Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಂಗಾರು : ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ*
  • *ಪೊನ್ನಂಪೇಟೆ : ಜೂ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಕಲೆಯ ನಡಿಗೆ ಜನರ ಬಳಿಗೆ ಅದ್ಭುತ ಕಲ್ಪನೆ : ತೆನ್ನಿರ ಮೈನಾ* 
  • *ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ಅಗತ್ಯ ಸಹಕಾರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮನವಿ*
  • *ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣೆ : ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಜಿಎಸ್‌ಟಿ ಮತ್ತು ಆದಾಯ ತೆರಿಗೆ ಶಿಕ್ಷಣ : ಸಹಕಾರ ಕ್ಷೇತ್ರ ರೈತರ ಬೆನ್ನುಲುಬು : ರಾಬಿನ್ ದೇವಯ್ಯ ಬಣ್ಣನೆ*
  • *ಅಮ್ಮ ಕೊಡವ ಸಮಾಜದ ಕಾಮಗಾರಿಗೆ ಭೂಮಿಪೂಜೆ*
  • *ಬೇಟೋಳಿ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ನಂದಾದೀಪ ಹಾಗೂ ಧರ್ಮಶಾಸ್ತ್ರ ಸಂಘದ ವಾರ್ಷಿಕೋತ್ಸವ ಆಚರಣೆ*
  • *ಶ್ರೀಮಂಗಲ : ಜೂ.6 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಿ : ಹಿರಿಯ ಸಿವಿಲ್ ನ್ಯಾಯಧೀಶೆ ಶುಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ಅಗತ್ಯ ಸಹಕಾರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ಅಗತ್ಯ ಸಹಕಾರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮನವಿ*

ಜೂನ್ 6, 20268 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.6 NEWS DESK : ಭಾರತ ಚುನಾವಣಾ ಆಯೋಗವು ದಿನಾಂಕ:14-05-2026ರ ಪತ್ರಿಕಾ ಪ್ರಕಟಣೆಯ ಮೂಲಕ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕಾರ್ಯ ಕೈಗೊಳ್ಳಲು ಕಾರ್ಯಕ್ರಮ ವೇಳಾಪಟ್ಟಿ ಹೊರಡಿಸಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕೋರಿದ್ದಾರೆ. ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ 2026 ಅಕ್ಟೋಬರ್ 1 ನ್ನು ಘೋಷಿಸಿದ್ದು, ಜೂ.20 ರಿಂದ 29ರ ವರೆಗೆ ಪೂರ್ವತಯಾರಿ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಿದೆ. ಜೂ.30 ರಿಂದ ಜು.29ರ ವರೆಗೆ ಮತಗಟ್ಟೆ ಅಧಿಕಾರಿಯಿಂದ ಮನೆಮನೆ ಭೇಟಿ ಹಾಗೂ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ, ಆಗಸ್ಟ್, 5 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ.5 ರಿಂದ ಸೆ.4ರ ವರೆಗೆ ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ಜೊತೆಗೆ ಆ.5 ರಿಂದ ಅಕ್ಟೋಬರ್, 3 ರವರೆಗೆ ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಅಕ್ಟೋಬರ್, 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಎಸ್.ಜೆ.ಸೋಮಶೇಖರ್ ಅವರು ಮಾಹಿತಿ ನೀಡಿದರು. ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕರ್ನಾಟಕ ರಾಜ್ಯದಲ್ಲಿ ಕೊನೆಯದಾಗಿ 2002 ನೇ ಸಾಲಿನಲ್ಲಿ ನಡೆಸಲಾಗಿದೆ. ಭಾರತದ ಸಂವಿಧಾನದ ಅನುಚ್ಛೇದ 324 ರ ಸೆಕ್ಷನ್ 21 ರನ್ವಯ, ಪ್ರಜಾ ಪ್ರತಿನಿಧಿ ಕಾಯ್ದೆ 1950 ರನ್ವಯ ಹಾಗೂ ಮತದಾರರ ನೋಂದಣಿ ನಿಯಮಗಳು, 1960 ಗಳಲ್ಲಿ ಲಭ್ಯವಿರುವ ನಿಬಂಧನೆಗಳ ಆಧಾರದ ಮೇಲೆ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಳ್ಳಲಾಗಿದೆ. ಈ ಬಾರಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅರ್ಹತಾ ದಿನಾಂಕವಾಗಿ 01.10.2026 ಅನ್ನು ನಿಗಧಿಪಡಿಸಲಾಗಿದೆ. ಭಾರತ ಚುನಾವಣಾ ಆಯೋಗವು 2021 ರ ಡಿಸೆಂಬರ್ ಮಾಹೆಯಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ 1950 ರ ನಿಮಯ 14ಬಿ ಗೆ ತರಲಾದ ತಿದ್ದುಪಡಿಯಂತೆ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್ ದಿನಾಂಕಗಳನ್ನು ಅರ್ಹತಾ ದಿನಾಂಕಗಳಾಗಿ ನಿಗದಿಪಡಿಸಲಾಗಿದೆ. ’ಎಸ್‍ಐಆರ್‍ನ ಗುರಿ: ಯಾವುದೇ ಅರ್ಹ ಮತದಾರರನ್ನು ಕೈಬಿಡುವಂತಿಲ್ಲ. ಯಾವುದೇ ಅನರ್ಹ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವಂತಿಲ್ಲ.’ ಎಸ್‍ಐಆರ್‍ನ ಪ್ರಮುಖ ಹಂತಗಳು: ಪೂರ್ವತಯಾರಿ, ತರಬೇತಿ ಮತ್ತು ಮುದ್ರಣ ಹಂತ, ಮನೆ ಮನೆಗೆ ಭೇಟಿ ಹಂತ, ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ ಹಂತ, ಕರಡು ಮತದಾರರ ಪಟ್ಟಿಯ ಪ್ರಕಟಣೆ ಹಂತ, ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಹಂತ ಹಾಗೂ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ ಹಂತ. ಪೂರ್ವ ತಯಾರಿ, ತರಬೇತಿ ಮತ್ತು ಮುದ್ರಣ: ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಮತದಾರರ ನೋಂದಣಾಧಿಕಾರಿಗಳಿಗೆ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ, ಚುನಾವಣಾ ತಹಶೀಲ್ದಾರರುಗಳಿಗೆ, ಮಾಸ್ಟರ್ ತರಬೇತುದಾರರಿಗೆ ಮತ್ತು ಟೆಕ್ನಿಕಲ್ ಪೆÇ್ರೀಗ್ರಾಮರ್ ಅವರಿಗೆ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಮತ್ತು ಐಟಿ ಅಪ್ಲಿಕೇಶನ್ ಬಗ್ಗೆ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ತರಬೇತಿ ನೀಡಲಾಗಿದೆ.
ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಬೂತ್ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರಿಗೆ ತರಬೇತಿಯನ್ನು ಮತದಾರರ ನೋಂದಣಾಧಿಕಾರಿಗಳು ನೀಡಲಿದ್ದಾರೆ. ಗಣತಿ ನಮೂನೆ ಮತ್ತು ಘೋಷಣೆ ಪತ್ರವನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಮುದ್ರಿಸಿ ಸರಬರಾಜು ಮಾಡಲಾಗುತ್ತದೆ. ಮನೆ ಮನೆ ಭೇಟಿ ಪೂರ್ವದಲ್ಲಿ ನಮೂನೆಗಳನ್ನು ಬಿಎಲ್‍ಒಗೆ ಒದಗಿಸಲಾಗುವುದು. ಮನೆ-ಮನೆ ಭೇಟಿ ಹಂತ: ಬೂತ್ ಮಟ್ಟದ ಅಧಿಕಾರಿಗಳು ಪ್ರತಿಯೊಂದು ಮನೆಗೆ ಬೇಟಿ ನೀಡಿ ಆಯಾಯ ಭಾಗದ ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರರಿಗೆ ಮತದಾರರ ಪೂರ್ವ ಮುದ್ರಿತ ವಿವರಗಳಿರುವ ಗಣತಿ ನಮೂನೆ ದ್ವಿಪ್ರತಿಯಲ್ಲಿ ವಿತರಿಸುತ್ತಾರೆ ಮತ್ತು ನಮೂನೆ ಭರ್ತಿ ಮಾಡಲು ಮಾರ್ಗದರ್ಶನ ನೀಡುತ್ತಾರೆ. ಗಣತಿ ಸಮಯದಲ್ಲಿ ಯಾವುದೇ ಮನೆಗೆ ಬೀಗ ಹಾಕಿರುವುದು ಅಥವಾ ಮುಚ್ಚಿರುವುದು ಕಂಡುಬಂದಲ್ಲಿ, ಗಣತಿ ನಮೂನೆಯನ್ನು ಆ ಮನೆಗೆ ತಲುಪಿಸಿ, ಹೋಗಲಾಗುವುದು ಮತ್ತು ಭರ್ತಿ ಮಾಡಿದ ನಮೂನೆಗಳನ್ನು ಸಂಗ್ರಹಿಸಲು ಬೂತ್ ಮಟ್ಟದ ಅಧಿಕಾರಿಗಳು ಕನಿಷ್ಠ ಮೂರು ಬಾರಿ ಆ ಮನೆಗೆ ಭೇಟಿ ನೀಡಲಿದ್ದಾರೆ. ಪ್ರತಿಯೊಬ್ಬ ಮತದಾರರು ಗಣತಿ ನಮೂನೆಯನ್ನು ಬೂತ್ ಮಟ್ಟದ ಅಧಿಕಾರಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಬೂತ್ ಮಟ್ಟದ ಅಧಿಕಾರಿಗಳು ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆಯನ್ನು ಸಂಗ್ರಹಿಸಲು ಮತ್ತೊಮ್ಮೆ ಪ್ರತಿಯೊಂದು ಮನೆಗೆ ಭೇಟಿ ನೀಡುತ್ತಾರೆ. ಭರ್ತಿ ಮಾಡಿದ ಗಣತಿ ನಮೂನೆ ಮತ್ತು ಅಗತ್ಯ ದಾಖಲೆಯ ಒಂದು ಪ್ರತಿಯನ್ನು ಪಡೆಯುತ್ತಾರೆ ಇನ್ನೊಂದು ಪ್ರತಿಗೆ ಸ್ವೀಕೃತಿಯನ್ನು ನೀಡುತ್ತಾರೆ. ಮತದಾರನು ದಾಖಲೆಗಳೊಂದಿಗೆ ಭರ್ತಿ ಮಾಡಿದ ನಮೂನೆಯನ್ನು ಆನ್‍ಲೈನ್‍ನಲ್ಲಿ ಅಪ್ ಲೋಡ್ ಮಾಡಬಹುದು. ಬೂತ್ ಮಟ್ಟದ ಅಧಿಕಾರಿಯು ಆ ಮತದಾರರ ಮನೆಗೆ ಭೇಟಿ ನೀಡಿದಾಗ ಆ ದಾಖಲೆ ಪರಿಶೀಲಿಸಲಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು ಇಸಿಐ ನೆಟ್ ಮೊಬೈಲ್ ಅಪ್ಲಿಕೇಷನ್ ಮೂಲಕ ಗಣತಿ ನಮೂನೆ ಮತ್ತು ದಾಖಲೆಗಳನ್ನು ಅಪ್ ಲೋಡ್ ಮಾಡುತ್ತಾರೆ. ನಂತರ ಬೂತ್ ಮಟ್ಟದ ಅಧಿಕಾರಿಗಳು ಎಲ್ಲಾ ಗಣತಿ ನಮೂನೆ ಮತ್ತು ದಾಖಲೆಗಳನ್ನು ಮತದಾರರ ನೋಂದಣಾಧಿಕಾರಿ / ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸುತ್ತಾರೆ. ಮನೆ ಮನೆ ಭೇಟಿ ಸಮಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಕನಿಷ್ಟ 30 ನಮೂನೆ-6 ಅನ್ನು ತೆಗೆದುಕೊಂಡು ಹೋಗುತ್ತಾರೆ. ಗಣತಿ ನಮೂನೆ ಸಲ್ಲಿಸಲು ವಿಫಲರಾಗುವ ಮತದಾರರನ್ನು ಮತಗಟ್ಟೆವಾರು Absent/Shifted/Death/Duplicate ಎಂದು ಪಟ್ಟಿ ಮಾಡಿ ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯಿತಿ ಕಚೇರಿ, ನಗರ ಸ್ಥಳೀಯ ಸಂಸ್ಥೆಗಳ ಕಚೇರಿ, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಸಾರ್ವಜನಿಕರ ಕಾಣುವ ಹಾಗೆ ಪ್ರಚಾರ ಪಡಿಸಲಾಗುವುದು. ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು. ಈ ಮತದಾರರನ್ನು ಕರಡು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವುದಿಲ್ಲ. ಮತದಾರರು ತಮ್ಮ ಹೆಸರು ಮತ್ತು ಹಿಂದಿನ ಎಸ್‍ಐಆರ್ ಮತದಾರರ ಪಟ್ಟಿಯಲ್ಲಿ ಸಂಬಂಧಪಟ್ಟ ಸಂಬಂಧಿಕರ ಹೆಸರನ್ನು https://voters.eci.gov.in/ ನಲ್ಲಿ ಪರಿಶೀಲಿಸಬಹುದು ಮತ್ತು ಗಣತಿ ನಮೂನೆಯಲ್ಲಿ ವಿವರ ಒದಗಿಸಬಹುದು. ಸಹಾಯಕ್ಕಾಗಿ, ಮತದಾರರು ಸಂಬಂಧಪಟ್ಟ ಬಿಎಲ್‍ಒಗಳನ್ನು ಸಂಪರ್ಕಿಸಬಹುದು. ಗಣತಿ ನಮೂನೆಯಲ್ಲಿ ಒದಗಿಸಲಾದ ಹಿಂದಿನ ಎಸ್‍ಐಆರ್ ಮತದಾರರ ಪಟ್ಟಿಗಳ ವಿವರಗಳು ಲಭ್ಯವಿಲ್ಲದ ಅಥವಾ ಡೇಟಾಬೇಸ್ಗೆ ಹೊಂದಿಕೆಯಾಗದ ಮತದಾರರಿಗೆ ಇಆರ್‍ಒ ನೋಟೀಸ್ ನೀಡುತ್ತಾರೆ. ನೋಟೀಸ್ ಸ್ವೀಕರಿಸಿದ ನಂತರ, ಮತದಾರರು ವಿವಿಧ ವರ್ಗಗಳ ಆಧಾರದ ಮೇಲೆ ದಾಖಲೆ ಒದಗಿಸಬೇಕು. 01.07.1987 ಕ್ಕಿಂತ ಮೊದಲು ಭಾರತದಲ್ಲಿ ಜನಿಸಿದರೆ ಜನ್ಮ ದಿನಾಂಕ ಅಥವಾ ಜನ್ಮ ಸ್ಥಳವನ್ನು ಗುರುತಿಸುವ ಯಾವುದೇ ದಾಖಲೆ ಸ್ವತಃ ಒದಗಿಸುವುದು. 01.07.1987 ರಿಂದ 02.12.2004 ರ ನಡುವೆ ಭಾರತದಲ್ಲಿ ಜನಿಸಿದರೆ. ಜನ್ಮ ದಿನಾಂಕ ಅಥವಾ ಜನ್ಮ ಸ್ಥಳವನ್ನು ಗುರುತಿಸುವ ಯಾವುದೇ ದಾಖಲೆಯನ್ನು ಸ್ವತಃ ಒದಗಿಸುವುದು. ತಂದೆ ಅಥವಾ ತಾಯಿಗೆ ಸಂಬಂಧಿಸಿದ ಜನ್ಮ ದಿನಾಂಕ ಅಥವಾ ಜನ್ಮ ಸ್ಥಳ ಗುರುತಿಸುವ ಯಾವುದೇ ದಾಖಲೆ ಒದಗಿಸುವುದು. 02.12.2004 ರ ನಂತರ ಭಾರತದಲ್ಲಿ ಜನಿಸಿದರೆ. ಜನ್ಮ ದಿನಾಂಕ ಅಥವಾ ಜನ್ಮ ಸ್ಥಳವನ್ನು ಗುರುತಿಸುವ ಯಾವುದೇ ದಾಖಲೆ ಸ್ವತಃ ಒದಗಿಸುವುದು. ತಂದೆಗೆ ಸಂಬಂಧಿಸಿದ ಜನ್ಮ ದಿನಾಂಕ ಅಥವಾ ಜನ್ಮ ಸ್ಥಳ ಗುರುತಿಸುವ ಯಾವುದೇ ದಾಖಲೆ ಒದಗಿಸುವುದು. ತಾಯಿಗೆ ಸಂಬಂಧಿಸಿದ ಜನ್ಮ ದಿನಾಂಕ ಅಥವಾ ಜನ್ಮ ಸ್ಥಳವನ್ನು ಗುರುತಿಸುವ ಯಾವುದೇ ದಾಖಲೆ ಒದಗಿಸುವುದು. ಪೊಷಕರು ಭಾರತೀಯರಲ್ಲದಿದ್ದರೆ, ನಿಮ್ಮ ಜನನದ ಸಮಯದಲ್ಲಿ ಅವರ ಪಾಸ್ಪೋರ್ಟ್ ಮತ್ತು ವೀಸಾದ ಪ್ರತಿಯನ್ನು ಒದಗಿಸುವುದು. ಭಾರತದ ಹೊರಗೆ ಜನಿಸಿದ್ದರೆ (ವಿದೇಶದಲ್ಲಿರುವ ಭಾರತೀಯ ಮಿಷನ್ ಸಂಸ್ಥೆ ನೀಡಿದ ಜನನ ನೋಂದಣಿ ಪುರಾವೆಯನ್ನು ಸಲ್ಲಿಸುವುದು), ನೋಂದಣಿ ಮೂಲಕ ಭಾರತೀಯ ಪೌರತ್ವವನ್ನು ಪಡೆದಿದ್ದರೆ (ಪೌರತ್ವ ನೋಂದಣಿ ಪ್ರಮಾಣ ಪತ್ರವನ್ನು ಸಲ್ಲಿಸಿಸುವುದು). ಸಲ್ಲಿಸಬೇಕಾದ ದಾಖಲೆಗಳ ಪಟ್ಟಿ: ಯಾವುದೇ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ/ ಸಾರ್ವಜನಿಕ ವಲಯ ಉದ್ಯಮದ ಖಾಯಂ ಉದ್ಯೋಗಿ/ ಪಿಂಚಣಿದಾರರಿಗೆ ನೀಡಿರುವ ಯಾವುದೇ ಗುರುತಿನ ಚೀಟಿ/ ಪಿಂಚಣಿ ಸಂದಾಯ ಆದೇಶ. ಭಾರತದಲ್ಲಿ 01.07.1987ಕ್ಕೂ ಮುಂಚೆ ಸರ್ಕಾರ/ ಸ್ಥಳೀಯ ಪ್ರಾಧಿಕಾರಗಳು/ ಬ್ಯಾಂಕುಗಳು/ ಅಂಚೆ ಕಚೇರಿ/ ಜೀವ ವಿಮಾ ನಿಗಮ/ ಸಾರ್ವಜನಿಕ ವಲಯ ಉದ್ಯಮಗಳು ನೀಡಿರುವ ಯಾವುದೇ ಗುರುತಿನ ಚೀಟಿ/ ಪ್ರಮಾಣಪತ್ರ/ ದಸ್ತಾವೇಜು. ಸಕ್ಷಮ ಪ್ರಾಧಿಕಾರವು ನೀಡಿರುವ ಜನನ ಪ್ರಮಾಣಪತ್ರ. ಪಾಸ್ಪೋರ್ಟ್. ಮಾನ್ಯತೆ ಪಡೆದ ಮಂಡಳಿಗಳು/ ವಿಶ್ವವಿದ್ಯಾಲಯಗಳು ನೀಡಿರುವ ಮೆಟ್ರಿಕ್ಯೂಲೇಷನ್/ ಶೈಕ್ಷಣಿಕ ಪ್ರಮಾಣಪತ್ರ. ರಾಜ್ಯದ ಸಕ್ಷಮ ಪ್ರಾಧಿಕಾರವು ನೀಡಿರುವ ಖಾಯಂ ನಿವಾಸ ಪ್ರಮಾಣಪತ್ರ. ಅರಣ್ಯ ಹಕ್ಕು ಪ್ರಮಾಣಪತ್ರ. ಸಕ್ಷಮ ಪ್ರಾಧಿಕಾರವು ನೀಡಿರುವ ಒಬಿಸಿ/ ಪ.ಜಾ/ಪ.ಪಂ ಅಥವಾ ಯಾವುದೇ ಜಾತಿ ಪ್ರಮಾಣಪತ್ರ. ರಾಷ್ಟ್ರೀಯ ಪೌರತ್ವ ರಿಜಿಸ್ಟರ್ (ಅದು ಎಲ್ಲಾದರೂ ಅಸ್ತಿತ್ವದಲ್ಲಿರಲಿ) ರಾಜ್ಯ/ ಸ್ಥಳೀಯ ಪ್ರಾಧಿಕಾರಗಳು ಸಿದ್ದಪಡಿಸಿದ ಕುಟುಂಬ ರಿಜಿಸ್ಟ್ರಾರ್. ಸರ್ಕಾರವು ನೀಡಿದ ಯಾವುದೇ ಜಮೀನು/ ಮನೆ ಹಂಚಿಕೆ ಪ್ರಮಾಣಪತ್ರ.
ಆಧಾರ್‍ಗೆ ಸಂಬಂಧಿಸಿದಂತೆ, ಆಯೋಗವು ದಿನಾಂಕ 09.09.2025ರ ಪತ್ರ ಸಂಖ್ಯೆ 23/2025-ERS/ಸಂಪುಟ II ರಲ್ಲಿ ಹೊರಡಿಸಲಾದ ನಿರ್ದೇಶನಗಳು ಅನ್ವಯಿಸುತ್ತವೆ. (ಆಧಾರ್ ಕಾರ್ಡ್ ಅನ್ನು ಗುರುತಿನ ಪುರಾವೆಯಾಗಿ ಸ್ವೀಕರಿಸಲಾಗುವುದು. ಆಧಾರ್ ಕಾರ್ಡ್ ಪೌರತ್ವ, ವಿಳಾಸ ಅಥವಾ ಜನ್ಮ ದಿನಾಂಕದ ಪುರಾವೆಯಾಗಿರುವುದಿಲ್ಲ.) ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ: ಮತದಾನವನ್ನು ಸುಗಮವಾಗಿ ನಡೆಸುವುದಕ್ಕಾಗಿ 1200 ಕ್ಕಿಂತ ಹೆಚ್ಚು ಮತದಾರರ ಇರುವ ಮತಗಟ್ಟೆಯನ್ನು ಪುನರ್ ವಿಂಗಡಣೆ ಮಾಡಲು ಭಾರತ ಚುನಾವಣಾ ಆಯೋಗವು ನಿರ್ದೇಶನ ನೀಡಿರುತ್ತದೆ. ಕುಟುಂಬದ ಎಲ್ಲಾ ಮತದಾರರು ಒಂದೇ ವಿಭಾಗದಲ್ಲಿ ಮತ್ತು ಒಂದೇ ಭಾಗದಲ್ಲಿ ಇರುವಂತೆ ಮಾಡುವುದು. ಸಾಧ್ಯವಾದಷ್ಟು ಮಟ್ಟಿಗೆ ಒಂದು ಬೀದಿಯಲ್ಲಿ ವಾಸಿಸುವ ಮತದಾರರನ್ನು ಒಂದೇ ವಿಭಾಗದಲ್ಲಿ ಸೇರ್ಪಡೆಗೊಳಿಸುವುದು. ಮತಗಟ್ಟೆಗಳ ಪುನರ್ ವಿಂಗಡಣೆ ಮಾಡುವಾಗ ರಾಜಕೀಯ ಪಕ್ಷಗಳ ಗಮನಕ್ಕೆ ತಂದು ಪ್ರಸ್ತಾವವನೆಯನ್ನು ಆಯೋಗಕ್ಕೆ ಸಲ್ಲಿಸಲಾಗುವುದು. ಕರಡು ಮತದಾರರ ಪಟ್ಟಿಯ ಪ್ರಕಟಣೆ: ಮತದಾರರ ನೋಂದಣಾಧಿಕಾರಿಯವರು ಗಣತಿ ನಮೂನೆಗಳನ್ನು ಸ್ವೀಕರಿಸಿದ ಎಲ್ಲಾ ಮತದಾರರನ್ನು ಸೇರ್ಪಡೆಗೊಳಿಸುವ ಮೂಲಕ ಕರಡು ಮತದಾರರ ಪಟ್ಟಿ ಸಿದ್ಧಪಡಿಸುತ್ತಾರೆ.
ಕರಡು ಮತದಾರರ ಪಟ್ಟಿಯು, ಮನೆ ಮನೆಗೆ (ಹೆಚ್ 2 ಹೆಚ್) ತೆರಳಿ ಗಣತಿ ನಡೆಸುವ ಅವಧಿಯಲ್ಲಿ ಗಣತಿ ನಮೂನೆಯನ್ನು ಸೂಕ್ತವಾಗಿ ಭರ್ತಿ ಮಾಡಿ ಬಿಎಲ್‍ಒಗೆ ಸಲ್ಲಿಸಿರುವ ಅಥವಾ ಆನ್‍ಲೈನ್‍ನಲ್ಲಿ ಸಲ್ಲಿಸಿ ಬಿಎಲ್‍ಒ ಅವರು ಪರಿಶೀಲಿಸಿರುವ ಎಲ್ಲಾ ಮತದಾರರ ಹೆಸರುಗಳನ್ನು ಒಳಗೊಂಡಿರುತ್ತದೆ.
ಗಣತಿ ನಮೂನೆಗಳನ್ನು ಸಲ್ಲಿಸದಿರುವ ಮತದಾರರ ಹೆಸರುಗಳನ್ನು ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಿಲ್ಲ. ಯಾರೇ ಮತದಾರರು ನಿಗದಿತ ಸಮಯದೊಳಗೆ ತಮ್ಮ ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಸಲ್ಲಿಸಲು ಸಾಧ್ಯವಾಗದಿದ್ದ ಸಂದರ್ಭದಲ್ಲಿ, ಅವರು ಕ್ಷೇಮು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ಸೇರ್ಪಡೆಗೊಳಿಸುವುದಕ್ಕಾಗಿ ನಿಗದಿತ ಘೋಷಣೆ ನಮೂನೆ (ಅನುಬಂಧ ಡಿ) ಜೊತೆಗೆ ನಮೂನೆ 6ನ್ನು ಸಲ್ಲಿಸಬಹುದು. ಮತದಾರರ ನೋಂದಣಾಧಿಕಾರಿಯವರು ನಮೂನೆ-5 ರಲ್ಲಿ ಕರಡು ಪ್ರಕಟಣೆಗಾಗಿ ನೋಟಿಸನ್ನು ಪ್ರಕಟಿಸುತ್ತಾರೆ. ಸೂಚನೆ ಹಂತ/ ಹಕ್ಕುಗಳು ಮತ್ತು ಆಕ್ಷೇಪಣೆಗಳ ಹಂತ: ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ದಿನಾಂಕದಿಂದ ಅಂದರೆ 05-08-2026 ರಿಂದ 04-09-2026ರ ವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಮತದಾರರ ನೋಂದಣಾಧಿಕಾರಿ/ ಸಹಾಯಕ ಮತದಾರರ ನೋಂದಣಾಧಿಕಾರಿಗೆ ಸಲ್ಲಿಸಬಹುದು. ಕರಡು ಮತದಾರರ ಪಟ್ಟಿಯಲ್ಲಿನ ಮತದಾರರ ಆರ್ಹತೆಯ ಬಗ್ಗೆ ಸಂದೇಹ ಬಂದಲ್ಲಿ, ಸ್ವಯಂಪ್ರೇರಿತ ವಿಚಾರಣೆಯನ್ನು ಪ್ರಾರಂಭಿಸಿ, ಅಂತಹ ಮತದಾರರನ್ನು ಯಾಕೆ ಮತದಾರರ ಪಟ್ಟಿಯಿಂದ ತೆಗೆಯಬಾರದು ಎಂಬ ಬಗ್ಗೆ ನೋಟಿಸನ್ನು ನೀಡಲಾಗುವುದು. ಕ್ಷೇತ್ರ ಪರಿಶೀಲನೆ, ದಾಖಲೆಗಳು ಅಥವಾ ಇತರೆ ಅಂಶವನ್ನಾಧರಿಸಿ, ಮತದಾರರ ನೋಂದಣಾಧಿಕಾರಿಯವರು ಅಂತಹ ಮತದಾರರನ್ನು ಅಂತಿಮ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಬಗ್ಗೆ ನಿರ್ಧರಿಸುತ್ತಾರೆ. ಅಂತಹ ಪ್ರತಿಯೊಂದು ಸಂದರ್ಭದಲ್ಲಿ ಲಿಖಿತ ಆದೇಶ ಹೊರಡಿಸುತ್ತಾರೆ. ಹೊಸ ಮತದಾರರಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ಸಲ್ಲಿಸುವವರು ಘೋಷಣೆ ನಮೂನೆಯೊಂದಿಗೆ ನಮೂನೆ-6 ರಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಥವಾ ಕ್ಷೇತ್ರದ ಹೊರಗೆ ನಿವಾಸವನ್ನು ಸ್ಥಳಾಂತರಿಸಲು, ನಮೂದುಗಳನ್ನು ಸರಿಪಡಿಸಲು, ಮತದಾನ ಗುರುತಿನ ಚೀಟಿ (ಎಪಿಕ್) ಯನ್ನು ಬದಲಾಯಿಸಲು ಮತ್ತು ವಿಕಲಚೇತನ ವ್ಯಕ್ತಿ (ಪಿಡಬ್ಲ್ಯೂ ಡಿ) ಯನ್ನು ಗುರುತು ಮಾಡಲು ನಮೂನೆ-8 ರಲ್ಲಿ ಸಲ್ಲಿಸಬಹುದು. ಕ್ಷೇಮುಗಳು ಮತ್ತು ಆಕ್ಷೇಪಣೆಗಳ ಪಟ್ಟಿಯನ್ನು ಪ್ರದರ್ಶಿಸುವುದು: ಮತದಾರರ ನೋಂದಣಾಧಿಕಾರಿಯವರು ನಮೂನೆ 9, 10, 11 ಮತ್ತು 11ಎ ಹಾಗೂ 11ಬಿ ಗಳಲ್ಲಿ ಕ್ಷೇಮುಗಳು ಮತ್ತು ಆಕ್ಷೇಪಣೆಗಳ ಪಟ್ಟಿಗಳನ್ನು ಸಿದ್ಧಪಡಿಸಿ ಒಂದು ಪ್ರತಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಚುರಪಡಿಸುತ್ತಾರೆ. ಕ್ಷೇಮುಗಳು ಮತ್ತು ಆಕ್ಷೇಪಣೆಗಳ ಪಟ್ಟಿಯನ್ನು ನಾಗರಿಕರು ನೋಡಲು ಅನುಕೂಲವಾಗುವ ಹಾಗೆ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗುವುದು. ಮತದಾರರ ನೋಂದಣಾಧಿಕಾರಿಯವರು ಪ್ರತಿ ವಾರ ಕ್ಷೇಮುಗಳು ಮತ್ತು ಆಕ್ಷೇಪಣೆಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ನೀಡುತ್ತಾರೆ ಹಾಗೂ ನಿರಂತರವಾಗಿ ಎಲ್ಲಾ ರಾಜಕೀಯ ಪಕ್ಷಗಳ ಸಭೆಯನ್ನು ಕರೆದು, ಅವರಿಗೆ ಕ್ಷೇಮುಗಳು ಮತ್ತು ಆಕ್ಷೇಪಣೆಗಳ ಪಟ್ಟಿಯನ್ನು ಹಸ್ತಾಂತರಿಸಿ ಸ್ವೀಕೃತಿ ಪಡೆದುಕೊಳ್ಳುತ್ತಾರೆ. ಪ್ರಜಾ ಪ್ರತಿನಿಧಿ, 1950ರ ಪ್ರಕರಣ 24ರ ಅಡಿಯಲ್ಲಿ ಮೇಲ್ಮನವಿಗಳು: ಮತದಾರರ ನೋಂದಣಾಧಿಕಾರಿಯವರ ಯಾವುದೇ ನಿರ್ಣಯದ ಮೇಲಿನ ಮೇಲ್ಮನವಿಯನ್ನು ಪ್ರಜಾ ಪ್ರತಿನಿಧಿ ಅಧಿನಿಯಮ, 1950ರ ಪ್ರಕರಣ24(ಎ) ಅಡಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಸಲ್ಲಿಸಬಹುದಾಗಿದೆ ಮತ್ತು ಮೊದಲ ಮೇಲ್ಮನವಿ ಪ್ರಾಧಿಕಾರದ ನಿರ್ಣಯದ ವಿರುದ್ಧ ಪ್ರಕರಣ 24(ಬಿ) ಅಡಿಯಲ್ಲಿನ ಎರಡನೇ ಮೇಲ್ಮನವಿಯನ್ನು ಮುಖ್ಯ ಚುನಾವಣಾಧಿಕಾರಿ ಅವರಿಗೆ ಸಲ್ಲಿಸಬಹುದಾಗಿದೆ. ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ: ದಿನಾಂಕ: 07-10-2026ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುವುದು ಹಾಗೂ ವೆಬ್‍ಸೈಟ್ ನಲ್ಲಿ ಅಪ್‍ಲೋಡ್ ಮಾಡಲಾಗುವುದು. ಬೂತ್ ಹಂತದ ಏಜೆಂಟರ ನೇಮಕ: ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯದ ಹಿನ್ನಲೆಯಲ್ಲಿ ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಾರ್ಟಿ ಪಕ್ಷದ ವತಿಯಿಂದ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡಿ ಪಟ್ಟಿ ಸಲ್ಲಿಸಲಾಗಿದೆ. ಉಳಿದ ಮಾನ್ಯತೆ ಪಡೆದಿರುವ ಎಲ್ಲಾ ರಾಜಕೀಯ ಪಕ್ಷಗಳು ಮತಗಟ್ಟೆ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು, ಮತಗಟ್ಟೆ ಅಧಿಕಾರಿಗಳ ಕಾರ್ಯವನ್ನು ಪರಿವೀಕ್ಷಿಸಲು ಹಾಗೂ ನ್ಯೂನತೆ ರಹಿತ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಅನುಕೂಲವಾಗುವಂತೆ ಪಕ್ಷದ ವತಿಯಿಂದ ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡಿ ಪಟ್ಟಿ ಸಲ್ಲಿಸಲು ಕೋರಲಾಗಿದೆ. ಮ್ಯಾಪಿಂಗ್ ವರದಿ: ಪ್ರಸ್ತುತ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯ ಪೂರ್ವಭಾವಿ ಕಾರ್ಯವಾಗಿ 2025 ರ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು 2002 ರ ಮತದಾರರ ಪಟ್ಟಿಯೊಂದಿಗೆ ಹೊಂದಾಣಿಕೆ ಮಾಡಿ, ಲಭ್ಯವಿರುವ ಮತದಾರರನ್ನು ಹಾಗೂ ಅವರ ಸಂತತಿ ವಿವರ ಜೋಡಣೆ ಮಾಡಲಾಗಿರುತ್ತದೆ. ಈ ಕಾರ್ಯದಲ್ಲಿ ಜಿಲ್ಲೆಯು ಶೇಕಡ 98.30% ಪ್ರಗತಿ ಸಾಧಿಸಲಾಗಿದೆ. ಉಳಿದ ಮತದಾರರನ್ನು ಜೋಡಣೆ ಮಾಡುವ ಕಾರ್ಯವು ಪ್ರಗತಿಯಲ್ಲಿದೆ. 208-ಮಡಿಕೇರಿ ವಿಧಾನಸಭಾ ಕ್ಷೇತ್ರದ ಸೋಮವಾರಪೇಟೆ ತಾಲ್ಲೂಕಿನಲ್ಲಿ ಒಟ್ಟು ಮತದಾರರು 88,305, ಒಟ್ಟು 86,953 ಮ್ಯಾಪಿಂಗ್ ಆಗಿದ್ದು, ಶೇ.98.47 ರಷ್ಟು ಪ್ರಗತಿಯಾಗಿದೆ. 1352 ಮತದಾರರು ಮ್ಯಾಪಿಂಗ್‍ಗೆ ಬಾಕಿ ಇದೆ.
ಕುಶಾಲನಗರ ತಾಲ್ಲೂಕಿನಲ್ಲಿ ಒಟ್ಟು ಮತದಾರರು 93,947, ಒಟ್ಟು 92872 ಮ್ಯಾಪಿಂಗ್ ಆಗಿದ್ದು, ಶೇ.98.86 ರಷ್ಟು ಪ್ರಗತಿ ಸಾಧಿಸಲಾಗಿದೆ. 1075 ಮತದಾರರು ಮ್ಯಾಪಿಂಗ್‍ಗೆ ಬಾಕಿ ಇದೆ. ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು ಮತದಾರರು 56,155, ಒಟ್ಟು 54890 ಮ್ಯಾಪಿಂಗ್ ಆಗಿದ್ದು, ಶೇ.97.75 ರಷ್ಟು ಪ್ರಗತಿ ಸಾಧಿಸಲಾಗಿದೆ. 1265 ಮತದಾರರು ಮ್ಯಾಪಿಂಗ್‍ಗೆ ಬಾಕಿ ಇದೆ. 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು ಮತದಾರರು 66,631, ಒಟ್ಟು 65,449 ಮ್ಯಾಪಿಂಗ್ ಆಗಿದ್ದು, ಶೇ.98.23 ರಷ್ಟು ಪ್ರಗತಿ ಸಾಧಿಸಲಾಗಿದೆ. 1182 ಮತದಾರರು ಮ್ಯಾಪಿಂಗ್‍ಗೆ ಬಾಕಿ ಇದೆ.
ವಿರಾಜಪೇಟೆ ತಾಲ್ಲೂಕಿನಲ್ಲಿ ಒಟ್ಟು ಮತದಾರರು 79,894, ಒಟ್ಟು 78,686 ಮ್ಯಾಪಿಂಗ್ ಆಗಿದ್ದು, ಶೇ.98.49 ರಷ್ಟು ಪ್ರಗತಿ ಸಾಧಿಸಲಾಗಿದೆ. 1208 ಮತದಾರರು ಮ್ಯಾಪಿಂಗ್‍ಗೆ ಬಾಕಿ ಇದೆ. ಪೊನ್ನಂಪೇಟೆ ತಾಲ್ಲೂಕಿನಲ್ಲಿ ಒಟ್ಟು ಮತದಾರರು 83,614, ಒಟ್ಟು 81,752 ಮ್ಯಾಪಿಂಗ್ ಆಗಿದ್ದು, ಶೇ.97.77 ರಷ್ಟು ಪ್ರಗತಿ ಸಾಧಿಸಲಾಗಿದೆ. 1862 ಮತದಾರರು ಮ್ಯಾಪಿಂಗ್‍ಗೆ ಬಾಕಿ ಇದೆ. ಮತದಾರರ ಒಟ್ಟು ಸಂಖ್ಯೆ 4,68,546, ಮ್ಯಾಪಿಂಗ್ ಮಾಡಲಾದ ಮತದಾರರ ಸಂಖ್ಯೆ 4,60,602 ಆಗಿದ್ದು, ಶೇ.98.30 ರಷ್ಟು ಪ್ರಗತಿ ಸಾಧಿಸಲಾಗಿದೆ. 7944 ಮತದಾರರ ಮ್ಯಾಪಿಂಗ್ ಬಾಕಿ ಇದೆ.
ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಕ್ಕೆ ಮತದಾರರ ನೋಂದಣಾಧಿಕಾರಿಗಳ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, 208-ಮಡಿಕೇರಿ ಕ್ಷೇತ್ರಕ್ಕೆ ಉಪ ವಿಭಾಗಧಿಕಾರಿ ನಿತಿನ್ ಚಕ್ಕಿ, 209-ವಿರಾಜಪೇಟೆ ಕ್ಷೇತ್ರಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಆರ್.ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ. ಸಹಾಯಕ ಮತದಾರರ ನೋಂದಣಾಧಿಕಾರಿಗಳಾಗಿ ತಾಲ್ಲೂಕು ತಹಶೀಲ್ದಾರ್‍ಗಳನ್ನು ನೇಮಕ ಮಾಡಲಾಗಿದೆ ಎಂದರು. ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯಲ್ಲಿ ಜಿಲ್ಲೆಯಲ್ಲಿ 552 ಬಿಎಲ್‍ಒಗಳು ಹಾಗೂ 96 ಬಿಎಲ್‍ಒ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. 208-ಮಡಿಕೇರಿ ವಿಧಾನಸಭಾ ಕ್ಷೇತ್ರದ 275 ಬಿಎಲ್‍ಒಗಳು, 35 ಬಿಎಲ್‍ಒ ಮೇಲ್ವಿಚಾರಕರು, 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 277 ಬಿಎಲ್‍ಒಗಳು ಮತ್ತು 61 ಬಿಎಲ್‍ಒ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ವಿವರಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಂಗಾರು : ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ*

ಜೂನ್ 6, 2026

*ಪೊನ್ನಂಪೇಟೆ : ಜೂ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಜೂನ್ 6, 2026

*ಕಲೆಯ ನಡಿಗೆ ಜನರ ಬಳಿಗೆ ಅದ್ಭುತ ಕಲ್ಪನೆ : ತೆನ್ನಿರ ಮೈನಾ* 

ಜೂನ್ 6, 2026

*ಪೊನ್ನಂಪೇಟೆ : ಜೂ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಜೂನ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.6 NEWS DESK : ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12-ಪಾಲಿಬೆಟ್ಟ, ಎಪ್13- ಹೊಸೂರು,…

*ಕಲೆಯ ನಡಿಗೆ ಜನರ ಬಳಿಗೆ ಅದ್ಭುತ ಕಲ್ಪನೆ : ತೆನ್ನಿರ ಮೈನಾ* 

ಜೂನ್ 6, 2026

*ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ಅಗತ್ಯ ಸಹಕಾರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮನವಿ*

ಜೂನ್ 6, 2026

*ಫಲಾನುಭವಿಗಳಿಗೆ ನೂತನ ಮನೆ ನಿರ್ಮಾಣ ಕಾಮಗಾರಿ ಆದೇಶ ಪ್ರತಿ ವಿತರಣೆ : ನಿವೇಶನ ಮತ್ತು ವಸತಿ ರಹಿತರಿಗೆ ವಸತಿ ನೀಡುವುದು ಸರ್ಕಾರದ ಕರ್ತವ್ಯ : ಶಾಸಕ ಎ.ಎಸ್.ಪೊನ್ನಣ್ಣ*

ಜೂನ್ 6, 2026

*ಜಿಎಸ್‌ಟಿ ಮತ್ತು ಆದಾಯ ತೆರಿಗೆ ಶಿಕ್ಷಣ : ಸಹಕಾರ ಕ್ಷೇತ್ರ ರೈತರ ಬೆನ್ನುಲುಬು : ರಾಬಿನ್ ದೇವಯ್ಯ ಬಣ್ಣನೆ*

ಜೂನ್ 6, 2026

*ಅಮ್ಮ ಕೊಡವ ಸಮಾಜದ ಕಾಮಗಾರಿಗೆ ಭೂಮಿಪೂಜೆ*

ಜೂನ್ 6, 2026

*ಬೇಟೋಳಿ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ನಂದಾದೀಪ ಹಾಗೂ ಧರ್ಮಶಾಸ್ತ್ರ ಸಂಘದ ವಾರ್ಷಿಕೋತ್ಸವ ಆಚರಣೆ*

ಜೂನ್ 5, 2026

*ಶ್ರೀಮಂಗಲ : ಜೂ.6 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಜೂನ್ 5, 2026

*ಮಡಿಕೇರಿಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸಿ : ಹಿರಿಯ ಸಿವಿಲ್ ನ್ಯಾಯಧೀಶೆ ಶುಭ*

ಜೂನ್ 5, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಸಭೆ*

ಜೂನ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.