Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಯೋಗಭಾರತಿಗೆ ರಜತ ಮಹೋತ್ಸವದ ಸಂಭ್ರಮ : ಯೋಗಪಟುಗಳಿಂದ ಯೋಗಪ್ರದಶ೯ನ : ಶಾಲೆಗಳಲ್ಲಿ ಯೋಗಭ್ಯಾಸ ಕಡ್ಡಾಯ ಮಾಡಬೇಕು : ಜಿ.ಚಿದ್ವಿಲಾಸ್ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಯೋಗಭಾರತಿಗೆ ರಜತ ಮಹೋತ್ಸವದ ಸಂಭ್ರಮ : ಯೋಗಪಟುಗಳಿಂದ ಯೋಗಪ್ರದಶ೯ನ : ಶಾಲೆಗಳಲ್ಲಿ ಯೋಗಭ್ಯಾಸ ಕಡ್ಡಾಯ ಮಾಡಬೇಕು : ಜಿ.ಚಿದ್ವಿಲಾಸ್ ಸಲಹೆ*

ಜೂನ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜೂ 18 :  ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲದ ಯೋಗವು , ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸಮತೋಲನಕ್ಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಇಂಥ ಯೋಗ ವಿದ್ಯೆಯನ್ನು ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಹಿರಿಯ ಪತ್ರಕರ್ತ ಜಿ.ಚಿದ್ವಿಲಾಸ್ ಅಭಿಪ್ರಾಯಪಟ್ಟರು . ನಗರದ  ರೆಡ್  ಬಿಕ್ಸ್ ನ ಸತ್ಕಾರ ಸಭಾಂಗಣದಲ್ಲಿ ನಡೆದ ಯೋಗ ಭಾರತಿ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಯೋಗಾಭ್ಯಾಸದಿಂದ ಒಬ್ಬ ವ್ಯಕ್ತಿ ಶಾರೀರಿಕ ದೃಢತೆ ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತಾನೆ, ನಿರಂತರ ಯೋಗ ಪ್ರಕ್ರಿಯೆಯಿಂದ ವ್ಯಕ್ತಿಯಲ್ಲಿ ತಾಳ್ಮೆ ಸಹನೆ ಸಹಾನುಭೂತಿ, ಪ್ರೀತಿ ವಾತ್ಸಲ್ಯ ಸಹಜವಾಗಿಯೇ ಮೈಗೂಡಿಕೊಳ್ಳುವುದರಿಂದ ಸಮಾಜದ ಆರೋಗ್ಯವೂ ಬಲಗೊಳ್ಳುತ್ತದೆ ಎಂದು ಅವರು ವಿಶ್ಲೇಷಿಸಿದರು. ಭಾರತೀಯ ಪ್ರಾಚೀನ ಶಿಕ್ಷಣದಲ್ಲಿ ಒಂದಾದ ಯೋಗ, ಪ್ರಾಣಾಯಾಮ ಮತ್ತು ಧ್ಯಾನ ಇವುಗಳು ಒಂದು ಹಂತದಲ್ಲಿ ಮಡಿವಂತಿಕೆಯಿಂದ ಕೂಡಿದ್ದು ಇತ್ತೀಚಿನ ವರ್ಷಗಳಲ್ಲಿ ಇಡೀ ವಿಶ್ವವೇ ಅದನ್ನು ಸ್ವೀಕರಿಸಿ ಜೂನ್ 21 ಅನ್ನು ವಿಶ್ವ ಯೋಗ ದಿನ ಎಂದು ಘೋಷಿಸಿರುವುದರ ಹಿಂದೆ ಭಾರತದ ಪ್ರಾಚೀನ ಪದ್ಧತಿ ಮತ್ತು ಪರಂಪರೆಗಳ ಭವ್ಯತೆಯನ್ನು ಕಾಣಬಹುದು ಎಂದೂ ಚಿದ್ವಿಲಾಸ್ ಹೇಳಿದರು. ಬದಲಾದ ಜೀವನ ಶೈಲಿಯಲ್ಲಿ ಯುವ ಪೀಳಿಗೆಗೆ ಯೋಗ,ಧ್ಯಾನ ಮತ್ತು ಪ್ರಾಣಯಾಮದಂತಹ ನಿತ್ಯ ಅಭ್ಯಾಸ ಅತ್ಯಂತ ಅವಶ್ಯಕ ಎಂದು ಚಿದ್ವಿಲಾಸ್ ಸಲಹೆ ನೀಡಿದರು. ಮಡಿಕೇರಿಯಲ್ಲಿ  25 ವರ್ಷಗಳನ್ನು ಪೂರೈಸಿರುವ ಯೋಗ ಭಾರತಿ  ತನ್ನ ಇದುವರೆಗಿನ ಇತಿಹಾಸವನ್ನು ದಾಖಲಿಸುವ ಪ್ರಯತ್ನ ಮಾಡಲಿ ಎಂದು ಅವರು ಆಶಿಸಿದರು. ಭಾರತೀಯ ವಿದ್ಯಾ ಭವನದ  ಕೊಡಗು ಘಟಕದ ಅಧ್ಯಕ್ಷ ಕೆ.ಎಸ್. ದೇವಯ್ಯ ಅವರು ಮಾತನಾಡಿ,ಭಾರತದ ಯೋಗ ವಿದ್ಯೆಯನ್ನು ವಿದೇಶಿಯರು ಕಲಿತು ಇಂದು ಅವರುಗಳೇ ಯೋಗ ಶಿಕ್ಷಕರಾಗಿ ಸಹಸ್ರಾರು ಮಂದಿಗೆ ಯೋಗವನ್ನು ಭೋಧಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು. ಯೋಗ ಭಾರತಿ ಸಂಸ್ಥೆಯ ಪೋಷಕರಾದ ಡಾಕ್ಟರ್ ಎಂ. ಜಿ. ಪಾಟ್ಕರ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ನಿರಂತರ ಯೋಗ ಅಭ್ಯಾಸ ಮಾಡುವಂತೆ ಕರೆ ನೀಡಿದರು. ಮಾನವ,ಪ್ರಕೃತಿಯ ಅಂಶವಾಗಿದ್ದು ಪ್ರಕೃತಿ ಮತ್ತು ಪರಮಾತ್ಮನ ಜೋಡಣೆಗೆ ಯೋಗಾಭ್ಯಾಸ ಅತ್ಯಂತ ಸಹಕಾರಿ ಎಂದು ಅವರು ಹೇಳಿದರು. ಭಾರತದ ಕೊಡುಗೆಯಾದ ಯೋಗ ವಿದ್ಯೆ, ಮನುಷ್ಯನ ಶಾರೀರಿಕ ಮತ್ತು ಆಂತರಿಕ ಬೆಳವಣಿಗೆಗೆ ಅತ್ಯಂತ ಸಹಕಾರಿ ಎಂದರು. ಜಿಲ್ಲಾ ಆಯುಷ್ ಅಧಿಕಾರಿ ಡಾಕ್ಟರ್ ಶೈಲಜಾ , ಜೂನ್ 21 ರಂದು ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಬೆಳಿಗ್ಗೆ ಆರು ಗಂಟೆಗೆ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮಗಳಿದ್ದು ಆಸಕ್ತರು ಪಾಲ್ಗೊಳ್ಳುವಂತೆ ಕರೆ ನೀಡಿದರು. ಯೋಗದಿಂದ ಉತ್ತಮ ಆರೋಗ್ಯ ಪಡೆಯುವ ಬಗ್ಗೆ ಜಿಲ್ಲಾ ಆಯುಷ್ ಇಲಾಖೆಯ  ವೈದ್ಯಾಧಿಕಾರಿ ಡಾ  ಅರುಣ್  ಮಾಹಿತಿ ನೀಡಿದರು. ಮಡಿಕೇರಿಯಲ್ಲಿ ಯೋಗಭಾರತಿ ಸಂಸ್ತೆಯನ್ನು ಸ್ಫಾಪಿಸಿ 25 ವಷ೯ಗಳ ಕಾಲ ನಿರಂತರ ಯೋಗಶಿಕ್ಷಣ ನೀಡುತ್ತಾ ಬಂದಿರುವ  ಯೋಗ ಭಾರತಿ ಸಂಸ್ಥೆಯ ಪ್ರಾಚಾರ್ಯ ಕೆ.ಕೆ. ಮಹೇಶ್ ಕುಮಾರ್ ಅವರು, ಸಂಸ್ಥೆ 25 ವರ್ಷಗಳನ್ನು ಸವೆಸಿದ ಕುರಿತು ಮಾಹಿತಿ ನೀಡಿದರು. ಯೋಗ ಭಾರತಿ ಸಂಸ್ಥೆಯ ಶಿಬಿರಾರ್ಥಿ , ಜಿ ಆರ್ ರವಿಶಂಕರ್ ಸ್ವಾಗತಿಸಿ, ಜ್ಯೋತಿ ವರದಿವಾಚಿಸಿ,  ಸವಿತಾ ವಂದಿಸಿದರು. ವೇದಿಕೆಯಲ್ಲಿ ಜಯಲಕ್ಷ್ಮಿ ಪಾಟ್ಕರ್ ಉಪಸ್ಥಿತರಿದ್ದರು. ಸಂಸ್ಥೆಯ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ  ಯೋಗ ಪ್ರದರ್ಶನದ ಮೂಲಕ ಸಭಿಕರ ಮೆಚ್ಚುಗೆ ಪಡೆದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಳ್ಳಾರಿ, NEWS DESK ಅ.8: ಮಳೆ ಕೈಕೊಟ್ಟ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ತೊಗರಿ,…

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.