
ಸುಂಟಿಕೊಪ್ಪ ಜೂ.29 NEWS DESK : ಸುಂಟಿಕೊಪ್ಪ ಲಯನ್ಸ್ ಸಂಸ್ಥೆಯ 2026-2027 ಸಾಲಿನ ನೂತನ ಅಧ್ಯಕ್ಷರಾಗಿ ಎಸ್.ಜಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾಗಿ ಗ್ಲೇನ್ ಮನೇಜಸ್ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಚೇರಿಯಲ್ಲಿ ಚೆಟ್ಟಿಮಾಡ ರಕ್ಷಿತ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಖಜಾಂಚಿಯಾಗಿ ಕೆ.ಪಿ.ಜಗನ್ನಾಥ್ ಆಯ್ಕೆಯಾದರು. ನೂತನ ಪದಾಧಿಕಾರಿಗಳ ಹಾಗೂ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭ ಸಂಸ್ಥೆಯ ಅಧ್ಯಕ್ಷ ಚೆಟ್ಟಿಮಾಡ ರಕ್ಷಿತ್ ಅವರ ಅಧ್ಯಕ್ಷತೆಯಲ್ಲಿ ಜು. 1 ರಂದು ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದ್ದು ಆಡಳಿತ ಮಂಡಳಿ ನೂತನ ತಂಡಕ್ಕೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ಲಯನ್ಸ್ ರಾಜ್ಯಪಾಲರಾದ ಗೋವರ್ದನ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲ್ಲಿದ್ದಾರೆ.









