Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.13 ರಂದು ಬಸವ ಜಯಂತಿ, ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂ.13 ರಂದು ಬಸವ ಜಯಂತಿ, ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳ ಜಯಂತಿ ಆಚರಣೆ*

ಜೂನ್ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜೂ.8 NEWS DESK : ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಮಾಜ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಯುವ ಘಟಕದ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ, ಸಿದ್ಧಗಂಗಾ ಮಠದ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ ಜಯಂತಿ, ಜಗದ್ಗುರು ರೇಣುಕಾಚಾರ್ಯ ಜಯಂತಿ 250 ವರ್ಷ ಕೊಡಗನ್ನು ಆಳಿದ ಹಾಲೇರಿ ಅರಸರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹೆಮ್ಮನೆ ಪುಟ್ಟಬಸಪ್ಪ(ಕಲ್ಯಾಣಸ್ವಾಮಿ) ಅವರ ಸಂಸ್ಕರಣೋತ್ಸವ ಕಾರ್ಯಕ್ರಮ ಜೂ.13 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಪೆÇೀಕ್ಷೇತ್ರ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮಿಗಳು ಶನಿವಾರ ಶನಿವಾರಸಂತೆಯ ಗುಡುಗಳಲೆ ಜಯದೇವ ಜಾತ್ರಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಬೆಳಿಗ್ಗೆ 8 ಗಂಟೆಗೆ ಮದ್ಯಪೇಟೆ ವಿಶ್ವೇಶ್ವರ ದೇವಾಲಯದಿಂದ ಗುಡುಗಳಲೆ ಜಾತ್ರಾ ಮೈದಾನದವರೆಗೆ ಶ್ರೀ ರೇಣುಕಾಚಾರ್ಯರ, ಜಗಜ್ಯೋತಿ ಬಸವೇಶ್ವರರ, ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳವರ, ಮನೆಹಳ್ಳಿ ಮಠದ ಅನಘ ನಿರಂಜನ ಶ್ರೀ ಗುರು ಸಿದ್ಧವೀರೇಶ್ವರ ಸ್ವಾಮಿಗಳ ಪ್ರಸ್ತುತ ಕೊಡಗಿನ ವೀರಶೈವ ಲಿಂಗಾಯತ ಮಠಗಳ ಪೂಜ್ಯರುಗಳ, ಹಾಲೇರಿ ಅರಸರ ಮತ್ತು ಸ್ವಾಂತತ್ರ್ಯ ಹೋರಾಟಗಾರ ಹೆಮ್ಮನೆ ಶ್ರೀ ಪುಟ್ಟಬಸಪ್ಪನವರ ಭಾವಚಿತ್ರಗಳೊಂದಿಗೆ ಹಾಗೂ ಕಳಸ-ಕನ್ನಡಿ, ಷಟಸ್ಥಲ ಧ್ವಜ, ವೀರಗಾಸೆ ಕುಣಿತ ಹಾಗೂ ವಾದ್ಯ-ವೈಭವಗಳೊಂದಿಗೆ ಆಕರ್ಷಕ ಮೆರವಣಿಗೆ ಸಾಗಲಿದೆ. ಬೆಳಿಗ್ಗೆ 10.30 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ತುಮಕೂರು ಶ್ರೀ ಸಿದ್ದಗಂಗಾ ಮಠದ ಶಿವ ಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮಹಾಂತ ಶಿವಲಿಂಗ ಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗ್ರಾಮಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಂತಮಲ್ಲಿಕಾರ್ಜುನ ಮಹಾಸ್ವಾಮಿ, ಚನ್ನಬಸವ ದೇಶೀಕೇಂದ್ರ ಮಹಾಸ್ವಾಮಿ, ಮಹಾಂತ ಮಹಾಸ್ವಾಮಿ, ಸದಾಶಿವ ಮಹಾಸ್ವಾಮಿ, ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ, ಇಮ್ಮಡಿ ಶಿವಲಿಂಗ ಮಹಾಸ್ವಾಮಿಗಳವರು, ಮಲ್ಲೇಶ ಮಹಾಸ್ವಾಮಿ, ಸ್ವತಂತ್ರ ಬಸವಲಿಂಗ ಮಹಾಸ್ವಾಮಿ, ರುದ್ರಮುನಿ ಮಹಾಸ್ವಾಮಿ, ನಿಶ್ಚಲ ನಿರಂಜನ ದೇಶೀಕೇಂದ್ರ ಮಹಾಸ್ವಾಮಿ ಮತ್ತಿತರ ಪ್ರಮುಖರು ಉಪಸ್ಥಿತರಿರುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರು ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪುಸ್ತಕ ಬಿಡುಗಡೆ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಭಾವಚಿತ್ರ ಅನಾವರಣ ಮಾಡಲಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಹಾಂತ ಶಿವಲಿಂಗ ಸ್ವಾಮಿಗಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಮಾಯಮುಡಿ ಸುರೇಶ್, ಕಾರ್ಯದರ್ಶಿ ಸೋಹನ್ ಸಿ.ಎನ್, ಖಜಾಂಚಿ ಭರತ್ ಸಿ.ಎನ್ ಹಾಗೂ ಯುವ ಘಟಕದ ಅಧ್ಯಕ್ಷ ಮೋಕ್ಷಿಕ್ ರಾಜ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.