Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಪೋಲಿಯೋ ಹನಿ ಹಾಕಿಸಿಕೊಂಡ ಕೊಡಗಿನ ಮಕ್ಕಳು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ : ಪೋಲಿಯೋ ಹನಿ ಹಾಕಿಸಿಕೊಂಡ ಕೊಡಗಿನ ಮಕ್ಕಳು

ಜೂನ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.28 NEWS DESK : ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವ ಮೂಲಕ ಕೊಡಗು‌ ಜಿಲ್ಲೆಯಾದ್ಯಂತ  ಚಾಲನೆ ದೊರೆಯಿತು. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ವಿರಾಜಪೇಟೆಯ ತಮ್ಮ ಗೃಹ ಕಚೇರಿಯಲ್ಲಿ ಹಾಗೂ ಡಾ.ಮಂತರ್ ಗೌಡ ಅವರು ಸೋಮವಾರಪೇಟೆಯ ತಾಲ್ಲೂಕು ಆಸ್ಪತ್ರೆಯಲ್ಲಿ ಶಿಶುಗಳಿಗೆ ಪೋಲಿಯೋ ಹನಿ ನೀಡಿ ಕಾರ್ಯಕ್ರಮದ ಮಹತ್ವ ಕುರಿತು ಸಂದೇಶ ಸಾರಿದರು.
ಹಾಗೆಯೇ ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು ಐದು ವರ್ಷದ ಮಕ್ಕಳಿಗೆ ಪೋಲಿಯೋ ಹನಿ ನೀಡಿ ಗಮನ ಸೆಳೆದರು. ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ರಾಷ್ಟ್ರವು ಪೋಲಿಯೋ ಮುಕ್ತವಾಗಿದ್ದರೂ ಸಹ, ಇತರೆ ದೇಶಗಳಲ್ಲಿ ಪೋಲಿಯೋ ಪ್ರಕರಣಗಳು ಇರುವುದರಿಂದ ಹೆಚ್ಚಿನ ಎಚ್ಚರ ವಹಿಸಬೇಕಿದೆ. ಆದ್ದರಿಂದ ಐದು ವರ್ಷದೊಳಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಕೊಡಿಸಬೇಕು ಎಂದು‌ ಕರೆ ನೀಡಿದರು. ಐದು ವರ್ಷದೊಳಗಿನ‌ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ನೀಡುವುದರಿಂದ ಮಕ್ಕಳ ಬೆಳವಣಿಗೆ ಸಂದರ್ಭದಲ್ಲಿ ಉಂಟಾಗಬಹುದಾದ ವಿಕಲತೆಯನ್ನು ತಡೆಯಬಹುದಾಗಿದೆ. ಆದ್ದರಿಂದ ಈ ಬಗ್ಗೆ ಹತ್ತಿರದವರಿಗೂ ಮಾಹಿತಿ ನೀಡಿ ಶಿಶುಗಳಿಗೆ ಪೋಲಿಯೋ ಹನಿ ಹಾಕಿಸಬೇಕು ಎಂದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಎರಡು ಹನಿ ನೀಡುವುದರಿಂದ ಮಕ್ಕಳ ಬೆಳವಣಿಗೆಗೆ ಸಹಕರಾರಿಯಾಗಲಿದೆ ಎಂದರು. ದೇಶವು ಪೋಲಿಯೋ ಮುಕ್ತವಾಗಿದ್ದರೂ ಸಹ, ವಿಶ್ವದ ಹಲವು ರಾಷ್ಟ್ರಗಳಲ್ಲಿ ಪೋಲಿಯೋ ಇನ್ನೂ ಇರುವುದರಿಂದ, ಅದು ಮತ್ತೆ ಕಾಣಿಕೊಳ್ಳುವ ಸಾಧ್ಯತೆ ಇರುವುದರಿಂದ, ಈ ಬಗ್ಗೆ ಎಚ್ಚರ ವಹಿಸಬೇಕಿದೆ. ಆದ್ದರಿಂದ ಐದು ವರ್ಷದೊಳಗಿನ ಮಕ್ಕಳಿಗೆ ಪ್ರತಿ ಬಾರಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ನಿರ್ಮೂಲನೆಗೆ ಶ್ರಮಿಸಬೇಕಿದೆ ಎಂದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಅವರು ಮಾತನಾಡಿ ಪೋಲಿಯೋ ನಿರ್ಮೂಲನೆ ಮಾಡುವಲ್ಲಿ ವಿಶ್ವಸಂಸ್ಥೆ, ರೋಟರಿ ಸಂಸ್ಥೆ, ರೆಡ್ ಕ್ರಾಸ್‌ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳು ಸರ್ಕಾರದ ಕೈಜೋಡಿಸಿ‌ ಕೆಲಸ ನಿರ್ವಹಿಸುತ್ತಿವೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಐದು ವರ್ಷದೊಳಗೆ 29,011 ಮಕ್ಕಳು ಇದ್ದು, ಗ್ರಾಮೀಣ ಪ್ರದೇಶದಲ್ಲಿ 26,373 ಮತ್ತು ನಗರ ಪ್ರದೇಶದಲ್ಲಿ 2,638 ಮಕ್ಕಳನ್ನು ಗುರ್ತಿಸಲಾಗಿದೆ ಎಂದರು. ಹಾಗೆಯೇ ವಲಸೆ ಮಕ್ಕಳನ್ನು ಸಹ ಗುರುತಿಸಲಾಗಿದೆ‌ ಎಂದು ಮಾಹಿತಿ ನೀಡಿದರು.
ಆರ್.ಸಿ.ಎಚ್.ಅಧಿಕಾರಿ ಡಾ.ಮಧುಸೂದನ ಅವರು ಮಾತನಾಡಿ ಪಲ್ಸ್‌ ಪೋಲಿಯೋ ಹನಿ ನೀಡುವ ಕಾರ್ಯಕ್ರಮಕ್ಕೆ ಜಿಲ್ಲೆಯಲ್ಲಿ 471 ಬೂತ್ ತೆರೆಯಲಾಗಿದೆ. ಜನಸಂದಣಿ ಪ್ರದೇಶಗಳು, ಬಸ್ ನಿಲ್ದಾಣ ಹಾಗೂ ಪ್ರವಾಸಿ ಕೇಂದ್ರಗಳನ್ನು ಗುರಿಯಾಗಿಸಿ, 33 ಟ್ರಾನ್ಸಿಟ್ ಬೂತ್ ಗಳನ್ನು ತೆರೆಯಲಾಗಿದ್ದು, ಮಡಿಕೇರಿ‌ ತಾಲ್ಲೂಕಿನಲ್ಲಿ 1 ಸಂಚಾರಿ ತಂಡವನ್ನು ಸಹ ನಿಯೋಜಿಸಲಾಗಿದೆ ಎಂದು ಅವರು ವಿವರಿಸಿದರು. ಜಿಲ್ಲೆಯಾದ್ಯಂತ ಲಸಿಕಾ ಬೂತ್ ಗಳಲ್ಲಿ ಕಾರ್ಯನಿರ್ವಹಿಸಲು 1952 ಲಸಿಕೆ ನೀಡುವವರು, 84 ಮಂದಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಡಾ.ಮಧುಸೂದನ ಅವರು ಹೇಳಿದರು. ಇದೇ ಜೂನ್ 29 ಮತ್ತು 30 ರಂದು ಗ್ರಾಮೀಣ ಪ್ರದೇಶದಲ್ಲಿ, ಜೂನ್ 29 ರಿಂದ ಜುಲೈ 1 ರ ವರೆಗೆ ನಗರ ಪ್ರದೇಶದಲ್ಲಿ ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆಯಿಂದ ಬಿಟ್ಟು ಹೋಗಿರುವ ಮಕ್ಕಳಿಗೆ‌ ಪೋಲಿಯೋ ಲಸಿಕೆ ನೀಡಲಾಗುತ್ತದೆ ಎಂದು ಡಾ.ಮಧುಸೂದನ ಅವರು ಮಾಹಿತಿ ನೀಡಿದರು. ತಾಲ್ಲೂಕು ವೈದ್ಯಾಧಿಕಾರಿ ಡಾ.ಸನತ್ ಕುಮಾರ್, ಡಾ.ಯತಿರಾಜು, ಡಾ.ಇಂದೂದರ ಅವರು ಮಾತನಾಡಿದರು. ರೋಟರಿ ಸಂಸ್ಥೆಯ ಮನೋಹರ್ ಕಾಮತ್, ರತನ್ ತಮ್ಮಯ್ಯ, ಡಾ.ಚಂದ್ರಶೇಖರ್, ಡಾ.ದಿವ್ಯಾರಾಣಿ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಕ್ಷ, ಶ್ರೀಕಾಂತ್, ದೇವರಾಜು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಕಳೆದ 8 ತಿಂಗಳಿನಿoದ ಪೌಷ್ಟಿಕ ಆಹಾರ ನೀಡದ ಸರಕಾರ : ಚುನಾವಣೆ ಬಹಿಷ್ಕಾರಕ್ಕೆ ಕೊಡಗು ಬುಡಕಟ್ಟು ಜನಾಂಗಗಳ ನಿರ್ಧಾರ : ಅಭಿವೃದ್ಧಿ ಕಾರ್ಯಗಳಿಗೆ ಆಗ್ರಹ

ನವೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ನ.3 : ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಬುಡಕಟ್ಟು ಜನಾಂಗಗಳಿಗೆ ಕಳೆದ 8 ತಿಂಗಳಿನಿoದ ಸರಕಾರ…

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.