Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*
  • *ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ : ಮಳೆಗಾಲದಲ್ಲಿ ಅಪಘಾತ ಸಂಭವಿಸದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ : ಮಳೆಗಾಲದಲ್ಲಿ ಅಪಘಾತ ಸಂಭವಿಸದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 17, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.17 NEWS DESK : ಮಳೆಗಾಲದ ಅವಧಿಯಲ್ಲಿ ರಸ್ತೆ ಅಪಘಾತ ತಡೆಯಲು ರಸ್ತೆ ಸುರಕ್ಷತಾ ನಿಯಮಗಳು ಮತ್ತು ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ `ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, ಇಂತಹ ಸ್ಥಳಗಳಲ್ಲಿ ಸೂಕ್ತ ರಸ್ತೆ ಸುರಕ್ಷತಾ ಕ್ರಮ ವಹಿಸಬೇಕು. ಅಪಘಾತ ಸಂಭವಿಸುವ ರಸ್ತೆಗಳಲ್ಲಿ ಸಂಚಾರ ಚಿಹ್ನೆ ಹಾಗೂ ರಸ್ತೆ ಗುರುತು ಫಲಕ ಅಳವಡಿಸಬೇಕು. ಅವಶ್ಯವಿದ್ದೆಡೆ ಬ್ಯಾರಿಕೇಡ್ ಸೇರಿದಂತೆ ಸುರಕ್ಷತಾ ಕ್ರಮವಹಿಸಿ ರಸ್ತೆ ನಿಯಮಗಳ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಸಭೆಯಲ್ಲಿ ಈ ಹಿಂದೆ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಅನುಷ್ಠಾನ ಕುರಿತಂತೆ ಸಂಬಂಧಪಟ್ಟ ಇಲಾಖೆಯವರು ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಉಪ-ವಿಭಾಗದ ಸಹಾಯಕ ಎಂಜಿನಿಯರ್ ಎಂ.ಹನುಮಂತ ಅವರು ಸಂಪಾಜೆಯಿಂದ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಚ್ಚರಿಕೆಯ ಬೋರ್ಡ್ ಅಳವಡಿಸಲು ಮುಂದಾಗಲಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಮಾತನಾಡಿ, ಈಗಾಗಲೇ ಅಳವಡಿಸಿರುವ ಎಚ್ಚರಿಕೆಯ ಬೋರ್ಡ್‍ಗಳನ್ನು ಅಳವಡಿಸಿರುವ ದಿನಾಂಕ, ಜಿಯೋ ಕೋ-ಆರ್ಡಿನೇಟ್ಸ್ ಬಗ್ಗೆ ಮಾಹಿತಿಯನ್ನು ಒದಗಿಸಲು ಹಾಗೂ ಅಗತ್ಯವಿರುವ ಜಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ಪೆÇಲೀಸ್ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ರಸ್ತೆ ಸುರಕ್ಷತೆಯ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಮಡಿಕೇರಿಯಿಂದ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯ ಭದ್ರಕಾಳಿ ದೇವಸ್ಥಾನ ಹತ್ತಿರ ಪ್ರವಾಸಿಗರು ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ಮಾಡುವುದರಿಂದ ತಿರುವಿನಲ್ಲಿ ರಸ್ತೆಯ ಅಗಲ ಕಿರಿದಾಗಿ ವಾಹನ ಚಲಾಯಿಸಲು ಚಾಲಕರಿಗೆ ಕಷ್ಟಕರವಾಗಿ ಅಪಘಾತಗಳು ಉಂಟಾಗುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ ಆ ತಿರುವಿನಲ್ಲಿ ರಸ್ತೆಯ ಎರಡೂ ಬದಿಯಲ್ಲಿ ನೋ ಪಾರ್ಕಿಂಗ್ ಬೋರ್ಡ್ ಅಳವಡಿಸಿ ವಾಹನ ನಿಲುಗಡೆ ಮಾಡದಿರುವಂತೆ ಕ್ರಮ ವಹಿಸಬೇಕಿದೆ ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಎಂಜಿನಿಯರ್ ಅವರು ಕೋರಿದರು. ಮಡಿಕೇರಿ-ಕಾಟಕೇರಿ ರಸ್ತೆಯಲ್ಲಿ ಅಪಘಾತ ವಲಯಗಳು ಹೆಚ್ಚಿದ್ದು, ವಾಹನ ಸವಾರರಿಗೆ ಸಮಸ್ಯೆ ಎದುರಾಗಲಿದೆ. ಆದ್ದರಿಂದ ಕ್ಯಾಟ್‍ಐಸ್ ಸ್ಟಿಕ್ಕರ್, ಬಿಳಿ ರೇಡಿಯಂ ಸ್ಟಿಕ್ಕರ್‍ಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಲಹೆ ನೀಡಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕೆ.ಟಿ.ಪ್ರಭು ಅವರು ಮಾತನಾಡಿ, ಗೋಣಿಕೊಪ್ಪ ಪಟ್ಟಣ ಮುಖ್ಯರಸ್ತೆ ಹಾಗೂ ಬೈಪಾಸ್ ರಸ್ತೆಯಲ್ಲಿ ವಾಹನ ದಟ್ಟಣೆ ಹಾಗೂ ಅಪಘಾತ ಪ್ರಕರಣ ಹೆಚ್ಚಾಗಿದ್ದು, ಪಟ್ಟಣದ ಮುಖ್ಯ ರಸ್ತೆಯಲ್ಲಿ ವಾಹನಗಳ ಏಕಮುಖ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಪಟ್ಟಣದ ಪಾಲಿಬೆಟ್ಟ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್‍ಗೆ ಕೆಲವೊಂದು ನಿರ್ಬಂಧ ವಿಧಿಸಿ ವಾಹನಗಳ ಪಾರ್ಕಿಂಗ್‍ಗೆ ವ್ಯವಸ್ಥೆಗೆ ತಾತ್ಕಾಲಿಕವಾಗಿ ಮೂರು ತಿಂಗಳವರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ವಿರಾಜಪೇಟೆ ಪಟ್ಟಣದಲ್ಲಿ ವಾಹನಗಳ ಸಂಚಾರ ಮತ್ತು ನಿಲುಗಡೆ ವ್ಯವಸ್ಥೆಗೆ ಸಂಬಂಧಿಸಿದಂತೆ ಪಟ್ಟಣದ ಮೂರ್ನಾಡು ಜಂಕ್ಷನ್‍ನಿಂದ ದೊಡ್ಡಟ್ಟಿ ಚೌಕಿ ವರೆಗೆ ದ್ವಿಮುಖ ಸಂಚಾರ ವ್ಯವಸ್ಥೆಮಾಡಿ ಪಾರ್ಕಿಂಗ್ ನಿಷೇಧಿಸುವುದರಿಂದ ಗೋಣಿಕೊಪ್ಪದ ಕಡೆಗೆ ತೆರಳುವ ವಾಹನಗಳು ಮತ್ತು ಗೋಣಿಕೊಪ್ಪದಿಂದ ಮಡಿಕೇರಿ ಕಡೆಗೆ ತೆರಳುವ ವಾಹನಗಳಿಗೆ ಸಂಚಾರ ದಟ್ಟಣೆ ಉಂಟಾಗದಂತೆ ಸುಗಮ ಸಂಚಾರಕ್ಕೆ ಅವಕಾಶವಾಗುತ್ತದೆ. ಹಾಗೆಯೇ ಗಡಿಯಾರ ಕಂಬದಿಂದ ಬದ್ರಿಯಾ ಜಂಕ್ಷನ್ ವರೆಗೆ ದ್ವಿಮುಖ ಸಂಚಾರಕ್ಕೆ ಅವಕಾಶವಾಗುವುದರಿಂದ ಹಾಗೂ ಪಾರ್ಕಿಂಗ್ ವ್ಯವಸ್ಥೆ ನಿಷೇಧಿಸುವುದರಿಂದ ಪೆರುಂಬಾಡಿ, ಮೀನುಪೇಟೆ, ಆರ್ಜಿ, ಬೇಟೋಳಿ ಕಡೆಗಳಿಂದ ತೆರಳಲು ಅವಕಾಶವಾಗುವುದರಿಂದ ವಾಹನಗಳ ಸುಗಮ ಸಂಚಾರಕ್ಕೆ ತಾತ್ಕಾಲಿಕವಾಗಿ ಮೂರು ತಿಂಗಳವರೆಗೆ ದ್ವಿಮುಖ ಸಂಚಾರ ನಿಯಮ ಜಾರಿಗೊಳಿಸಿ, ಪಾರ್ಕಿಂಗ್ ನಿಷೇಧಿಸಲಾಗಿದೆ ಎಂದು ಕೆ.ಟಿ.ಪ್ರಭು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಮಾತನಾಡಿ, ನಗರದ ಅರಣ್ಯ ಭವನದ ರಸ್ತೆಯ ಎರಡು ಬದಿಗಳಲ್ಲಿ ಪ್ರವಾಸಿ ವಾಹನಗಳು ಪಾರ್ಕಿಂಗ್ ಮಾಡುತ್ತಿದ್ದು, ವಾಹನ ಸಂಚಾರಕ್ಕೆ ಸಮಸ್ಯೆ ಎದುರಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಹಾಗೆಯೇ ರಸ್ತೆಗಳಲ್ಲಿ ಅಳವಡಿಸಲಾದ ರೇಡಿಯಂ ಸ್ಟಿಕ್ಕರ್‍ಗಳು ಹಳೆಯದಾಗಿದ್ದು, ಅವುಗಳನ್ನು ಬದಲಾಯಿಸುವಂತೆ ಅಥವಾ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಟಿ.ಸತೀಶ್ ಅವರು ಮಾತನಾಡಿ, ಸಾರಿಗೆ ಕ್ಷೇಮಾಭಿವೃದ್ಧಿ ಮತ್ತು ರಸ್ತೆ ಸುರಕ್ಷತಾ ಯೋಜನೆಯಡಿ ಅನುದಾನವಿದ್ದು, ಅಗತ್ಯವಿರುವ ಕಡೆ ರಸ್ತೆ ಸುರಕ್ಷತೆಗೆ ಒತ್ತು ನೀಡಬಹುದಾಗಿದೆ ಎಂದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಜಿ.ಸುನೀಲ್, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯರಾದ ವಿ.ಬಿ.ಸಜಿತ್, ಕೆ.ಸತ್ಯನಾರಾಯಣ, ಡಾ.ಕೆ.ಎಂ.ಸತೀಶ್ ಕುಮಾರ್, ರಾಮಚಂದ್ ದರ್ಶನ್, ಡಿ.ಎಂ.ಗಿರೀಶ್ ಇತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕಾವೇರಿ ತೀರ್ಥೋದ್ಭವ : ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಗಾಂಧಿ ಮೈದಾನಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ : ದಸರಾ ಸಿದ್ಧತೆ ಕುರಿತು ಪರಿಶೀಲನೆ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.8 NEWS DESK :-ಮಡಿಕೇರಿ ದಸರಾ ಹಿನ್ನೆಲೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಗುರುವಾರ…

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.