Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*
  • *ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*
  • *ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*
  • *ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*
  • *ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*
  • *ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*
  • *ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*
  • *ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಮಿತಿ ಮೀರಿದ ವನ್ಯಜೀವಿ ದಾಳಿ : ಐದು ಜಿಲ್ಲೆಗಳಿಂದ ವಿಧಾನಸೌಧಕ್ಕೆ ಮುತ್ತಿಗೆ : ಬಿಜೆಪಿ ನಿರ್ಧಾರ*

ಜೂನ್ 10, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜೂ.10 : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ವನ್ಯಜೀವಿಗಳ ಹಾವಳಿ ಮಿತಿ ಮೀರಿದೆ. ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರಕಾರದ ವಿರುದ್ಧ ಬೆಂಗಳೂರು ಚಲೋ ಮತ್ತು ವಿಧಾನಸೌಧಕ್ಕೆ ಮುತ್ತಿಗೆ ಹೋರಾಟವನ್ನು ಬಿಜೆಪಿ ರೂಪಿಸಲಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಅವರು ರಾಜ್ಯದ ಕೊಡಗು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಈ ಐದು ಜಿಲ್ಲೆಗಳ ಜನರನ್ನು ಒಗ್ಗೂಡಿಸಿ ಬೆಂಗಳೂರು ಚಲೋ ಹೋರಾಟ ನಡೆಸಲಾಗುವುದು ಎಂದರು. ವನ್ಯಜೀವಿಗಳ ನಿರಂತರ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಇದರಿಂದ ಆತಂಕಗೊoಡಿರುವ ರೈತರು ಹಾಗೂ ಕಾರ್ಮಿಕರು ತೋಟಗಳಿಗೆ ತೆರಳಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಬಿಟ್ಟಿ ಭಾಗ್ಯಗಳಿಗೆ ರೂ.56 ಸಾವಿರ ಕೋಟಿ ಖರ್ಚು ಮಾಡುತ್ತಿರುವ ಸರಕಾರ ಐದು ಜಿಲ್ಲೆಗಳಲ್ಲಿ ಕಾಡಾನೆ ದಾಳಿ ತಡೆಗೆ ಶಾಶ್ವತ ಪರಿಹಾರ ರೂಪಿಸಲು 2 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕು. ಅರಣ್ಯ ಪ್ರದೇಶದಲ್ಲಿ ಆನೆಗಳ ಸಂತತಿ ಹೆಚ್ಚಾಗುತ್ತಿದ್ದು, ಆಹಾರದ ಕೊರತೆ ಎದುರಾಗಿದೆ. ಹೆಚ್ಚಾಗಿರುವ ಆನೆಗಳ ನಿರ್ವಹಣೆ ಮತ್ತು ಆಹಾರವನ್ನು ಬೆಳೆಸಲು 2 ಸಾವಿರ ಎಕರೆ ಪ್ರದೇಶವನ್ನು ಮೀಸಲಿಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ “ಸಿ ಮತ್ತು ಡಿ ಭೂಮಿ” ಹಾಗೂ ಪೈಸಾರಿ ಜಾಗಗಳ ಮಂಜೂರಾತಿ ದೊರೆಯುತ್ತಿಲ್ಲ. ಮರದ ಮಾಲೀಕರಿಗೆ ಅರಣ್ಯ ಇಲಾಖೆಯಿಂದ ವಿನಾಕಾರಣ ತೊಂದರೆಗಳು ಎದುರಾಗುತ್ತಿದೆ ಎಂದು ಸುಜಾ ಕುಶಾಲಪ್ಪ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ 2010ರಲ್ಲಿ ಮೊದಲ ಬಾರಿಗೆ ಬಿಜೆಪಿ ಸರಕಾರ ಕಾಡಾನೆಗಳ ಹಾವಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಮತ್ತು ಕಂದಕ ನಿರ್ಮಾಣದ ಯೋಜನೆಯನ್ನು ಅನುಷ್ಠಾನಗೊಳಿಸಿತು. ಈ ಸಂದರ್ಭ ಕಾಡಾನೆಗಳ ದಾಳಿ ನಿಯಂತ್ರಣಕ್ಕೆ ಬಂದಿತ್ತು. ಆದರೆ ಕಾಂಗ್ರೆಸ್ ಸರಕಾರ ರೈಲ್ವೆ ಬ್ಯಾರಿಕೇಡ್ ಮತ್ತು ಕಂದಕದ ನಿರ್ವಹಣೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರ ಪರಿಣಾಮವೇ ಕಾಡಾನೆಗಳ ದಾಳಿ ಮಿತಿ ಮೀರಲು ಕಾರಣವೆಂದು ಟೀಕಿಸಿದರು.
ವನ್ಯಜೀವಿಗಳ ದಾಳಿ ತಡೆಯ ಕುರಿತು ಕೇಂದ್ರ ಸರಕಾರದ ಮೇಲೆ ಗೂಬೆ ಕೋರಿಸಲಾಗುತ್ತಿದೆ. ರಾಜ್ಯ ಸರಕಾರ ಪ್ರಸ್ತಾವನೆ ಸಲ್ಲಿಸದೆ ಕೇಂದ್ರದಿAದ ಅಗತ್ಯ ಅನುದಾನ ಬಿಡುಗಡೆಯಾಗಲು ಸಾಧ್ಯವಿಲ್ಲ. ಕೇರಳ ಸರಕಾರ ಪ್ರಸ್ತಾವನೆ ಸಲ್ಲಿಸಿ ಕೇಂದ್ರದಿoದ ಅನುದಾನ ತಂದಿದೆ. ಆದರೆ ಕರ್ನಾಟಕ ಸರಕಾರ ಪ್ರಸ್ತಾವನೆ ಸಲ್ಲಿಸುವ ಗೋಜಿಗೇ ಹೋಗದೆ ವಿನಾಕಾರಣ ಕೇಂದ್ರ ಸರಕಾರವನ್ನು ಟೀಕಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನೂತನ ಮುಖ್ಯಮಂತ್ರಿಗಳು ಮೂಲ ಸಮಸ್ಯೆಗಳ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಅವರು ಪ್ರತಿನಿಧಿಸುವ ರಾಮನಗರ ಜಿಲ್ಲೆಯಲ್ಲೂ ಕಾಡಾನೆಗಳ ದಾಳಿಯಾಗುತ್ತಿದೆ. ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಎಷ್ಟು ಮನವಿಗಳನ್ನು ಸಲ್ಲಿಸಿದೆ ಎನ್ನುವುದನ್ನು ಮೊದಲು ಬಹಿರಂಗ ಪಡಿಸಬೇಕು ಎಂದು ಒತ್ತಾಯಿಸಿದರು. ಕೊಡಗಿನಲ್ಲಿ ನಿರಂತರವಾಗಿ ಕಾಡಾನೆಗಳ ದಾಳಿಯಾಗುತ್ತಿದ್ದು, ದಕ್ಷ ಹಿರಿಯ ಅಧಿಕಾರಿಯ ಪತ್ನಿ ಅಸುನೀಗಿದ್ದಾರೆ. ಮಾನವ ಜೀವಗಳಿಗೆ ಇಲ್ಲಿ ಬೆಲೆ ಇಲ್ಲದಾಗಿದೆ, ಆದರೆ ಜಿಲ್ಲೆಯನ್ನು ಪ್ರತಿನಿಧಿಸುವವರು ಕಾಡಾನೆಗಳ ದಾಳಿಯನ್ನು ತಡೆಯುವ ಯೋಜನೆ ಅನುಷ್ಠಾನಗೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರವನ್ನಷ್ಟೇ ಗಿಟ್ಟಿಸಿಕೊಳ್ಳುತ್ತಿದ್ದಾರೆ. ರಾಜ್ಯ ಸರಕಾರ ಬಜೆಟ್ ನಲ್ಲಿ ವನ್ಯಜೀವಿಗಳ ನಿಯಂತ್ರಣಕ್ಕೆ ಅನುದಾನವನ್ನು ಘೋಷಿಸುತ್ತಿದ್ದು, ಇದು ಬೋಗಸ್ ಆಗಿದೆ. ಸರಕಾರದ ಬಳಿ ಹಣವೇ ಇಲ್ಲವೆಂದು ಕೆ.ಜಿ.ಬೋಪಯ್ಯ ಟೀಕಿಸಿದರು. ಕಾಡಾನೆಗಳ ದಾಳಿ ತಡೆಗೆ ರೈಲ್ವೆ ಬ್ಯಾರಿಕೇಡ್ ಮತ್ತು ಕಂದಕಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಹಾಗೂ ಶಾಶ್ವತ ಯೋಜನೆಯನ್ನು ರೂಪಿಸಬೇಕು. ಈ ಬೇಡಿಕೆ ಈಡೇರುವವರೆಗೆ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದರು. ಹೊಸ ಶಾಸಕರು ಎನ್ನುವ ಕಾರಣಕ್ಕಾಗಿ ಸಮಸ್ಯೆಗಳನ್ನು ಬಗೆಹರಿಸಲು ಇಲ್ಲಿಯವರೆಗೆ ಅವಕಾಶ ನೀಡಲಾಯಿತು. ಆದರೆ ಸಮಸ್ಯೆ ಮಿತಿ ಮೀರಿರುವುದರಿಂದ ಹೋರಾಟ ಅನಿವಾರ್ಯವಾಗಿದೆ ಎಂದರು.
ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ ಜೂ.13 ರಂದು ಬಿಜೆಪಿ ರಾಜ್ಯಾಧ್ಯಕ್ಷರು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ವನ್ಯಜೀವಿ ದಾಳಿಯನ್ನು ನಿಯಂತ್ರಿಸಲಾಗದ ಸರಕಾರದ ವಿರುದ್ಧ ಹಂತಹAತವಾಗಿ ಹೋರಾಟವನ್ನು ರೂಪಿಸುವ ಕುರಿತು ಸಮಾಲೋಚನೆ ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಈಗ ಅಧಿಕಾರದಲ್ಲಿರುವ ಶಾಸಕರುಗಳು ಚುನಾವಣೆ ಸಂದರ್ಭ ಗೆದ್ದು ಬಂದರೆ ವನ್ಯಜೀವಿ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಕಾಡುಪ್ರಾಣಿಗಳ ದಾಳಿ ಮಿತಿ ಮೀರಿದೆಯೇ ಹೊರತು ಯಾವುದೇ ಪರಿಹಾರ ದೊರೆತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಸದಸ್ಯ ರಾಬಿನ್ ದೇವಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿ.ಕೆ.ಲೋಕೇಶ್ ಹಾಗೂ ಮಹೇಶ್ ಜೈನಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*

ಆಗಷ್ಟ್ 15, 2026

*ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 2026

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*

ಆಗಷ್ಟ್ 15, 2026

*ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.15 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಅಧ್ಯಕ್ಷ…

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*

ಆಗಷ್ಟ್ 15, 2026

*ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*

ಆಗಷ್ಟ್ 15, 2026

*ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*

ಆಗಷ್ಟ್ 15, 2026

*ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*

ಆಗಷ್ಟ್ 15, 2026

*ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*

ಆಗಷ್ಟ್ 15, 2026

*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಆಗಷ್ಟ್ 15, 2026

*ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ*

ಆಗಷ್ಟ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.