
ಮಡಿಕೇರಿ NEWS DESK ಜೂ.17 : ಕೊಡಗಿನ ಸಮಗ್ರ ಅಭಿವೃದ್ಧಿಗಾಗಿ ಮತ್ತು ರಾಜ್ಯದ ಜನರ ಸೇವೆಗಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಡಿಕೇರಿ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಹಾಗೂ ಕರಿಕೆ ಗ್ರಾ.ಪಂ ಮಾಜಿ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಮತ್ತು ಶಾಸಕರಾಗಿ ಪೊನ್ನಣ್ಣ ಅವರು ದಕ್ಷತೆಯಿಂದ ಕಾರ್ಯನಿರ್ವಹಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಅಭಿವೃದ್ಧಿ ಕಾರ್ಯಗಳ ಮೂಲಕವೇ ಅಭಿವೃದ್ಧಿಪರ ಚಿಂತನೆಯ ಜನಸ್ನೇಹಿ ಶಾಸಕರು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಚಿವ ಸ್ಥಾನವನ್ನು ಹೊಂದಲು ಇವರು ಸಮರ್ಥರಾಗಿದ್ದು, ನೂತನ ಮುಖ್ಯಮಂತ್ರಿಗಳು ಸಂಪುಟದಲ್ಲಿ ಅಧಿಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಕೊಡಗು ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿದೆ. ಪ್ರಸ್ತುತ ರಾಜ್ಯದಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್ ಸರಕಾರ ಕೊಡಗಿನವರಿಗೆ ಸಚಿವ ಸ್ಥಾನ ನೀಡುತ್ತದೆ ಎನ್ನುವ ವಿಶ್ವಾಸವಿದೆ. ಕಾವೇರಿ ನಾಡು ಕೊಡಗು ರಾಜ್ಯಕ್ಕೆ ಅಪಾರ ಕೊಡುಗೆಯನ್ನು ನೀಡಿದೆ. ಈ ಬಾರಿಯ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಮತ ನೀಡಿದ ಜನರ ಅಭಿಲಾಷೆಯಂತೆ ಪೊನ್ನಣ್ಣ ಅವರನ್ನು ಸಚಿವರನ್ನಾಗಿ ನೇಮಕ ಮಾಡಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕಲ್ಪಿಸಬೇಕೆಂದು ಎನ್.ಬಾಲಚಂದ್ರನ್ ನಾಯರ್ ಕೋರಿದ್ದಾರೆ.







