Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*
  • *ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*
  • *ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*

ಜೂನ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜೂ.5 : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ಪ್ರತಿ ಗ್ರಾ.ಪಂ ಮಟ್ಟದಲ್ಲಿ “ಭಾರತ್ ಜೋಡೋ ಯುವ ಸಂಘ” ವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಇದು ರಾಜಕೀಯ ಪ್ರೇರಿತ ಸಂಘಟನೆಯಾಗಿದ್ದು, ಇದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು “ಭಾರತ್ ಜೋಡೋ ಯುವ ಸಂಘ” ವನ್ನು ಮುನ್ನಡೆಸಲು ಸರಕಾರದ ಮೂಲಕ ತಲಾ 10 ಲಕ್ಷ ರೂ. ಬಿಡುಗಡೆ ಮಾಡುವುದಾಗಿ ನೂತನ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದು ಜನರು ಪಾವತಿಸಿದ ತೆರಿಗೆ ಹಣವಾಗಿದ್ದು, ಯಾವುದೇ ಕಾರಣಕ್ಕು ಈ ರೀತಿಯ ರಾಜಕೀಯ ಲಾಭದ ದೃಷ್ಟಿಕೋನದ ಸಂಘಗಳಿಗೆ ವಿನಿಯೋಗ ಮಾಡಬಾರದು ಮತ್ತು ಗ್ರಾಮಗಳಲ್ಲಿ ಸಂಘರ್ಷಕ್ಕೆ ಕಾರಣವಾಗಬಲ್ಲ ಸಂಘಟನೆಗಳನ್ನು ಸರಕಾರ ರಚಿಸಬಾರದು ಎಂದು ಒತ್ತಾಯಿಸಿದ್ದಾರೆ. ಈ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಹಗಲುಗನಸಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು “ಭಾರತ್ ಜೋಡೋ” ಯಾತ್ರೆಯನ್ನು ದೇಶವ್ಯಾಪಿ ಕೈಗೊಂಡು ರಾಜಕೀಯ ಲಾಭ ಗಳಿಸುವಲ್ಲಿ ವಿಫಲರಾಗಿದ್ದರು. ಈ ಯಾತ್ರೆಗೆ ಕಾಂಗ್ರೆಸ್ ಪಕ್ಷದ ಹಣ ವಿನಿಯೋಗವಾಗಿತ್ತು. ಆದರೆ ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಘೋಷಿಸಿರುವ “ಭಾರತ್ ಜೋಡೋ ಯುವ ಸಂಘ” ಗಳಿಗೆ ಜನರ ತೆರಿಗೆ ಹಣವನ್ನು ನೀಡಲಾಗುತ್ತಿದ್ದು, ಇದು ಖಂಡನೀಯ. ಸರಕಾರ ತಕ್ಷಣ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.
ತಮ್ಮ ಪಕ್ಷದ ಸಂಘಟನೆಗಾಗಿ ಮತ್ತು ಮುಂಬರುವ ಚುನಾವಣೆಗಳಲ್ಲಿ ಲಾಭ ಗಳಿಸುವುದಕ್ಕಾಗಿ “ಭಾರತ್ ಜೋಡೋ” ಹೆಸರಿನಲ್ಲಿ ಸಂಘವನ್ನು ರಚಿಸಲು ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಈ ರೀತಿಯ ಸಂಘಗಳ ಸ್ಥಾಪನೆಯಿಂದ ಗ್ರಾಮಗಳಲ್ಲಿ ದ್ವೇಷ ಮತ್ತು ಅಶಾಂತಿಯ ವಾತಾವರಣ ಸೃಷ್ಟಿಯಾಗುವ ಆತಂಕವಿದೆ. ಇದಕ್ಕೆ ಬಿಜೆಪಿ ಎಂದಿಗೂ ಅವಕಾಶ ನೀಡುವುದಿಲ್ಲವೆಂದು ಕಂಠಿ ಕಾರ್ಯಪ್ಪ ಎಚ್ಚರಿಕೆ ನೀಡಿದ್ದಾರೆ. ರಾಜಕೀಯ ಪ್ರೇರಿತ ಸಂಘಟನೆಯ ರಚನೆಗಾಗಿ ತಲಾ 10 ಲಕ್ಷ ರೂ.ಗಳನ್ನು ನೀಡುವ ಬದಲು ರಾಜ್ಯದ ಜನರ ಮೇಲೆ ಹೊರಿಸಿರುವ ತೆರಿಗೆ ಹೊರೆಯನ್ನು ಕಡಿಮೆ ಮಾಡಲಿ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲಿ. ಯುವ ಸಮೂಹದ ಪ್ರಗತಿಯ ಬಗ್ಗೆ ಮುಖ್ಯಮಂತ್ರಿಗಳಿಗೆ ಅಷ್ಟು ಕಾಳಜಿ ಇದ್ದರೆ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್ ಮತ್ತು ಸಹಕಾರ ಸಂಘಗಳ ಮೂಲಕ ಬಡ್ಡಿ ರಹಿತ ಸಾಲವನ್ನು ನೀಡಲಿ ಎಂದು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.14 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ (ಸಂಪುಟ ದರ್ಜೆ) ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ…

*ಶಾಸಕ ಡಾ. ಮಂತರ್ ಗೌಡ ಅವರ ಅ.9ರ ಕಾರ್ಯಕ್ರಮ*

ಅಕ್ಟೋಬರ್ 8, 2026

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.