Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುಂಗಾರು : ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುಂಗಾರು : ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ*

ಜೂನ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.6 NEWS DESK : ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಪ್ರಾರಂಭವಾಗಿದ್ದು, ಮುಂದಿನ ಮುಂಗಾರು ಮಳೆಗಾಲದ ದಿನಗಳಲ್ಲಿ ನದಿಪಾತ್ರಗಳಲ್ಲಿ ನೀರಿನ ಹರಿವು ಹೆಚ್ಚಾಗಲಿದ್ದು, ಸಾರ್ವಜನಿಕರ ಸುರಕ್ಷತೆಯ ಮತ್ತು ಸಾರ್ವಜನಿಕ ಆಸ್ತಿ ಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಮರಳುಗಾರಿಕೆ, ಮರದ ದಿಮ್ಮಿಗಳ ಸಾಗಾಣೆ ಮತ್ತು ಇತರೆ ಸರಕು ಸಾಗಾಣಿಕೆಯನ್ನು ಕೊಡಗು ಜಿಲ್ಲೆಯಾದ್ಯಂತ ಮಳೆಗಾಲ ಪ್ರಾರಂಭವಾದಾಗಿನಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂದಿಸುವ ಬಗ್ಗೆ ತೀರ್ಮಾನಿಸಲಾಗಿರುತ್ತದೆ. ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ಆದ್ದರಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ (5) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರದಂತೆ ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜೂನ್, 10 ರಿಂದ ಜುಲೈ, 09 ರವರೆಗೆ ವಾಹನ ಸಂಚಾರ ವ್ಯವಸ್ಥೆ ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ನಿರ್ಭಂದಿತ ವಾಹನಗಳು: ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ಆರ್ಟಿಕ್ಯೂಲೇಟೆಡ್ ವಾಹನಗಳು. ನಿರ್ಭಂದದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು (ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ). ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕ ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ, ಇವರಿಗೆ ಅನುಮತಿಸಿದೆ. ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದೆ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.