Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಎಸ್‍ಐಆರ್ ವಿರುದ್ಧ ಜನಜಾಗೃತಿ ಅಭಿಯಾನ : ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ : ಪ್ರಗತಿಪರರ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಎಸ್‍ಐಆರ್ ವಿರುದ್ಧ ಜನಜಾಗೃತಿ ಅಭಿಯಾನ : ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ : ಪ್ರಗತಿಪರರ ಆರೋಪ*

ಜೂನ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.15 NEWS DESK : ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‍ಐಆರ್) ಪ್ರಕ್ರಿಯೆಯು ಆದಿವಾಸಿಗಳು, ಅಲ್ಪಸಂಖ್ಯಾತರು ಹಾಗೂ ಪರಿಶಿಷ್ಟರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರದಂತೆ ಕಂಡು ಬಂದಿದ್ದು, ಜನಸಾಮಾನ್ಯರು ಜಾಗೃತರಾಗಬೇಕೆಂದು ಪ್ರಗತಿಪರ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟ ಕರೆ ನೀಡಿದೆ. ಒಕ್ಕೂಟದ ವತಿಯಿಂದ ಜೂ.20 ರಂದು “ಎಸ್‍ಐಆರ್ ವಿರೋಧಿ ಸಮಾವೇಶ” ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ನಡೆಯಲಿದೆ. ಇದಕ್ಕೆ ಪೂರಕವಾಗಿ ರಾಜ್ಯದ ವಿವಿಧೆಡೆ ಆಯೋಜಿಸಲಾಗಿರುವ “ಎದ್ದೇಳು ಕರ್ನಾಟಕ” ಆಂದೋಲನದ ಭಾಗವಾಗಿ ಜನಜಾಗೃತಿ ಅಭಿಯಾನ ಮಡಿಕೇರಿಗೆ ಆಗಮಿಸಿತು. ನಗರದ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಜನಜಾಗೃತಿ ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಪ್ರಮುಖರು ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡಲಾಗಿದೆ. ಆದರೆ ಈ ಹಕ್ಕನ್ನು ಪರಿಶಿಷ್ಟರು, ಅಲ್ಪಸಂಖ್ಯಾತರು ಹಾಗೂ ಆದಿವಾಸಿಗಳಿಂದ ಕಸಿದುಕೊಳ್ಳುವ ಪ್ರಯತ್ನವಾಗಿ ಎಸ್‍ಐಆರ್ ಜಾರಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಚುನಾವಣೆಗೂ ಪೂರ್ವದಲ್ಲೆ ಬಿಹಾರದಲ್ಲಿ ಎಸ್‍ಐಆರ್ ಜಾರಿ ಮಾಡುವ ಮೂಲಕ ಸುಮಾರು 65 ಲಕ್ಷ ಮಂದಿಯ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಆದರೆ, ಮತದಾನ ವಂಚಿತರು ಬಾಂಗ್ಲಾ, ಪಾಕಿಸ್ತಾನದ ನುಸುಳುಕೋರರೆಂದು ಸಾಬೀತು ಪಡಿಸಲು ಚುನಾವಣಾ ಆಯೋಗಕ್ಕೆ ಸಾಧ್ಯವಾಗಿಲ್ಲ. ಅಲ್ಲಿ ಅಧಿಕೃತವಾಗಿ ಕೇವಲ ಇಬ್ಬರು ಬಾಂಗ್ಲಾದೇಶಿಗರನ್ನಷ್ಟೆ ಗುರುತಿಸಲಾಗಿದೆ. ರಾಜ್ಯದಲ್ಲಿ ಎಸ್‍ಐಆರ್ ಇದೇ ಜೂ.20 ರಿಂದ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಜನ ಸಾಮಾನ್ಯರಿಂದ ಎಸ್‍ಎಸ್‍ಎಲ್‍ಸಿ ಅಂಕ ಪಟ್ಟಿ,. ಪಾಸ್ ಪೋರ್ಟ್, ರೇಷನ್ ಕಾರ್ಡ್‍ಗಳನ್ನು ಕೇಳಲಾಗುತ್ತಿದೆ. ಆದರೆ, ಈ ದಾಖಲೆಗಳಿಂದ ವಂಚಿತರಾಗಿರುವ ಆದಿವಾಸಿ ಸಮೂಹ ಮತದಾನದಿಂದ ವಂಚಿತರಾಗುವ ಎಲ್ಲಾ ಅಪಾಯವಿದೆ. ಈ ನೆಲದ ಯಾರೇ ಒಬ್ಬರ ಮತದಾನದ ಹಕ್ಕನ್ನು ತೆಗೆದು ಹಾಕಿದಲ್ಲಿ ಅದರ ಹೊಣೆಗಾರಿಕೆಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವಹಿಸಬೇಕು ಎಂದು ಅಮೀನ್ ಮೊಹಿಸಿನ್ ಆಗ್ರಹಿಸಿದರು. ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪ್ರಮುಖರು ಹಾಗೂ ಸಿಪಿಐ(ಎಂಎಲ್)ನ ರಾಜ್ಯ ಪ್ರತಿನಿಧಿ ಡಿ.ಎಸ್.ನಿರ್ವಾಣಪ್ಪ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯ 9 ರಾಜ್ಯಗಳಲ್ಲಿ ನಡೆದಿದ್ದು, ಸುಮಾರು 6 ಕೋಟಿ ಜನ ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಎಸ್‍ಐಆರ್‍ನಿಂದಾಗಿ 97 ಲಕ್ಷ, ಬಿಹಾರದಲ್ಲಿ 45 ಲಕ್ಷ ಮಂದಿ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಇದು ಬಿಜೆಪಿ ಪರವಾಗಿ ಮತಹಾಕದ ಮಂದಿಯನ್ನು ಮತದಾನದಿಂದಲೇ ಹೊರಗಿಡುವ ಷಡ್ಯಂತ್ರವೆಂದು ಆರೋಪಿಸಿದರು. ಒಕ್ಕೂಟದ ಪ್ರಮುಖರು ಹಾಗೂ ನಿವೃತ್ತ ಪ್ರಾಂಶುಪಾಲ ಜೆ.ಸೋಮಣ್ಣ ಅವರು ಮಾತನಾಡಿ ದೇಶದೊಳಗೆ ನುಸುಳಿರುವ ವಿದೇಶಿ ನುಸುಳುಕೋರರ ಪತ್ತೆಗಾಗಿ ಎಸ್‍ಐಆರ್ ಎನ್ನಲಾಗುತ್ತಿದೆ. ಅಂದರೆ, ಕೇಂದ್ರದಲ್ಲಿ ಕಳೆದ ಹದಿನಾಲ್ಕು ವರ್ಷಗಳಿಂದ ಅಧಿಕಾರ ನಡೆಸಿರುವ ಬಿಜೆಪಿ ತನ್ನ ಈ ಅವಧಿಯಲ್ಲಿ, ನುಸುಳುಕೋರರನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ನ್ಯಾಯಾಲಯವು ಎಸ್‍ಐಆರ್‍ಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಕ್ರಮಗಳಿಗೆ ಸಮ್ಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಎಎಐಆರ್ ನಡೆಯುವ ಸಂದರ್ಭ ಅದು ಸೂಚಿಸಿರುವ ಹನ್ನೊಂದು ದಾಖಲಾತಿಗಳಲ್ಲಿ ಜನಸಾಮಾನ್ಯರ, ಆದಿವಾಸಿಗಳ, ಬಡವರ್ಗದ ಕೈಯಲ್ಲಿ ಒಂದಾದರು ದಾಖಲೆ ಇರುವಂತೆ ನೋಡಿಕೊಳ್ಳುವ ಹಾಗೂ ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯವಾಗಿದೆ ಎಂದರು. ಸಂವಿಧಾನ ಸಂರಕ್ಷಣಾ ಪಡೆಯ ಪ್ರಮುಖ ಸುರೇಶ್ ಅವರು ಮಾತನಾಡಿ, ಜೂ.20 ರಂದು ಬೆಂಗಳೂರು ತಲುಪುವಂತೆ ಬೀದರ್, ವಿಜಯಪುರ, ಉತ್ತರ ಕನ್ನಡ, ತುಮಕೂರು ಮತ್ತು ಉಡುಪಿ ಜಿಲ್ಲೆಯಿಂದ ಜಾಗೃತಿ ಅಭಿಯಾನ ಆರಂಭಗೊಂಡಿದೆ. ಉಡುಪಿಯಿಂದ ಆರಂಭಗೊಂಡ ಅಭಿಯಾನ ದಕ್ಷಿಣ ಕನ್ನಡವನ್ನು ಹಾದು ಇಂದು ಕೊಡಗಿದೆ ಆಗಮಿಸಿದೆ. ಮುಂದೆ ಈ ಅಭಿಯಾನ ಮೈಸೂರು, ಚಾಮರಾಜನಗರ, ಮಂಡ್ಯ ಮೂಲಕ ಬೆಂಗಳೂರಿಗೆ ತೆರಳಲಿದೆ ಎಂದು ತಿಳಿಸಿದರು. ಜಾಗೃತಿ ಅಭಿಯಾನದಲ್ಲಿ ಪ್ರಗತಿಪರ ಒಕ್ಕೂಟದ ಖಲೀಲ್ ಬಾಷ, ಎಂ.ಕೆ.ಮನ್ಸೂರ್ ಆಲಿ, ಮೇರಿ ವೇಗಸ್, ಅಲ್ಲಾರಂಡ ವಿಠಲ್ ನಂಜಪ್ಪ, ಹೇಮಂತ್, ಹೆಚ್.ಜೆ.ಪ್ರಕಾಶ್, ವೈ.ಎಂ.ಸುರೇಶ್ ಮೊದಲಾದವರಿದ್ದರು.

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಪುರಸ್ಕೃತ ಯೋಜನೆ ಸಕಾಲದಲ್ಲಿ ಪ್ರಗತಿ ಸಾಧಿಸಿ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK : ಕೊಡವರ ಕುಲಮಾತೆ ಕಾವೇರಿ ತೀರ್ಥೋದ್ಭವದ ಅಂಗವಾಗಿ ಅಕ್ಟೋಬರ್ 17ರಂದು ಭಾಗಮಂಡಲದಿಂದ ತಲಕಾವೇರಿವರೆಗೆ ನಡೆಯಲಿರುವ…

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.