
ಮಡಿಕೇರಿ ಜೂ.16 NEWS DESK : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ಕೊಡಗು ಜಿಲ್ಲೆ, ಇವರ ವತಿಯಿಂದ ಜೂನ್, 20 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪೃಥ್ವಿ ಜ್ಯುವೆಲ್ಲರಿ ಕುಶಾಲನಗರ, ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ‘ಪೃಥ್ವಿ ಜ್ಯುವೆಲ್ಲರಿ ಕುಶಾಲನಗರ’ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ನೇರ ಸಂದರ್ಶನದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.








