Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮರಗಳ ಹನನ ಮತ್ತು ಪರಿಸರಕ್ಕೆ ಹಾನಿ : ಅರಣ್ಯ, ಗಣಿ ಇಲಾಖೆಗೆ ಮುತ್ತಿಗೆ ಹಾಕುವ ಎಚ್ಚರಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮರಗಳ ಹನನ ಮತ್ತು ಪರಿಸರಕ್ಕೆ ಹಾನಿ : ಅರಣ್ಯ, ಗಣಿ ಇಲಾಖೆಗೆ ಮುತ್ತಿಗೆ ಹಾಕುವ ಎಚ್ಚರಿಕೆ*

ಜೂನ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.26 NEWS DESK : ಮಲ್ಮ ಬೆಟ್ಟ ಸಮೀಪದ ಜಾಗದಲ್ಲಿ ನಡೆದಿರುವ ಮರಗಳ ಹನನ ಮತ್ತು ಪರಿಸರ ಹಾನಿಯ ವಿರುದ್ಧ ಅರಣ್ಯ ಇಲಾಖೆ ಹಾಗೂ ಗಣಿ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಬೃಹತ್ ಹೋರಾಟವನ್ನು ರೂಪಿಸುವುದಾಗಿ ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ ಎಚ್ಚರಿಕೆ ನೀಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್ ನ ಅಧ್ಯಕ್ಷ ಚೊಟ್ಟೆಕ್ ಮಾಡ ರಾಜೀವ್ ಬೋಪಯ್ಯ ಅವರು ಶ್ರೀ ಇಗ್ಗುತ್ತಪ್ಪ ದೇವರ ನೆಲೆ ಕೊಡವರ ಹಾಗೂ ಕೊಡವ ಮೂಲ ನಿವಾಸಿಗಳ ಆಸ್ಮಿತೆ, ನಂಬಿಕೆ ಮತ್ತು ಸಂಸ್ಕøತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿರುವ ಪವಿತ್ರ ಸ್ಥಳವಾಗಿದೆ. ದೇವಾಲಯ ವ್ಯಾಪ್ತಿಯ ಮಲ್ಮ ಬೆಟ್ಟ ಪ್ರದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ಕೊಡವ ಪರಂಪರೆಯ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಪ್ರದೇಶದಲ್ಲಿ ಈಗಾಗಲೇ ಸಾಕಷ್ಟು ಮರಗಳು, ಬೆತ್ತ ಮತ್ತಿತರ ಸಸ್ಯ ರಾಶಿಗಳನ್ನು ಕಡಿಯಲಾಗಿದ್ದು, ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿ ಪಡೆಯಲಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಸಾಮಾನ್ಯ ಜನರು ಸ್ವಂತ ಬಳಕೆಗಾಗಿ ಸಣ್ಣ ಮರಗಳನ್ನು ಕಡಿದರೂ ತಕ್ಷಣ ಪ್ರಕರಣ ದಾಖಲಿಸುವ ಅರಣ್ಯ ಅಧಿಕಾರಿಗಳು ಈ ಪ್ರಕರಣದಲ್ಲಿ ಮೌನ ವಹಿಸಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು. ಅರಣ್ಯ ಪ್ರದೇಶದಲ್ಲಿ ಅಥವಾ ಸಂರಕ್ಷಿತ ಪ್ರದೇಶದಲ್ಲಿ ಮರಗಳು, ಬೆತ್ತ ಮತ್ತಿತರ ಅರಣ್ಯ ಸಂಪತ್ತನ್ನು ಅನುಮತಿಯಿಲ್ಲದೆ ಕಡಿಯುವುದು, ನಾಶಪಡಿಸುವುದು ಅಥವಾ ಸಾಗಾಟ ಮಾಡುವುದು ಕಾನೂನುಬಾಹಿರವಾಗಿದೆ. ಇದೇ ಪ್ರದೇಶದಲ್ಲಿ ಬಂಡೆಗಳನ್ನು ಒಡೆದು ಭೂಮಿಯ ಸ್ವರೂಪವನ್ನು ಬದಲಾಯಿಸಿರುವುದು ಕೂಡ ಕಂಡು ಬಂದಿದ್ದು ಇದಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಸೂಕ್ತ ಪರವಾನಗಿ ಪಡೆಯಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಅನುಮತಿ ಇಲ್ಲದೆ ಕಾಮಗಾರಿ ನಡೆಸಲಾಗುತ್ತಿದ್ದರೆ, ಕಣ್ಣುಮುಚ್ಚಿ ಕುಳಿತಿರುವುದರ ಹಿಂದಿನ ಕಾರಣವೇನು ಮತ್ತು ಪರವಾನಗಿ ನೀಡಿದ್ದರೆ, ಯಾವ ಕಾನೂನಿನಡಿಯಲ್ಲಿ ನೀಡಿದ್ದೀರ ಎಂದು ಇಲಾಖೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು. ಅಕ್ರಮ ಕಾಮಗಾರಿಗಳ ವಿರುದ್ಧ ಸ್ಥಳೀಯ ಜನರು ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ತಮ್ಮ ಆತಂಕ ಮತ್ತು ಆಕ್ಷೇಪಣೆಗಳನ್ನು ಹಲವು ಬಾರಿ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಸ್ಥಳೀಯರ ಭಾವನೆಗಳಿಗೆ ಪೂರಕವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿದರು. ಸೂಕ್ಷ್ಮ ಪರಿಸರ ಪಶ್ಚಿಮಘಟ್ಟ ಪ್ರದೇಶದಲ್ಲಿ ಮರಗಳನ್ನು ಕಡಿಯಲು, ಬೆಟ್ಟಗುಡ್ಡಗಳನ್ನು ಕೊರೆಯಲು ಅಥವಾ ಇನ್ಯಾವುದೇ ವಾಣಿಜ್ಯ ಉದ್ದೇಶಗಳಿಗೆ ಬಳಸಲು ಕಾನೂನು ಪ್ರಕಾರ ಅನುಮತಿ ಇದೆಯೇ ಎಂದು ಮಾಧ್ಯಮದ ಮೂಲಕ ಜಿಲ್ಲಾಧಿಕಾರಿಗಳಿಂದ ಸ್ಪಷ್ಟ ಸಂದೇಶವನ್ನು ಬಯಸಿದ್ದೆವು. ಆದರೆ ಇಲ್ಲಿಯವರೆಗೆ ಜಿಲ್ಲಾಧಿಕಾರಿಗಳು ಈ ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿಲ್ಲ ಎಂದು ರಾಜೀವ್ ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಕೊಡವರ ಭಾವನೆಗೆ ವಿರುದ್ಧವಾಗಿ ಮಲ್ಮ ಬೆಟ್ಟ ಸಮೀಪ ನಡೆದಿರುವ ಪರಿಸರ ಹಾನಿಯ ಕುರಿತು ಜಿಲ್ಲೆಯ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ಕೂಡ ಗಮನ ಹರಿಸಿ ಕ್ರಮಕ್ಕೆ ಮುಂದಾಗಬೇಕು. ಸರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಅರಣ್ಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ ನ ಉಪಾಧ್ಯಕ್ಷ ಅಚ್ಚಾಂಡಿರ ಕುಶಾಲಪ್ಪ, ಕಾರ್ಯದರ್ಶಿ ಅಣ್ಣಿರ ಹರೀಶ್ ಮಾದಪ್ಪ, ಖಜಾಂಚಿ ಜಮ್ಮಡ ಗಣೇಶ್ ಅಯ್ಯಣ್ಣ ಹಾಗೂ ಪ್ರಮುಖರಾದ ಅಪ್ಪಂಡೇರಂಡ ಯಶವಂತ್ ಉಪಸ್ಥಿತರಿದ್ದರು.


Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ನಗರದ ಸಂಪಿಗೆಕಟ್ಟೆ ಮೂಲಕ ಮಹದೇವಪೇಟೆ ಸಂಪರ್ಕಿಸುವ ರಸ್ತೆಯನ್ನು ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆಯನ್ನಾಗಿ…

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.