Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*
  • *ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮತಾಂತರ ಪ್ರಕರಣ : ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ್ನು ಗುರಿ ಮಾಡದಂತೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮತಾಂತರ ಪ್ರಕರಣ : ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ್ನು ಗುರಿ ಮಾಡದಂತೆ ಮನವಿ*

ಜೂನ್ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜೂ.26 NEWS DESK : ಇತ್ತೀಚೆಗೆ ನಡೆದ ಮತಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆ ಹೊರತು ನಿಸರ್ಗಧಾಮ ಟೂರಿಸ್ಟ್ ಸೆಂಟರ್ (ಎನ್‍ಟಿಸಿ) ನ್ನು ಗುರಿ ಮಾಡಬಾರದು ಎಂದು ಇಲ್ಲಿನ ವರ್ತಕರು ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಥಳೀಯ ವರ್ತಕ ಮುರಳಿ ಅಂಚೆಮನೆ ಅವರು ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನಲ್ಲಿ 70 ಮಳಿಗೆಗಳಿದ್ದು, ಸುಮಾರು 300 ರಿಂದ 400 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಕೇವಲ ಮುಸಲ್ಮಾನರ ವ್ಯಾಪಾರ ಕೇಂದ್ರವಲ್ಲ, ಇಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು, ಸೇಟುಗಳು ಸೇರಿದಂತೆ ಎಲ್ಲಾ ವರ್ಗದವರು ಒಗ್ಗಟ್ಟಿನಿಂದ ವ್ಯಾಪಾರ ಮಾಡುತ್ತಿದ್ದಾರೆ. ಕೇರಳದ ಒಂದು ಮುಸ್ಲಿಂ ಕುಟುಂಬ ಮಾತ್ರ ಇಲ್ಲಿ ಇದ್ದು, ಉಳಿದ ಮುಸಲ್ಮಾನರು ಸ್ಥಳೀಯರೇ ಆಗಿದ್ದಾರೆ. ಎಲ್ಲಾ ಧರ್ಮದವರ ಹಬ್ಬಗಳನ್ನು ಸಡಗರದಿಂದ ಆಚರಿಸುತ್ತೇವೆ. ಆದರೆ ಇತ್ತೀಚೆಗೆ ಮತಾಂತರ ಪ್ರಕರಣ ನಡೆದ ನಂತರ ಗೊಂದಲದ ವಾತಾವರಣ ಸೃಷ್ಟಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಧರ್ಮದ ಅಧಾರದ ಮೇಲೆ ಇಲ್ಲಿ ಕೆಲಸ ನೀಡುತ್ತಿಲ್ಲ, ಕೆಲಸ ಮಾಡಲು ಇಚ್ಛಿಸುವವರಿಗೆ ಮಾತ್ರ ಉದ್ಯೋಗವಕಾಶವನ್ನು ನೀಡಲಾಗುತ್ತಿದೆ. ಧರ್ಮ ಜಾತಿ ಅಥವಾ ವೈಯಕ್ತಿಕ ನಂಬಿಕೆಗಳ ಆಧಾರದ ಮೇಲೆ ಭೇದ ಭಾವ ಮಾಡುವುದಿಲ್ಲ. ಯಾವುದೇ ಕಾನೂನು ಬಾಹಿರ ಅಥವಾ ಬಲವಂತದ ಧರ್ಮಾಂತರ ಚಟುವಟಿಕೆಗಳನ್ನು ನಾವು ವಿರೋಧಿಸುತ್ತೇವೆ. ಯಾವುದಾದರೂ ಅಪ್ರಾಪ್ತ ವಯಸ್ಸಿನ ಬಾಲಕನ ಮೇಲೆ ಕಾನೂನು ಬಾಹಿರವಾಗಿ ಪ್ರಭಾವ ಬೀರಲಾಗಿದೆ ಅಥವಾ ಧರ್ಮಾಂತರ ಮಾಡಲಾಗಿದೆ ಎಂಬ ಆರೋಪವಿದ್ದಲ್ಲಿ ಅದರ ಕುರಿತು ನ್ಯಾಯ ಸಮ್ಮತ ತನಿಖೆ ನಡೆಸಿ, ತಪ್ಪಿತಸ್ಥನೆಂದು ಸಾಬೀತಾದ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎನ್‍ಟಿಸಿಯಲ್ಲಿ ನಮ್ಮ ವ್ಯವಹಾರಗಳನ್ನು ಕಾನೂನು ಬದ್ಧವಾಗಿ ನಡೆಸುತ್ತಿದ್ದು, ನಮಗೆ ದೊರೆತ ಅವಕಾಶಗಳಿಂದ ಸ್ವಾವಲಂಭಿಯಾಗಿ ನಿಲ್ಲಲು ಸಾಧ್ಯವಾಗಿದೆ. ಧರ್ಮಾಂತರ ಚಟುವಟಿಕೆಗೆ ಸಂಬಂಧಿಸಿದ ಯಾವುದೇ ವೈಯಕ್ತಿಕ ಕೃತ್ಯಗಳಿಗೆ ಎನ್‍ಟಿಸಿ ಸಂಸ್ಥೆ ಜವಾಬ್ದಾರಿಯಲ್ಲ. ಕಾನೂನಿನ ಪ್ರಕಾರ ಹೊಣೆಗಾರಿಕೆ ಇದ್ದಲ್ಲಿ ಅದು ಸಂಬಂಧಿಸಿದ ವ್ಯಕ್ತಿಗೆ ಮಾತ್ರ ಅನ್ವಯಿಸಬೇಕು ಎಂದರು. ನಮ್ಮ ವ್ಯಾಪಾರ, ವ್ಯವಹಾರವನ್ನು ಸ್ಥಗಿತಗೊಳಿಸುವ ಅಥವಾ ನಿರ್ಬಂಧಿಸುವ ಪ್ರಯತ್ನಗಳು ನಡೆದರೆ ಅದರಿಂದ ನಮಗೆ ನಷ್ಟ ಉಂಟಾಗುವುದಲ್ಲದೆ ನಮ್ಮ ಹೂಡಿಕೆಗಳ ಮೇಲೆ ಪರಿಣಾಮ ಬೀರುತ್ತದೆ.
ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ನ್ಯಾಯ ಸಮ್ಮತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ನಿರಪರಾಧಿ ವ್ಯಾಪಾರಿಗಳು ಹಾಗೂ ಉದ್ಯೋಗಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದು ಮುರಳಿ ಅಂಚೆಮನೆ ಮನವಿ ಮಾಡಿದರು. ಮಳಿಗೆಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಗ್ರೂಪ್ ನ್ನು ರಚಿಸಲಾಗಿದ್ದು, ತಮಗೆ ಆಗುವ ಅನ್ಯಾಯದ ಕುರಿತು ವಿಚಾರ ವಿನಿಮಯ ಮಾಡಿಕೊಂಡಲ್ಲಿ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದರು. ಮತಾಂತರದ ವಿರುದ್ಧ ಜೂ.30 ರಂದು ಕುಶಾಲನಗರದಲ್ಲಿ ನಡೆಯುವ ಜನಾಂದೋಲನಕ್ಕೆ ಬೆಂಬಲವಾಗಿ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನ ಎಲ್ಲಾ ಮಳಿಗೆಗಳನ್ನು ಬಂದ್ ಮಾಡುವುದಾಗಿ ಸ್ಪಷ್ಟಪಡಿಸಿದರು. ಮತ್ತೊಬ್ಬ ವರ್ತಕ ಲೋಕೇಶ್ ಡಿ.ಕೆ ಅವರು ಮಾತನಾಡಿ ಮತಾಂತರ ಪ್ರಕರಣದ ನಂತರ ಎನ್‍ಟಿಸಿಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದು ಬೇಡ ಎನ್ನುವ ಕುರಿತು ಚರ್ಚೆಗಳು ನಡೆಯುತ್ತಿದೆ. ಈ ರೀತಿಯ ಗೊಂದಲಗಳಿಂದ ಸಿಬ್ಬಂದಿಗಳಿಗೆ ತೊಂದರೆಯಾಗುತ್ತದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.
ವರ್ತಕರುಗಳಾದ ಪಿ.ಎಸ್.ಗಿರೀಶ್, ಗಜಾನನ ಚೌದ್ರಿ ಹಾಗೂ ಸದಾಶಿವ ಹೆಚ್.ಎನ್ ಮಾತನಾಡಿ ನಿಸರ್ಗಧಾಮ ಟೂರಿಸ್ಟ್ ಸೆಂಟರ್ ನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ವ್ಯಾಪಾರ ನಡೆಸುತ್ತಿದ್ದು, ಯಾವುದೇ ಭೇದ ಭಾವ ನಮ್ಮಲ್ಲಿ ಇಲ್ಲ ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಬಂಗಾರ ಪ್ರಿಯರೇ ಎಚ್ಚರ: ಮನೆಯಲ್ಲಿ ಎಷ್ಟು ಚಿನ್ನ ಇಡಬಹುದು? ನಿಯಮ ತಿಳಿಯಿರಿ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಸಂಪಿಗೆಕಟ್ಟೆ–ಮಹದೇವಪೇಟೆ ಸಂಪರ್ಕ ರಸ್ತೆ ಉದ್ಘಾಟನೆ; ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿ; ಮೊದಲ ಹಂತದ 80 ಮೀಟರ್ ಕಾಂಕ್ರೀಟ್ ರಸ್ತೆ ಲೋಕಾರ್ಪಣೆ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.8: ನಗರದ ಸಂಪಿಗೆಕಟ್ಟೆ ಮೂಲಕ ಮಹದೇವಪೇಟೆ ಸಂಪರ್ಕಿಸುವ ರಸ್ತೆಯನ್ನು ರೂ.85 ಲಕ್ಷ ವೆಚ್ಚದಲ್ಲಿ ಸರ್ವಋತು ರಸ್ತೆಯನ್ನಾಗಿ…

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.