
ಮಡಿಕೇರಿ NEWS DESK ಜೂ.11 : ಮಡಿಕೇರಿ ಲಯನ್ಸ್ ಸಂಸ್ಥೆಯ 2026-27ನೇ ಸಾಲಿನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಎಲ್., ಕಾರ್ಯದರ್ಶಿಯಾಗಿ ಕೆ.ಮಧುಕರ್ ಹಾಗೂ ಕೋಶಾಧಿಕಾರಿಯಾಗಿ ಅಂಬೆಕಲ್ ನವೀನ್ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.27ರಂದು ಸಂಜೆ 7 ಗಂಟೆಗೆ ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ನಡೆಯಲಿದೆ. ಲಯನ್ಸ್ ಜಿಲ್ಲೆ 317ಸಿ ಯ ಪ್ರಥಮ ಉಪ ಜಿಲ್ಲಾ ಗವರ್ನರ್ ಲಯನ್ ಹರಿಪ್ರಸಾದ್ ರೈ ಅವರು ಪದಗ್ರಹಣಾಧಿಕಾರಿಯಾಗಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ದೀಕ್ಷೆಯನ್ನು ಬೋಧಿಸಲಿದ್ದಾರೆ.








