
ಮಡಿಕೇರಿ ಜೂ.17 NEWS DESK : ಪ್ರವಾಸೋದ್ಯಮ ಇಲಾಖೆ ಹಾಗೂ ಸರ್ಕಾರದ ವತಿಯಿಂದ ಹೋಂಸ್ಟೇ ಅಸೋಸಿಯೇಷನ್ ನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮಾಲೀಕರ ಸಭೆ ನಡೆಯಿತು. ನಗರದ ಕ್ರಿಸ್ಟಲ್ ಕೋರ್ಟ್ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಹೋಂ ಸ್ಟೇ ನಡೆಸಲು ಸೂಚಿಸಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಿರುವ ಹಾಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸೂಚಿಸಲಾಯಿತು.









