
ವಿರಾಜಪೇಟೆ ಜೂ.29 NEWS DESK : ಆರೋಗ್ಯ ಇಲಾಖೆಯ ವತಿಯಿಂದ ಮಗ್ಗುಲದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಅವರು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಸರ್ಕಾರವು ದೇಶಾದ್ಯಂತ ಪೋಲಿಯೋವನ್ನು ನಿರ್ಮೂಲನೆ ಮಾಡಿ ಪೋಲಿಯೋ ಮುಕ್ತ ಭಾರತವನ್ನು ನಿರ್ಮಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಜೊತೆಗೆ ನಮ್ಮ ವಿದ್ಯಾಸಂಸ್ಥೆಯು ಕೂಡ ಈ ಅಭಿಯಾನಕ್ಕೆ ಸಂಪೂರ್ಣ ಸಹಕಾರವನ್ನು ನೀಡಿ ಪಾಲ್ಗೊಂಡಿದ್ದು, ಸಂಸ್ಥೆಯು ಸಮುದಾಯದ ಸಹಭಾಗಿತ್ವದ ಜೊತೆಗೆ ಆರೋಗ್ಯಯುಕ್ತ ರಾಷ್ಟ್ರದ ನಿರ್ಮಾಣಕ್ಕೆ ಕೈ ಜೋಡಿಸಿದೆ ಎಂದು ಹೇಳಿದರು. ಈ ಕಾರ್ಯಕ್ರಮವು ಅತ್ಯಂತ ಜವಾಬ್ದಾರಿಯುತ ಹಾಗೂ ಸಾಮಾಜಿಕ ಕಳಕಳಿಯುಳ್ಳ ಕಾರ್ಯವಾಗಿದ್ದು, ನಮ್ಮ ವಿದ್ಯಾಸಂಸ್ಥೆಯು ಇಂತಹ ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಂಡು ತನ್ನ ಸೇವೆಯನ್ನು ಸಲ್ಲಿಸುತ್ತಿದೆ ಎಂದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಸಿಬ್ಬಂದಿಗಳು, ಮಕ್ಕಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಮಗ್ಗುಲ ಹಾಗೂ ವಿರಾಜಪೇಟೆ ವ್ಯಾಪ್ತಿಯ ಒಟ್ಟು ಐದು ಪಲ್ಸ್ ಪೋಲಿಯೋ ಲಸಿಕಾ ಬೂತ್ ನಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಆಡಳಿತ ಮಂಡಳಿಯವರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಸ್ವಯಂ ಸೇವಕರಾಗಿ ಪಾಲ್ಗೊಂಡರು. ಶಿಕ್ಷಣ ಸಂಸ್ಥೆಯೊಂದು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ಜಾಗೃತಿ ಮೂಡಿಸಿ ಸ್ವಯಂ ಸೇವೆಯನ್ನು ಸಲ್ಲಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಯಿತು.









