Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*

ಜೂನ್ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜೂ.22 NEWS DESK :  ಬಸವಣ್ಣನವರ ವಚನಗಳು ಕೇವಲ ಓದು ಅಥವಾ ಉದ್ಯೋಗಕ್ಕಾಗಿ ಸೀಮಿತವಾಗದೆ, ಜೀವನದ ಮೌಲ್ಯಗಳಾಗಿ ಅಳವಡಿಸಿಕೊಳ್ಳಬೇಕು ಎಂದು ಪುಣೆಯ ಬಸವ ತಿಳವಳಿಕೆ ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ. ಶಶಿಕಾಂತ ಪಟ್ಟಣ ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು. ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಆಯೋಜಿಸಿದ್ದ “ಸಾಂಸ್ಕೃತಿಕ ನಾಯಕ ಬಸವಣ್ಣ” ವಿಶೇಷ ಉಪನ್ಯಾಸ ಹಾಗೂ ವಚನ ಗಾಯನ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ಮಾತನಾಡಿದರು. ಕನ್ನಡ ಭಾಷೆಯ ಬೆಳವಣಿಗೆಯಲ್ಲಿ ಬಸವಾದಿ ಶರಣರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಚನಗಳು ಸಮಾನತೆ, ಮಾನವೀಯತೆ ಹಾಗೂ ವೈಚಾರಿಕ ಕ್ರಾಂತಿಯ ಸಂದೇಶವನ್ನು ಸಾರಿದ್ದು, ಲಿಂಗಾಯತವು ಜಾತಿ ಅಥವಾ ಧರ್ಮವಲ್ಲ; ಅದು ಪ್ರಾಯೋಗಿಕ ಬದುಕಿನತ್ತ ಕೊಂಡೊಯ್ಯುವ ವೈಚಾರಿಕ ಆಂದೋಲನವಾಗಿದೆ ಎಂದು ಅವರು ಹೇಳಿದರು. ಜಗತ್ತಿನಲ್ಲಿ ಮೊದಲ ಬಾರಿಗೆ ತೃತೀಯ ಲಿಂಗಿಗಳ ಅಸ್ತಿತ್ವ ಹಾಗೂ ಮಹಿಳಾ ಸ್ವಾತಂತ್ರ್ಯದ ಪರ ಧ್ವನಿ ಎತ್ತಿದವರಲ್ಲಿ ಬಸವಾದಿ ಶರಣರು ಪ್ರಮುಖರು. ಶರಣರು ಬೋಧನೆ ಮಾಡುವುದಕ್ಕಿಂತ ತಮ್ಮ ಬದುಕಿನ ಮೂಲಕವೇ ಆದರ್ಶವನ್ನು ತೋರಿಸಿದರು. ಅವರು ನುಡಿದಂತೆ ನಡೆದವರು ನಡೆದಂತೆ ನುಡಿದವರು. ದಾಸೋಹದ ತತ್ವವನ್ನು ವಿಶ್ವಕ್ಕೆ ಪರಿಚಯಿಸಿದ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಮಾತ್ರವಲ್ಲ, ವಿಶ್ವನಾಯಕ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ಮಾತನಾಡಿ, ಬಸವಣ್ಣನವರ ವಚನಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ. ಬಸವಾದಿ ಶರಣರ ಸಮಾನತೆ, ಶ್ರಮದ ಗೌರವ, ಮಾನವೀಯ ಮೌಲ್ಯಗಳು ಮತ್ತು ವೈಜ್ಞಾನಿಕ ಮನೋಭಾವವನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಅಂತಾರಾಷ್ಟ್ರೀಯ ಹಿಂದುಸ್ತಾನಿ ಗಾಯಕ **ಡಾ. ಮೃತ್ಯುಂಜಯ ಶೆಟ್ಟರ ಅವರು ವಚನ ಗಾಯನ ನಡೆಸಿಕೊಟ್ಟರು. ನಂತರ ಮಾತನಾಡಿದ ಅವರು, ಜಗತ್ತಿನಲ್ಲಿ ಅತ್ಯಂತ ಹೆಚ್ಚು ಚರ್ಚೆಗೆ ಒಳಗಾದ ಮಹನೀಯರಲ್ಲಿ ಬಸವಣ್ಣ ಪ್ರಮುಖರು ಎಂದರು. ಅವರ ವಚನಗಳು ವಿಶ್ವದ ಹಲವು ದೇಶಗಳಲ್ಲಿ ಅಧ್ಯಯನ, ಭಾಷಾಂತರ ಮತ್ತು ಗಾಯನದ ಮೂಲಕ ಜನರಿಗೆ ತಲುಪಿವೆ. ಸಂಗೀತವು ಕೇವಲ ಮನರಂಜನೆಯ ಸಾಧನವಲ್ಲ; ಅದು ಮನಸ್ಸಿಗೆ ಬೆಳಕು ನೀಡುವ ಮಾಧ್ಯಮವಾಗಿದೆ. ಈ ನಿಟ್ಟಿನಲ್ಲಿ ಬಸವಣ್ಣನವರ ವಚನಗಳನ್ನು ಕೇವಲ ಒಂದು ಊರಿಗೆ ಜಿಲ್ಲೆಗೆ ಸೀಮಿತಗೊಳಿಸದೆ ಇಂದಿನ ಯುವಜನತೆ ಬಸವಣ್ಣನವರ ವಚನಗಳನ್ನು ಓದಿ ಅರ್ಥೈಸಿಕೊಂಡು ಬದುಕಿನದ್ದಕ್ಕೂ ಅನ್ವಯಿಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು ಮೌಲ್ಯಮಾಪನ ಡಾ. ಸುರೇಶ್ ಎಂ, ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಪುಟ್ಟರಾಜಪ್ಪ, ಮೇಜರ್ ಪ್ರೊ.ಬಿ.ರಾಘವ, ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಸಂಗಮೇಶ, ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಸ್ನಾತಕ ಹಾಗೂ ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ರಮೇಶ್ ಸ್ವಾಗತಿಸಿದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ಜಮೀರ್ ಅಹಮದ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ.…

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.