Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನೀಟ್ ಪರೀಕ್ಷೆ ಹಗರಣ : ಕೇಂದ್ರ ಸರಕಾರದ ಬೇಜವಾಬ್ದಾರಿತನ ಕಾರಣ : ಕೊಡಗು ಕಾಂಗ್ರೆಸ್ ಆರೋಪ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನೀಟ್ ಪರೀಕ್ಷೆ ಹಗರಣ : ಕೇಂದ್ರ ಸರಕಾರದ ಬೇಜವಾಬ್ದಾರಿತನ ಕಾರಣ : ಕೊಡಗು ಕಾಂಗ್ರೆಸ್ ಆರೋಪ

ಜೂನ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement


ಮಡಿಕೇರಿ ಜೂ.26 NEWS DESK  : ನೀಟ್ ಪರೀಕ್ಷಾ ಹಗರಣಗಳಿಗೆ ಕೇಂದ್ರ ಸರಕಾರದ ಬೇಜವಾಬ್ದಾರಿಯ ಧೋರಣೆಗಳೆ ಪ್ರಮುಖ ಕಾರಣವಾಗಿದ್ದು, ಇದರಿಂದ ಲಕ್ಷಾಂತರ ಮಕ್ಕಳ ಬದುಕು ಹಾಳಾಗಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳ ಭವಿಷ್ಯವನ್ನು ನಿರ್ಧರಿಸುವ ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲಾಗದ ಕೇಂದ್ರದ ವೈಫಲ್ಯತೆಗಳನ್ನು ಜನರ ಮುಂದಿಡುವ ಕಾರ್ಯವನ್ನು ಕಾಂಗ್ರೆಸ್ ದೇಶ ವ್ಯಾಪಿ ನಡೆಸುತ್ತಿದೆ. ಕಳೆದ ನೀಟ್ ಪರೀಕ್ಷೆಯಲ್ಲಿನ ಹಗರಣಗಳ ಬಳಿಕ, ನೀಟ್ ಮರುಪರೀಕ್ಷೆಯನ್ನು ಸೈನಿಕರನ್ನು ಒಳಗೊಂಡಂತೆ ದೊಡ್ಡ ಮಟ್ಟದ ಬಂದೋಬಸ್ತ್ ನೊಂದಿಗೆ ನಡೆಸುವ ಮೂಲಕ ಅದನ್ನೇ ಸಾಧನೆ ಎಂದು ಬಿಂಬಿಸುವ ಪ್ರಯತ್ನ ಕೇಂದ್ರದ ಬಿಜೆಪಿ ಸರಕಾರದಿಂದ ನಡೆದಿರುವುದಾಗಿ ಟೀಕಿಸಿದರು. ಕೇಂದ್ರದ ಬಿಜೆಪಿ ನೇತೃತ್ವದ ಎನ್‍ಡಿಎ ಅಧಿಕಾರಕ್ಕೆ ಬಂದ ಕಳೆದ ಒಂದು ದಶಕಗಳ ಅವಧಿಯಲ್ಲಿ ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಸಮರ್ಪಕತೆಯಿಂದ ರಾಷ್ಟ್ರವ್ಯಾಪಿ 6.50 ಕೋಟಿಗೂ ಹೆಚ್ಚಿನ ಮಕ್ಕಳು ಬಾಧಿತರಾಗಿದ್ದಾರೆ. ಪರೀಕ್ಷಾ ಹಗರಣಗಳಿಗೆ ಸಿಲುಕಿ ಸಂಕಷ್ಟಕ್ಕೆ ಒಳಗಾದ ಮಕ್ಕಳು ಜೀವ ಕಳೆದುಕೊಂಡಿರುವ ಘಟನೆಗಳು ನಡೆದಿದೆ. ಇವೆಲ್ಲವುಗಳಿಗೆ ಸಂಬಂಧಿಸಿದಂತೆ ಕೇಂದ್ರದ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕಿತ್ತಾದರು, ಆ ಕಾರ್ಯವನ್ನು ಮಾಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ, ನೀಟ್ ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಲೋಪದಿಂದಾಗಿ ಪ್ರಶ್ನೆ ಪತ್ರಿಕೆಗಳ ಸೋರಿಕೆಯಾಗಿ ದೇಶದ ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಕೊಡಲಿ ಪೆಟ್ಟು ಬಿದ್ದಿದೆ. ಇದು ಭಾರತದ ಪರೀಕ್ಷಾ ವ್ಯವಸ್ಥೆಯ ಸಂಪೂರ್ಣ ವಿಫಲತೆಯಾಗಿದೆ ಎಂದರು. ನೀಟ್ ಪರೀಕ್ಷಾ ಹಗರಣದ ವೈಫಲ್ಯದ ಹೊಣೆಗಾರಿಕೆಯನನ್ನು ನಿಗದಿಪಡಿಸುವ ಮಹತ್ವದ ಯಾವುದೇ ಕ್ರಮವನ್ನು ಕೇಂದ್ರ ಸರ್ಕಾರ ಕೈಗೊಂಡಿಲ್ಲ. ಪರೀಕ್ಷಾ ನಿರ್ವಹಣೆಯ ಜವಾಬ್ದಾರಿ ಹೊತ್ತ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಒಟ್ಟು ಪ್ರಕರಣದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಸಮರ್ಪಕವಾಗಿ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಇಲ್ಲವೆ ಎನ್‍ಟಿಎ ಇಂದು ಸ್ವತಃ ಪಶ್ನೆಗಳಿಗೆ ಒಳಗಾಗುವ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಸರಕಾರ ವಿದ್ಯಾರ್ಥಿಗಳಿಂದ ಪರೀಕ್ಷೆಗಳಲ್ಲಿ ಕಠಿಣ ಪರಿಶ್ರಮವನ್ನು ನಿರೀಕ್ಷಿಸುತ್ತದೆ. ಆದರೆ, ಅದೇ ಸರಕಾರ ಕನಿಷ್ಟ ಪ್ರಶ್ನೆ ಪತ್ರಿಕೆಯನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗಿಲ್ಲವೆಂದು ಗೇಲಿ ಮಾಡಿ, ಇದು ಪ್ರಶ್ನೆ ಪತ್ರಿಕೆಯ ಸೋರಿಕೆಯಲ್ಲ, ಮಕ್ಕಳ ಭವಿಷ್ಯದ ಮೇಲಿನ ಚೆಲ್ಲಾಟವೆಂದು ತೀಕ್ಷ್ಣವಾಗಿ ನುಡಿದರು. ಕೇಂದ್ರ ಸರಕಾರ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಬೇಕು. ಪ್ರಶ್ನೆ ಪತ್ರಿಕೆ ತಯಾರಿಕೆ, ಮುದ್ರಣ, ಸಾರಿಗೆ ವ್ಯವಸ್ಥೆ. ಪರೀಕ್ಷಾ ಕೇಂದ್ರಗಳ ಡಿಜಿಟಲ್ ವ್ಯವಸ್ಥೆಗಳು ಮತ್ತು ಪರೀಕ್ಷಾ ನಿಯಮಗಳನ್ನು ತಪಾಸಣೆ ಮಾಡಬೇಕು. ಮುಂದಿನ ದಿನಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಘಟನೆಗಳು ನಡೆಯಬಾರದೆಂದು ಆಗ್ರಹಿಸಿದರು. ಇದೇ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು, ಮತದಾರರ ವಿಶೇಷ ಪರಿಷ್ಕರಣೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಸ್ವ-ಇಚ್ಛೆಯಿಂದ ತೊಡಗಿಸಿಕೊಳ್ಳಬೇಕು. ಯಾವುದೇ ಕಾರಣಕ್ಕು ಪರಿಷ್ಕರಣೆ ಪ್ರಕಿಯೆ ತಪ್ಪಿಸಿಕೊಂಡು ಮತದಾನದ ಹಕ್ಕಿನಿಂದ ವಂಚಿತರಾಗದಿರಿ ಎಂದು ಕರೆ ನೀಡಿದರು. ಸುದ್ದಿಗೊಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಹೆಚ್.ಎಂ.ನಂದಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ಹಾಗೂ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗು ಜಿಲ್ಲಾ ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ನವೆಂಬರ್ 3, 2026

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.3 : ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನಾಂಗಗಳಿಗೆ ಕಳೆದ 8 ತಿಂಗಳಿನಿoದ ಸರಕಾರ…

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.