
ಮಡಿಕೇರಿ ಜೂ.18 NEWS DESK : ಸ್ಟಾಫ್ ಸೆಲೆಕ್ಷನ್ ಕಮಿಷನ್ ಭಾರತ ಸರ್ಕಾರ ಇವರು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಗ್ರೂಪ್ `ಬಿ` ನಾನ್ ಗೆಜೆಟೆಡ್ ಮತ್ತು ಗ್ರೂಪ್ `ಸಿ’ ಹುದ್ದೆಗಳನ್ನು ಭರ್ತಿ ಮಾಡಲು Combined Graduate Level Examination- 2026 ರ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 22 ಕೊನೆಯ ದಿನವಾಗಿದೆ. ವಿದ್ಯಾರ್ಹತೆ: ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ: 18 ರಿಂದ 32 ವರ್ಷಗಳು. ಅರ್ಜಿ ಸಲ್ಲಿಸಲು ಜೂನ್, 22 ಕೊನೆಯ ದಿನವಾಗಿದೆ. ಖಾಲಿ ಹುದ್ದೆಗಳು 12,256, ಅರ್ಜಿ ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ -2ಎ, 2ಬಿ, 3ಎ, 3ಬಿ, ಗೆ ಸೇರಿದ ಪುರುಷ ಅಭ್ಯರ್ಥಿಗಳಿಗೆ ರೂ.100. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿ.ಡಬ್ಯ್ಲೂ.ಡಿ, ಇ.ಎಸ್.ಎಮ್, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್: https://ssc.gov.in and www.ssckkr.kar.nic.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.








