Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*
  • *ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*
  • *ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*
  • *ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*
  • *ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*
  • *‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*’ಕರ್ತವ್ಯ’ ಆಪ್ ನೋಂದಣಿ : ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ :  ಶೇ.70.6 ರಷ್ಟು ಪ್ರಗತಿ ಸಾಧನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*’ಕರ್ತವ್ಯ’ ಆಪ್ ನೋಂದಣಿ : ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ :  ಶೇ.70.6 ರಷ್ಟು ಪ್ರಗತಿ ಸಾಧನೆ*

ಜೂನ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

​ಬೆಂಗಳೂರು, ಜೂ.18 NEWS DESK : “ಕರ್ತವ್ಯ ಆಪ್‌ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ” ಎಂಬ ಕೆಲವು ಮಾಧ್ಯಮಗಳ ವರದಿಗಳಿಗೆ ಸರ್ಕಾರವು ಅಧಿಕೃತ ಸ್ಪಷ್ಟೀಕರಣವನ್ನು ನೀಡಿದೆ. ಪ್ರಸ್ತುತ ‘ಕರ್ತವ್ಯ’ (KAAMS) ಯೋಜನೆಯಡಿ ಉದ್ಯೋಗಿಗಳ ನೋಂದಣಿ ಪ್ರಕ್ರಿಯೆಯು ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಈಗಾಗಲೇ ಶೇಕಡಾ 70.6 ಕ್ಕಿಂತ ಹೆಚ್ಚು ನೌಕರರು ಯಶಸ್ವಿಯಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ವೇಗದ ಪ್ರಗತಿ : ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ 2,13,925 ನೌಕರರ ಅಪೂರ್ಣ ನೋಂದಣಿಯ ಅಂಕಿ-ಅಂಶಗಳು ಜೂನ್ 12, 2026 ರವರೆಗಿನ ಮಾಹಿತಿಯಾಗಿದ್ದವು. ಆದರೆ ಕಳೆದ 4-5 ದಿನಗಳಲ್ಲಿ ನಡೆಸಲಾದ ವಿಶೇಷ ಆಂದೋಲನದಿಂದಾಗಿ ಈ ಸಂಖ್ಯೆ 2026 ನೇ ಜೂನ್ 18 ರ ವೇಳೆಗೆ 1,40,433 ಕ್ಕೆ ಕುಸಿದಿದೆ. ಅಂದರೆ ಕೇವಲ ಒಂದು ವಾರದಲ್ಲಿ ನೋಂದಣಿಯಾಗದ ನೌಕರರ ಸಂಖ್ಯೆಯಲ್ಲಿ ಶೇ. 34.4 ರಷ್ಟು ಭಾರಿ ಇಳಿಕೆಯಾಗಿದೆ. :: ನೋಂದಣಿ ಸ್ಥಿತಿಗತಿ :: ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (HRMS) ದತ್ತಾಂಶದ ಪ್ರಕಾರ, ಒಟ್ಟು 43 ಪ್ರಮುಖ ಇಲಾಖೆಗಳು ಹಾಗೂ 137 ಸರಣಿ ಇಲಾಖೆಗಳು/ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 4,78,181 ನೌಕರರ ಪೈಕಿ 3,37,748 (ಶೇ. 70.6) ನೌಕರರು ಈಗಾಗಲೇ ಆಪ್‌ನಲ್ಲಿ ಯಶಸ್ವಿಯಾಗಿ ನೋಂದಾಯಿಸಿಕೊಂಡಿದ್ದಾರೆ. :: ದೈನಂದಿನ ಸಕ್ರಿಯ ಬಳಕೆ :: 2026 ನೇ ಜೂನ್ 18 ರ ಬೆಳಿಗ್ಗೆ 11:00 ಗಂಟೆಯ ಒಳಗೆ ಒಟ್ಟು ನೋಂದಾಯಿತ ಬಳಕೆದಾರರಲ್ಲಿ ಸುಮಾರು ಶೇ. 57 ರಷ್ಟು (1,92,605 ನೌಕರರು) ಉದ್ಯೋಗಿಗಳು ಆಪ್ ಮೂಲಕ ತಮ್ಮ ಹಾಜರಾತಿಯನ್ನು ದಾಖಲಿಸಿದ್ದಾರೆ. ಬಾಕಿ ಉಳಿದಿರುವ ಶೇ. 29.4 ರಷ್ಟು ನೌಕರರ ನೋಂದಣಿಗಾಗಿ ಇ-ಆಡಳಿತ ಕೇಂದ್ರವು (CeG) ವಿಶೇಷ ತರಬೇತಿ ಮತ್ತು ನೋಂದಣಿ ಶಿಬಿರಗಳನ್ನು ಆಯೋಜಿಸಿದೆ. ತಾಂತ್ರಿಕ ಸಮಸ್ಯೆಗಳ ಪರಿಹಾರಕ್ಕಾಗಿ ನೋಡಲ್ ಅಧಿಕಾರಿಗಳು, ಸಹಾಯವಾಣಿ ಮತ್ತು ಎಐ (AI) ಆಧಾರಿತ ವಾಯ್ಸ್ ಬಾಟ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ​ಎಲ್ಲಾ ಅಧಿಕಾರಿಗಳು ಮತ್ತು ನೌಕರರು ನಿಗದಿತ ಸಮಯದೊಳಗೆ ಶೇ. 100 ರಷ್ಟು ನೋಂದಣಿ ಪೂರ್ಣಗೊಳಿಸುವಂತೆ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ‘ಕರ್ತವ್ಯ’ ತಂತ್ರಾಂಶವು ಸರ್ಕಾರಿ ನೌಕರರ ಹಾಜರಾತಿಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ತರಲು ರೂಪಿಸಲಾದ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ಸರ್ಕಾರ ಪುನರುಚ್ಚರಿಸಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಬೆಂಗಳೂರು ಸಣ್ಣ ಭಾಷಾ ಚಲನಚಿತ್ರೋತ್ಸವಕ್ಕೆ ಕೊಡಗಿನ ‘ಬೇರ್’ ಆಯ್ಕೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಕರ್ನಾಟಕದಲ್ಲಿ ಭೀಕರ ಬರ: ಶೇ.90ರಷ್ಟು ಬೆಳೆ ಹಾನಿ, ರೈತರ ನೆರವಿಗೆ ಸರ್ಕಾರದ ಮಹತ್ವದ ಕ್ರಮ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಳ್ಳಾರಿ, NEWS DESK ಅ.8: ಮಳೆ ಕೈಕೊಟ್ಟ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ತೊಗರಿ,…

*ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಿಯ ಕರಗೋತ್ಸವ: ಅ.11ರಿಂದ ನಗರ ಪ್ರದಕ್ಷಿಣೆ*

ಅಕ್ಟೋಬರ್ 8, 2026

*ಮಡಿಕೇರಿ ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಟೂರ್*

ಅಕ್ಟೋಬರ್ 8, 2026

*ಮಡಿಕೇರಿ ನಗರಸಭೆ ಸಾಮಾನ್ಯ ಸಭೆಯಲ್ಲಿ ರಸ್ತೆ, ಕಸ ಹಾಗೂ ನೀರಿನ ಸಮಸ್ಯೆ ಸದ್ದು*

ಅಕ್ಟೋಬರ್ 8, 2026

*‘ಫಿಲ್ಮ್ ಐಕಾನ್’ ಪ್ರಶಸ್ತಿಗೆ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಆಯ್ಕೆ*

ಅಕ್ಟೋಬರ್ 8, 2026

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.