Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ಟಿ.ಜಿ.ಪ್ರೇಮ್ ಕುಮಾರ್ ಆಯ್ಕೆ*
  • *ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*
  • *ಡಾ.ಗಿರೀಶ್ ಭಾರದ್ವಾಜ್ ನಿಧನಕ್ಕೆ ಟಿ.ಎಂ.ಶಹೀದ್ ತೆಕ್ಕಿಲ್ ಸಂತಾಪ*
  • *ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*
  • *ಗೌಡ ಯುವ ವೇದಿಕೆಯಿಂದ ಸೌಹಾರ್ದ ಸಹಕಾರ ಸಂಘ ರಚನೆ  : ಸಭೆಯಲ್ಲಿ ತೀರ್ಮಾನ*
  • *ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*
  • *ಜು.9 ರಂದು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವಿಪ್ರ ಸಭಾ ಭವನ ಉದ್ಘಾಟನೆ*
  • *ಕೊಡಗಿನಲ್ಲಿ ಮಳೆ ಬಿರುಸು : ವಿವಿಧೆಡೆ ಹಾನಿ : ಜು.8ರಂದು ಶಾಲೆಗಳಿಗೆ ರಜೆ*
  • *ಎಸ್‌ಐಆರ್ ಪ್ರಕ್ರಿಯೆ: ದಾಖಲೆಗಳಿಲ್ಲದೆ ಮತದಾನದಿಂದ ವಂಚಿತರಾಗುವ ಆತಂಕ : ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣೆ : ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣೆ : ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.6 NEWS DESK  : ಕರ್ನಾಟಕ ರಾಜ್ಯ ಸರ್ಕಾರ ಬಡವರ ಪರವಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಗೌರವಯುತವಾಗಿ ಬಾಳ್ವೆ ನಡೆಸಲು ಬೇಕಾದ ಎಲ್ಲಾ ಸವಲತ್ತುಗಳನ್ನು ಆದ್ಯತೆ ಮೇರೆಗೆ ಒದಗಿಸುತ್ತಾ ಬಂದಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕು 18 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆಯಡಿಯಲ್ಲಿ ಆಯ್ಕೆ ಆಗಿರುವ ಅರ್ಹ ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣಾ ಕಾರ್ಯಕ್ರಮದಲ್ಲಿ ಸುಮಾರು 400 ಕ್ಕೂ ಅಧಿಕ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದರು. ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ. ಹಲವು ವರ್ಷಗಳಿಂದ ಸರ್ಕಾರದಿಂದ ಮನೆ ನಿರ್ಮಿಸಬೇಕು, ನಿವೇಶನ ರಹಿತರು, ವಸತಿ ರಹಿತರಿಗೆ ಆದ್ಯತೆ ಮೇರೆಗೆ ಸ್ವಂತ ಸೂರು ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಹಲವಾರು ಜನಪರ ಯೋಜನೆಗಳೊಂದಿಗೆ ವಸತಿ ನೀಡುವ ಯೋಜನೆಗೂ ಮಹತ್ವ ನೀಡಿದೆ ಎಂದು ಶಾಸಕರು ಹೇಳಿದರು. ಅಂದಿನ ವಸತಿ ಸಚಿವರಾದ ಜಮೀರ್ ಅಹಮ್ಮದ್ ಅವರು ಬಸವ ಮತ್ತು ಅಂಬೇಡ್ಕರ್ ವಸತಿ ಯೋಜನೆ ಅಡಿ ವಸತಿ ಸೌಲಭ್ಯ ಒದಗಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಸಂಪುಟಗಳ ಸದಸ್ಯರ ಸಹಕಾರದಿಂದ ಜಿಲ್ಲೆಗೆ ಮನೆ ನಿರ್ಮಾಣಕ್ಕೆ ಅನುದಾನ ದೊರೆತಿದೆ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು. ಮಳೆಗಾಲ ಪ್ರಾರಂಭಕ್ಕೂ ಮೊದಲು ಮನೆ ಹಸ್ತಾಂತರ ಮಾಡುವ ಯೋಜನೆ ಇದ್ದು, ಇದರ ಸದುಪಯೋಗ ಜನರು ಪಡೆದುಕೊಂಡು, ತಮ್ಮ ಅನುಕೂಲಕ್ಕನುಸಾರ ಮನೆ ನಿರ್ಮಿಸಿ ಉತ್ತಮ ಜೀವನ ನಡೆಸುವಂತಾಗಲಿ ಎಂದು ಶಾಸಕರು ಶುಭ ಹಾರೈಸಿದರು. ಮುಂದಿನ ದಿನಗಳಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮ ನಡೆಯಲ್ಲಿದ್ದು, ಸಣ್ಣ ಸಣ್ಣ ಹೆಜ್ಜೆಯ ಮೂಲಕ ಅಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿ ಆಯ್ಕೆ ಮಾಡಿದ ಉದ್ದೇಶ ಬದ್ಧತೆಯಿಂದ ಮಾಡಲಾಗುವುದೆಂದು ಭರವಸೆ ನೀಡಿದರು. ಮಡಿಕೇರಿ ತಾಲ್ಲೂಕು ಪಂಚಾಯಿತಿ ಇ.ಒ.ಶೇಖರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ಸೂರು ಒದಗಿಸುವಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಜಿಲ್ಲೆಗೆ 1200 ಮನೆಗಳ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರು ಮಾಡಿರುವುದು ಶ್ಲಾಘನೀಯ ಎಂದರು. ವಿರಾಜಪೇಟೆ ಕ್ಷೇತ್ರ ಭೌಗೋಳಿಕವಾಗಿ ಹೆಚ್ಚಿನ ವಿಸ್ತೀರ್ಣ ಹೊಂದಿರುವುದರಿಂದ ವಿರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲ್ಲೂಕಿಗೆ 527 ಮನೆಗಳ ನಿರ್ಮಾಣಕ್ಕೆ ಮುಂದಾಗಿದೆ. ಮೊದಲ ಹಂತದಲ್ಲಿ ವಿರಾಜಪೇಟೆ ವಿಧಾನಸಭಾ ವ್ಯಾಪ್ತಿಯ ಪೆರಾಜೆ, ಚೆಂಬು, ಸಂಪಾಜೆ, ಮದೆ, ಬೆಟ್ಟಗೇರಿ, ಚೇರಂಬಾಣೆ, ಕುಂದಚೇರಿ ಭಾಗಮಂಡಲ, ಕರಿಕೆ, ಅಯ್ಯಂಗೇರಿ, ಬಲ್ಲಮಾವಟಿ, ಎಮ್ಮೆಮಾಡು ನಾಪೋಕ್ಲು, ಕುಂಜಿಲ-ಕಕ್ಕಬ್ಬೆ, ನರಿಯಂದಡ, ಹಾಕತ್ತೂರು, ಮೇಕೇರಿ, ಕೊಣಂಜಗೇರಿ ಗ್ರಾ.ಪಂ.ವ್ಯಾಪ್ತಿಯ 427 ಅರ್ಹ ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸುವ ಸಂಬಂಧ ಪ್ರಯತ್ನ ನಡೆದಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದಿಂದ ನಿವೇಶನ ಗುರುತಿಸಿ ಫಲಾನುಭವಿಗಳಿಗೆ ಮನೆ ನಿರ್ಮಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪಂಚಾಯತ್ ಸಿಇಒ ಆನಂದ್ ಪ್ರಕಾಶ್ ಮೀನಾ, ಮಡಿಕೇರಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ಮಡಿಕೇರಿ ತಾಲೂಕು ಅಭಿವೃದ್ಧಿ ಮತ್ತು ಯೋಜನೆಗಳ ಸಮಿತಿಯ ಉಪಾಧ್ಯಕ್ಷರಾದ ಬಾಲಚಂದ್ರ ನಾಯರ್, ಕೊಡಗು ಜಿಲ್ಲಾ ಪಂಚಾಯಿತಿ ಯೋಜನೆ ನಿರ್ದೇಶಕರಾದ ಜೀವನ್ ಕುಮಾರ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರಾದ ಹನೀಫ್, ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷರಾದ ರಫೀಕ್, ಕಕ್ಕಬೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕಲಿಯಂಡ ಸಂಪನ್ ಅಯ್ಯಪ್ಪ, ಚೆಟ್ಟಿಮನಿ ಪಂಚಾಯಿತಿ ಮಾಜಿ ಸದಸ್ಯರಾದ ಹ್ಯಾರೀಶ್, ಮೇಕೇರಿ ಪಂಚಾಯಿತಿ ಮಾಜಿ ಸದಸ್ಯರಾದ ಹನೀಫ್, ಪ್ರಮುಖರಾದ ಸೂರಜ್ ಹೊಸೂರು, ಕೋಡಿರ ವಿನೋದ್ ನಾಣಯ್ಯ, ಅಪ್ರು ರವೀಂದ್ರ, ಪಿ.ಎಲ್.ಸುರೇಶ್, ತುಳಸಿ ಗಾಂಧಿ ಪ್ರಸಾದ್, ಮಡಿಕೇರಿ ತಾಲೂಕು ಎಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರುಗಳು, ಮಾಜಿ ಸದಸ್ಯರು, ಫಲಾನುಭವಿಗಳು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*

ಜುಲೈ 7, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ಟಿ.ಜಿ.ಪ್ರೇಮ್ ಕುಮಾರ್ ಆಯ್ಕೆ*

ಜುಲೈ 7, 2026

*ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*

ಜುಲೈ 7, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ಟಿ.ಜಿ.ಪ್ರೇಮ್ ಕುಮಾರ್ ಆಯ್ಕೆ*

ಜುಲೈ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.7 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ನೂತನ ಅಧ್ಯಕ್ಷರಾಗಿ ನಿವೃತ್ತ ಮುಖ್ಯೋಪಾಧ್ಯಾಯ…

*ಅರಣ್ಯ ಪ್ರವಾಸ ಕಾರ್ಯಕ್ರಮ : ಮಹಿಳೆಯರು, ಮಕ್ಕಳಿಂದ ಹುಲಿ ಸಂರಕ್ಷಣಾ ಜಾಗೃತಿ*

ಜುಲೈ 7, 2026

*ಡಾ.ಗಿರೀಶ್ ಭಾರದ್ವಾಜ್ ನಿಧನಕ್ಕೆ ಟಿ.ಎಂ.ಶಹೀದ್ ತೆಕ್ಕಿಲ್ ಸಂತಾಪ*

ಜುಲೈ 7, 2026

*ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*

ಜುಲೈ 7, 2026

*ಗೌಡ ಯುವ ವೇದಿಕೆಯಿಂದ ಸೌಹಾರ್ದ ಸಹಕಾರ ಸಂಘ ರಚನೆ  : ಸಭೆಯಲ್ಲಿ ತೀರ್ಮಾನ*

ಜುಲೈ 7, 2026

*ಸುಂಟಿಕೊಪ್ಪ : ಸಹಕಾರ ಸಂಘಗಳ ಕಟ್ಟಡ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಅನುದಾನ ಘೋಷಣೆ*

ಜುಲೈ 7, 2026

*ಜು.9 ರಂದು ಕೊಡಗು ಜಿಲ್ಲಾ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ವಿಪ್ರ ಸಭಾ ಭವನ ಉದ್ಘಾಟನೆ*

ಜುಲೈ 7, 2026

*ಕೊಡಗಿನಲ್ಲಿ ಮಳೆ ಬಿರುಸು : ವಿವಿಧೆಡೆ ಹಾನಿ : ಜು.8ರಂದು ಶಾಲೆಗಳಿಗೆ ರಜೆ*

ಜುಲೈ 7, 2026

*ಎಸ್‌ಐಆರ್ ಪ್ರಕ್ರಿಯೆ: ದಾಖಲೆಗಳಿಲ್ಲದೆ ಮತದಾನದಿಂದ ವಂಚಿತರಾಗುವ ಆತಂಕ : ಮಡಿಕೇರಿಯಲ್ಲಿ ಪ್ರತಿಭಟನೆ*

ಜುಲೈ 7, 2026

*ಬಾಡಗರಕೇರಿ ಶ್ರೀ ಮೃತ್ಯುಂಜಯ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಆರಂಭ*

ಜುಲೈ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.