
ಮಡಿಕೇರಿ ಜೂ.9 NEWS DESK : ಕೊಡಗು ಜಿಲ್ಲಾ ಮರಾಠ / ಮರಾಟಿ ಸಮಾಜ ಸೇವಾ ಸಂಘ ಹಾಗೂ ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಸಂಯುಕ್ತಾಶ್ರಯದಲ್ಲಿ ಸಂಘದ 30ನೇ ವಾರ್ಷಿಕ ಮಹಾಸಭೆ ಜೂ.14 ರಂದು ತಾಳತ್ತಮನೆಯ ಸಂಘದ ಕಟ್ಟಡದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಎಂ.ಎಂ.ಪರಮೇಶ್ವರ್ ಪ್ರಕಟಣೆಯಲ್ಲಿ ತಿಳಿಸಿದರು. ಅಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಕೊಡಗು ಜಿಲ್ಲಾ ಮರಾಠ / ಮರಾಟಿ ಸಮಾಜ ಸೇವಾ ಸಂಘದ ಎಂ.ಎಂ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯನ್ನು ಕರ್ನಾಟಕ ಮರಾಟಿ ಒಕ್ಕೂಟದ ಅಧ್ಯಕ್ಷರಾದ ಡಾ.ಕೆ.ಸುಂದರನಾಯ್ಕ್(ಐಎಫ್‍ಎಸ್) ಅವರು ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಯ ಮುಖ್ಯ ವಿಜ್ಞಾನಿ ಎಂ.ಟಿ.ಶೋಭಾವತಿ, ಉದ್ಯಮಿ ಉಮೇಶ್ ನಾಯ್ಕ್, ಸಂಘದ ಉಪಾಧ್ಯಕ್ಷೆ ದೇವಕಿ ಜಿ.ಆರ್.ನಾಯ್ಕ್, ಅಂಭಾಭವಾನಿ ಯುವಕ-ಯುವತಿ ಕ್ರೀಡಾ ಮತ್ತು ಮನೋರಂಜನಾ ಸಂಘದ ಅಧ್ಯಕ್ಷ ಎಂ.ಆರ್.ಮೋಹನ್, ಮಹಿಳಾ ವೇದಿಕೆ ಅಧ್ಯಕ್ಷೆ ರತ್ನಮಂಜರಿ ನರಸಿಂಹ, ಕಟ್ಟದ ಸಮಿತಿ ಅಧ್ಯಕ್ಷ ಎಂ.ಟಿ.ಗುರುವಪ್ಪ, ಉಪಸಮಿತಿಗಳ ಅಧ್ಯಕ್ಷರಾದ ಕೆ.ಜಿ.ಹೊನ್ನಪ್ಪ, ಧನಂಜಯ್, ವೆಂಕಪ್ಪ, ನಿರಲ್ ಕುಮಾರ್, ಕೆ.ಜೆ.ಶಶಿಕುಮಾರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. :: ಪ್ರತಿಭಾ ಪುರಸ್ಕಾರ : : 2024-25 ಮತ್ತು 2025-26ನೇ ಸಾಲಿನಲ್ಲಿ 7ನೇ ತರಗತಿ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ವೃತ್ತಿಪರ ಪದವಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಜೂ.10ರೊಳಗೆ ಅಂಕಪಟ್ಟಿಯನ್ನು ತಾಳತ್ತಮನೆ ವಿಳಾಸಕ್ಕೆ ಕಳುಹಿಸತಕ್ಕದ್ದು ಎಂದು ತಿಳಿಸಿದ್ದಾರೆ. ಮಧ್ಯಾಹ್ನ 12 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಜೂ.10ರೊಳಗೆ ರತ್ನಮಂಜರಿ 9481469250 ಸಂಖ್ಯೆಯನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ 9449855345 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.









