
ಮಡಿಕೇರಿ NEWS DESK ಜೂ.27 : ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ವತಿಯಿಂದ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜ್ ನಲ್ಲಿ ಸಸಿಗಳನ್ನು ನೆಟ್ಟು ಪರಿಸರ ರಕ್ಷಣೆಗೆ ಕರೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ ಅವರು ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ, ಮುಂದಿನ ಪೀಳಿಗೆಯ ಸುಂದರ ಭವಿಷ್ಯಕ್ಕಾಗಿ ಪರಿಸರ ರಕ್ಷಣೆಯ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು. ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪವಿತ್ರ ಎಸ್., ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಚೇತನ್ ಕೋಚನ, ನಗರಸಭೆಯ ಮಾಜಿ ಅಧ್ಯಕ್ಷೆ ಜುಲೇಕಾಬಿ, ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮೂಡ ಸದಸ್ಯೆ ಮಿನಾಜ್ ಪ್ರವೀಣ್, ಪ್ರಮುಖರಾದ ಧನಲಕ್ಷಿö್ಮ ಪನ್ನು, ಹರಿಣಾಕ್ಷಿ, ರೇವತಿ ರಮೇಶ್, ಪ್ರೇಮ ನಿಂಗಪ್ಪ, ಪ್ರೇಮ ಕಷ್ಣಪ್ಪ, ವಿಮಲ, ರೈಸ ಖಾನ್, ತಾಜುನ್ನಿಸ, ರೀನಾ, ಶೈನಾಜ್, ಅರ್ಜುನ್ ಸೂರ್ಯ, ಕಾಲೇಜ್ ನ ಪ್ರಾಂಶುಪಾಲರಾದ ವಿಮಲಾ ಹೆಚ್. ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.









