Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆಟ್ಟಳ್ಳಿಯಲ್ಲಿ ಸಹಕಾರ ರೈತರ ಸಮಾವೇಶ : ಜಂಟಿ ದಾಖಲೆಯಿಂದ ರೈತರು ಸರ್ಕಾರದ ಯೋಜನೆಗಳಿಂದ ವಂಚಿತರು : ಬಲ್ಲಾರಂಡ ಮಣಿ ಉತ್ತಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆಟ್ಟಳ್ಳಿಯಲ್ಲಿ ಸಹಕಾರ ರೈತರ ಸಮಾವೇಶ : ಜಂಟಿ ದಾಖಲೆಯಿಂದ ರೈತರು ಸರ್ಕಾರದ ಯೋಜನೆಗಳಿಂದ ವಂಚಿತರು : ಬಲ್ಲಾರಂಡ ಮಣಿ ಉತ್ತಪ್ಪ*

ಜೂನ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಚೆಟ್ಟಳ್ಳಿ ಜೂ.29 NEWS DESK : ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷ ಪೂರೈಸಿದ ಪ್ರಯುಕ್ತ ಸಹಕಾರ ಸಪ್ತಾಹದ ಅಂಗವಾಗಿ ಚೆಟ್ಟಳ್ಳಿಯ ನರೇಂದ್ರ ಮೋದಿ ಸಹಕಾರ ಭವನದಲ್ಲಿ ರೈತರ ಸಮಾವೇಶ ಹಾಗೂ ಸಹಕಾರ ಜಾಗೃತಿ ಸಭೆ ನಡೆಯಿತು.  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ ಕೊಡಗು ಜಿಲ್ಲೆ ಹಾಗೂ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ರೈತರ ಹಿತಾಸಕ್ತಿ ಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಹಕಾರ ಸಚಿವಾಲಯವನ್ನು ಸ್ಥಾಪಿಸಿದ್ದು, ಐದು ವರ್ಷಗಳ ಅವಧಿಯಲ್ಲಿ ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಹೆಜ್ಜೆಗಳನ್ನು ಇಟ್ಟಿದೆ ಎಂದರು. ರೈತರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನಗಳು ತಲುಪುತ್ತಿದ್ದು, ಸಹಕಾರ ಸಂಘಗಳು ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ಒದಗಿಸುತ್ತಿವೆ. ಐದು ಲಕ್ಷ ರೂಪಾಯಿವರೆಗೆ ಬಡ್ಡಿರಹಿತ ಸಾಲ ನೀಡಲಾಗುತ್ತಿದ್ದು, ಚೆಟ್ಟಳ್ಳಿ ಸಹಕಾರ ಸಂಘದ ಕಾರ್ಯ ಚಟುವಟಿಕೆಗಳು ಮಾದರಿಯಾಗಿವೆ ಎಂದು ಶ್ಲಾಘಿಸಿದರು.
ಯೂರಿಯಾ ಗೊಬ್ಬರದ ಕೊರತೆ ಕುರಿತು ವ್ಯಕ್ತವಾಗುತ್ತಿರುವ ಆತಂಕಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ರೈತರಿಗೆ ಪ್ರತಿ ತಿಂಗಳು ಒಂದು ಚೀಲ ಯೂರಿಯಾ ಗೊಬ್ಬರ ಲಭ್ಯವಾಗುವ ವ್ಯವಸ್ಥೆ ಇದೆ ಎಂದು ಸ್ಪಷ್ಟಪಡಿಸಿದರು. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯ ನಡುವೆಯೂ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ ಮಾತನಾಡಿ, ಚೆಟ್ಟಳ್ಳಿ ಸಹಕಾರ ಸಂಘದ ಪ್ರತಿಯೊಂದು ಬೆಳವಣಿಗೆಯಲ್ಲೂ ಸದಸ್ಯರು ಮತ್ತು ರೈತರ ಶ್ರಮ ಅಡಕ ವಾಗಿದೆ ಎಂದು ಹೇಳಿದರು. “ಜಂಟಿ ಆರ್‌ಟಿಸಿ ದಾಖಲೆಗಳ ಕಾರಣದಿಂದ ಅನೇಕ ರೈತರು ಸರ್ಕಾರದ ಬಡ್ಡಿ ರಹಿತ ಸಾಲ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಹಕಾರ ಇಲಾಖೆ ಸರ್ಕಾರದೊಂದಿಗೆ ಚರ್ಚಿಸಬೇಕಾಗಿದೆ” ಎಂದು ಅವರು ಒತ್ತಾಯಿಸಿದರು. ಸರ್ಕಾರದ ನೂತನ ನಿಯಮಾವಳಿಗಳಿಂದ ರೈತರು ಕಟ್ಟಿಬೆಳೆಸಿದ ಸಹಕಾರ ಸಂಘಗಳಿಗೆ ಮುಂದಿನ ದಿನಗಳಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಯೂನಿಯನ್ ನಿರ್ದೇಶಕಿ ಹಾಗೂ ಸಹಕಾರ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲೆ ಎಂ.ಎಂ. ಶಾಮಲಾ ಅವರು ಕೇಂದ್ರ ಸಹಕಾರ ಸಚಿವಾಲಯದ ಉದ್ದೇಶಗಳ ಕುರಿತು ಮಾತನಾಡಿ, “ಸಹಕಾರದಿಂದ ಸಮೃದ್ಧಿ” ಎಂಬ ಧ್ಯೇಯದೊಂದಿಗೆ ಸಚಿವಾಲಯ ಕಾರ್ಯನಿರ್ವಹಿಸುತ್ತಿದೆ ಎಂದರು. ಸಹಕಾರ ಚಳವಳಿಯನ್ನು ಮತ್ತಷ್ಟು ಬಲಪಡಿಸುವುದು, ಉತ್ತಮ ಆಡಳಿತ ವ್ಯವಸ್ಥೆ ರೂಪಿಸುವುದು, ಯುವಜನರನ್ನು ಸಹಕಾರ ಕ್ಷೇತ್ರದತ್ತ ಆಕರ್ಷಿಸುವುದು ಹಾಗೂ ವಿವಿಧ ಯೋಜನೆಗಳ ಮೂಲಕ ರೈತರ ಮತ್ತು ದೇಶದ ಅಭಿವೃದ್ಧಿಗೆ ನೆರವಾಗುವುದು ಸಚಿವಾಲಯದ ಪ್ರಮುಖ ಉದ್ದೇಶ ಗಳಾಗಿವೆ ಎಂದು ವಿವರಿಸಿದರು.
 ಸಂವಿಧಾನದ 97ನೇ ತಿದ್ದುಪಡಿಯ ಮೂಲಕ ಸಹಕಾರ ಕ್ಷೇತ್ರಕ್ಕೆ ಹೆಚ್ಚಿನ ಸಾಂವಿಧಾನಿಕ ಮಾನ್ಯತೆ ದೊರೆತಿದ್ದು, ಜಾಗತೀಕರಣದ ಸವಾಲುಗಳ ನಡುವೆಯೂ ಸಹಕಾರ ಸಂಸ್ಥೆಗಳು ಖಾಸಗಿ ವಲಯದೊಂದಿಗೆ ಸ್ಪರ್ಧಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಿದೆ ಎಂದು ಹೇಳಿದರು. ಜುಲೈ ಮೊದಲ ಶನಿವಾರವನ್ನು ಅಂತರರಾಷ್ಟ್ರೀಯ ಸಹಕಾರ ದಿನಾಚರಣೆಯಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಪೇರಿಯನ ಪೂಣಚ್ಚ, ಸೋಮವಾರಪೇಟೆ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಪಿ.ಬಿ. ಮೋಹನ್ ಹಾಗೂ ಚೆಟ್ಟಳ್ಳಿ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಸ್. ನಂದೀಶ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪುತ್ತರಿರ ಗಣೇಶ್ ಭೀಮಯ್ಯ, ಕಣಜಾಲು ಪೂವಯ್ಯ, ಯೂನಿಯನ್ ಸಿಬ್ಬಂದಿ ಅರುಣ್ ಕುಮಾರ್, ಚೆಟ್ಟಳ್ಳಿ ಸಹಕಾರ ಸಂಘದ ನಿರ್ದೇಶಕರು, ಮಾಜಿ ನಿರ್ದೇಶಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿ ಕಾರಿಗಳು ಮತ್ತು ರೈತರು ಭಾಗವಹಿಸಿದ್ದರು. ಯೂನಿಯನ್ ವ್ಯವಸ್ಥಾಪಕ ಯೋಗೇಂದ್ರ ನಾಯಕ್ ಪ್ರಾರ್ಥನೆ ನೆರವೇರಿಸಿ, ಸ್ವಾಗತಿಸಿ ವಂದನಾರ್ಪಣೆ ಸಲ್ಲಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.11ರಂದು ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪಾಟ್ನಾ, NEWS DESK ಅ.08: ಮೊಬೈಲ್ ಗೇಮ್‌ಗಳನ್ನು ಸಾಮಾನ್ಯವಾಗಿ ಮನರಂಜನೆಗಾಗಿ ಆಡುವವರೇ ಹೆಚ್ಚು. ಆದರೆ ಬಿಹಾರದ 19 ವರ್ಷದ ಯುವಕನೊಬ್ಬ…

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.