜೂನ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.