Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*
  • *ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*
  • *ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*
  • *ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*
  • *ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *
  • *ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*
  • *ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*
  • *ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*
  • *ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*
  • *ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಸೈನಿಕ ಶಾಲೆಯ ರಾಷ್ಟ್ರೀಯ ಫುಟ್ಬಾಲ್ ಸಮಾರೋಪ : ರಾಷ್ಟ್ರೀಯ ಚಿಂತನೆ ಮೂಡಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಹಿರಿದು : ಕೇರಳಂ-ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಸೈನಿಕ ಶಾಲೆಯ ರಾಷ್ಟ್ರೀಯ ಫುಟ್ಬಾಲ್ ಸಮಾರೋಪ : ರಾಷ್ಟ್ರೀಯ ಚಿಂತನೆ ಮೂಡಿಸುವಲ್ಲಿ ಸೈನಿಕ ಶಾಲೆಗಳ ಪಾತ್ರ ಹಿರಿದು : ಕೇರಳಂ-ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್*

ಜೂನ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.11 NEWS DESK : ದೇಶಭಕ್ತಿ, ಸಮಗ್ರತೆಯ ಪರಿಕಲ್ಪನೆ, ನಾಯಕತ್ವದ ಗುಣಗಳೊಂದಿಗೆ, ರಾಷ್ಟ್ರೀಯ ಸೇವೆಯ ಮೌಲ್ಯಗಳನ್ನು ಯುವ ಸಮೂಹದಲ್ಲಿ ಮೂಡಿಸುವ ಮೂಲಕ, ಅವರನ್ನು ಭವಿಷ್ಯಕ್ಕೆ ಸಜ್ಜುಗೊಳಿಸುವ ಕಾರ್ಯದಲ್ಲಿ ಸೈನಿಕ ಶಾಲೆಗಳು ಮಹತ್ವದ ಪಾತ್ರ ವಹಿಸಿರುವುದಾಗಿ ಕೇರಳ ಮತ್ತು ತಮಿಳುನಾಡಿನ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ತಿಳಿಸಿದರು. ಕೂಡಿಗೆಯ ಕೊಡಗು ಸೈನಿಕ ಶಾಲೆಯಲ್ಲಿ ಆಯೋಜಿತ ಪ್ರತಿಷ್ಠಿತ “ಪ್ರಿ ಸುಬ್ರೋಟೋ ಕಪ್-2026” ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ರಾಜ್ಯಪಾಲರು ಮಾತನಾಡಿದರು. ರಾಷ್ಟ್ರದ ವಿವಿಧೆsಡೆಗಳ ಸೈನಿಕ ಶಾಲೆಗಳ ಯುವ ಫುಟ್ಬಾಲ್ ಆಟಗಾರರು ಪಂದ್ಯಾವಳಿಯಲ್ಲಿ ಶಿಸ್ತಿನಿಂದ ಪಾಲ್ಗೊಂಡು ಪ್ರದರ್ಶಿಸಿರುವ ಕ್ರೀಡಾ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಕೊಡಗು ಸೈನಿಕ ಶಾಲೆಯನ್ನು ಶ್ಲಾಘಿಸಿದರು. ಸೈನಿಕ ಶಾಲೆಗಳ ಮೂಲಕ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸಮಗ್ರ ಶಿಕ್ಷಣ, ಆಯೋಜಿಸುತ್ತಿರುವ ಕ್ರೀಡಾ ಚಟುವಟಿಕೆಗಳು ಹಾಗೂ ರಾಷ್ಟ್ರ ನಿರ್ಮಾಣದ ಗುರಿಯನ್ನು ಯುವ ಸಮೂಹದಲ್ಲಿ ಮೂಡಿಸುವ ಪ್ರಯತ್ನಗಳಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಯದುವೀರ್ ಒಡೆಯರ್, ವೃತ್ತಿಪರತೆ ಮತ್ತು ಶ್ರೇಷ್ಠತೆಯೊಂದಿಗೆ ರಾಷ್ಟ್ರೀಯ ಪ್ರಾಮುಖ್ಯತೆಯ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಸೈನಿಕ ಶಾಲೆ ಕೊಡಗನ್ನು ಅಭಿನಂದಿಸಿದರು. ಸೈನಿಕ ಶಾಲೆ ಕೊಡಗಿನಂತಹ ಸಂಸ್ಥೆಗಳು ರಾಷ್ಟ್ರೀಯ ಸೇವೆ ಮತ್ತು ನಾಯಕತ್ವಕ್ಕೆ ಬದ್ಧವಾಗಿರುವ ಶಿಸ್ತುಬದ್ಧ, ಸಮರ್ಥ ಮತ್ತು ದೇಶಭಕ್ತ ಯುವಕರನ್ನು ಪೆÇೀಷಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಭಿಪ್ರಾಯಿಸಿದರು. :: ವಿಜೇತರು :: ಮುಖ್ಯ ಅತಿಥಿಗಳು ವಿಜೇತ ತಂಡಗಳು ಹಾಗೂ ಆಟಗಾರರಿಗೆ ಪಾರಿತೋಷಕ , ಪದಕ ಮತ್ತು ಪ್ರಮಾಣಪತ್ರಗಳನ್ನು ವಿತರಿಸಿದರು. ಅಂಡರ್-15 ಬಾಲಕರ ವಿಭಾಗದಲ್ಲಿ ಸೈನಿಕ ಶಾಲೆ ಚಂದ್ರಪುರ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಸೈನಿಕ ಶಾಲೆ ಇಂಫಾಲ್ ರನ್ನರ್‍ಅಪ್ ಸ್ಥಾನ ಪಡೆದುಕೊಂಡಿತು. ಅಂಡರ್-17 ಬಾಲಕಿಯರ ವಿಭಾಗದಲ್ಲಿ ಸೈನಿಕ ಶಾಲೆ ಸುಜಾನ್ಪುರ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಸೈನಿಕ ಶಾಲೆ ಚಂದ್ರಪುರ ರನ್ನರ್‍ಅಪ್ ಸ್ಥಾನ ಗಳಿಸಿತು. ಅಂಡರ್-17 ಬಾಲಕರ ವಿಭಾಗದಲ್ಲಿ ಸೈನಿಕ ಶಾಲೆ ಇಂಫಾಲ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಆತಿಥೇಯ ಸೈನಿಕ ಶಾಲೆ ಕೊಡಗು ರನ್ನರ್-ಅಪ್ ಸ್ಥಾನ ಪಡೆಯಿತು.ಅತ್ಯುತ್ತಮ ಆಟಗಾರ, ಅತ್ಯುತ್ತಮ ಗೋಲ್‍ಕೀಪರ್ ಹಾಗೂ ಗರಿಷ್ಠ ಗೋಲು ಗಳಿಸಿದ ಆಟಗಾರರಿಗೆ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾಯಿತು. :: ಯುದ್ಧ ಸ್ಮಾರಕಕ್ಕೆ ನಮನ :: ಸಮಾರಂಭಕ್ಕೆ ಆಗಮಿಸಿದ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಮತ್ತು ಸಂಸದ ಯದುವೀರ್ ಒಡೆಯರ್ ಅವರನ್ನು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು ಸಾಂಪ್ರದಾಯಿಕ ಅಶ್ವದಳದ ಮೂಲಕ ಆತ್ಮೀಯವಾಗಿ ಸ್ವಾಗತಿಸಿದರು. ನಂತರ ಮುಖ್ಯ ಅತಿಥಿಗಳು ಹಾಗೂ ಗೌರವ ಅತಿಥಿಗಳು ಶಾಲೆಯಲ್ಲಿರುವ ಯುದ್ಧ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ವೀರ ಯೋಧರಿಗೆ ಗೌರವ ಸಮರ್ಪಿಸಿದರು. ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು ಮಾತನಾಡಿ, ಶಾಲೆಯ ಇತಿಹಾಸದಲ್ಲಿಯೇ ಒಂದು ಸ್ಮರಣೀಯ ಹಾಗೂ ಐತಿಹಾಸಿಕ ಕ್ಷಣವೆಂದು ಬಣ್ಣಿಸಿದರು. ಈ ಸಂದರ್ಭ ಪಂದ್ಯಾವಳಿಯಲ್ಲಿ ಭಾಗವಹಿಸಿದ ತಂಡಗಳ ಶಿಸ್ತಿನ ಪಥಸಂಚಲನ ನಡೆಯಿತು. ರಾಜ್ಯಪಾಲರು ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಶಾಲಾ ವಿದ್ಯಾರ್ಥಿಗಳು ಪ್ರದರ್ಶಿಸಿದ ಡೊಳ್ಳು ಕುಣಿತ ಕರ್ನಾಟಕದ ಶ್ರೀಮಂತ ಸಾಂಸ್ಕøತಿಕ ಪರಂಪರೆಯನ್ನು ಅನಾವರಣಗೊಳಿಸಿತು. :: ಶಾಲಾ ಜಿಮ್ ಉದ್ಘಾಟನೆ :: ಕಾರ್ಯಕ್ರಮ ಫ್ಲ್ಯಾಗ್ ರಿಟ್ರೀಟ್ ಮಾರ್ಚ್ ಮೂಲಕ ಸಮಾರೋಪಗೊಂಡಿತು. ಇದೇ ಸಂದರ್ಭ ರಾಜ್ಯಪಾಲರು ಶಾಲಾ ಸಭಾಂಗಣದಲ್ಲಿ ನವೀಕರಿಸಲಾದ ಶಾಲಾ ಜಿಮ್‍ನ್ನು ಉದ್ಘಾಟಿಸಿದರು. ಶಾಲೆಯ ಹಿರಿಯ ಶಿಕ್ಷಕರಾದ ವಿಬಿನ್ ಕುಮಾರ್ ಅವರು ಅತಿಥಿಗಳ ಪರಿಚಯ ಮಾಡಿಕೊಟ್ಟರೆ, ಉಪ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿರವರು ಮುಖ್ಯ ಅತಿಥಿಗಳ ಪರಿಚಯಮಾಡಿದರು. ಕರ್ನಲ್ ಅಮರ್ ಜೀತ್ ಸಿಂಗ್ ಆತ್ಮೀಯವಾಗಿ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ ಅವರು ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ?*

ಆಗಷ್ಟ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.22 : ಕಾವೇರಿ ನದಿಯ ಉಗಮಸ್ಥಾನವಾಗಿರುವ ಕೊಡಗು ಜಿಲ್ಲೆ ತನ್ನ ಸ್ಥಳೀಯ ಅಗತ್ಯಗಳಿಗೆ ಅತ್ಯಲ್ಪ ಪ್ರಮಾಣದ…

*ವಾಯು ವಿಹಾರ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ : ಓರ್ವ ಸಾವು*

ಆಗಷ್ಟ್ 22, 2026

*ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಗಜಪಡೆಯ ಪಟ್ಟಿ ಸಿದ್ಧ*

ಆಗಷ್ಟ್ 22, 2026

*ಸುಂಟಿಕೊಪ್ಪ : “ಹಿರಿಯ ಜೀವಿಗಳಿಗೆ ನಮನ” *

ಆಗಷ್ಟ್ 22, 2026

*ಶಾಸಕ ಪೊನ್ನಣ್ಣ ಜೊತೆ ಸಂವಾದ : ಸಚಿವ ಸ್ಥಾನ ಕೈತಪ್ಪಿದ ವಿಚಾರ, ಕಸ್ತೂರಿ ರಂಗನ್ ವರದಿ, ವನ್ಯಜೀವಿ-ಮಾನವ ಸಂಘರ್ಷ ಚರ್ಚೆ*

ಆಗಷ್ಟ್ 22, 2026

*ಮಡಿಕೇರಿ – ಸಕಾ೯ರಿ ಪ.ಪೂ. ಕಾಲೇಜಿನಲ್ಲಿ ಹಿರಿಯ ನಾಗರಿಕರಿಗೆ  ಮಿಸ್ಟಿ ಹಿಲ್ಸ್ ನಿಂದ  ಗೌರವಾಪ೯ಣೆ*

ಆಗಷ್ಟ್ 22, 2026

*ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮಗಳು ಅಗತ್ಯ – ಕೆ.ಎಸ್. ಪುಟ್ಟಯ್ಯ*

ಆಗಷ್ಟ್ 22, 2026

*ಅರೆಕಾಡು ಶಾಲೆಯಲ್ಲಿ ಹಿರಿಯ ನಾಗರಿಕರ ದಿನಾಚರಣೆ –  ಹಿರಿಯರಿಗೆ ಸನ್ಮಾನ*

ಆಗಷ್ಟ್ 22, 2026

*ಹಾಕತ್ತೂರು ಸಕಾ೯ರಿ ಪ್ರೌಡಶಾಲೆಯಲ್ಲಿ ಹಿರಿಯ ನಾಗರಿಕರ  ದಿನಾಚರಣೆ*

ಆಗಷ್ಟ್ 22, 2026

 *ಚೆನ್ನಮ್ಮ ಕಾಲೇಜಿನಲ್ಲಿ ಹಿರಿಯರಿಗೆ ಗೌರವ ನಮನ*

ಆಗಷ್ಟ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.