
ಮಡಿಕೇರಿ NEWS DESK ಜೂ.30 : ರಾಜ್ಯಾದ್ಯಂತ ಇಂದಿನಿಂದ ಜುಲೈ 29 ರವರೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ (SIR) ಅಂಗವಾಗಿ ಮನೆ-ಮನೆ ಸಮೀಕ್ಷೆ (Enumeration) ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಗರೂರಿನ ನನ್ನ ನಿವಾಸದಲ್ಲಿ ಬಿಎಲ್‌ಓಗಳಿಗೆ ಅಗತ್ಯ ದಾಖಲೆಗಳು ಹಾಗೂ ಮಾಹಿತಿ ನೀಡಿ ನಾನು ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದೇನೆ. ನಾಡಿನ ಸಮಸ್ತ ನಾಗರಿಕರಲ್ಲಿ ಹಾಗೂ ಅರ್ಹ ಮತದಾರರಲ್ಲಿ ನನ್ನದೊಂದು ವಿನಂತಿ, ನೀವೆಲ್ಲರೂ ಮನೆಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಪೂರ್ಣ ಸಹಕಾರ ನೀಡಿ, ಅಗತ್ಯ ಮಾಹಿತಿಗಳನ್ನು ಒದಗಿಸುವ ಮೂಲಕ ನಿಮ್ಮ ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಿ. ನೆನಪಿಡಿ, ಪ್ರಜಾಪ್ರಭುತ್ವ ಎನ್ನುವುದು ಕೇವಲ ಒಂದು ಆಡಳಿತ ವ್ಯವಸ್ಥೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಧ್ವನಿ. ಆ ಧ್ವನಿಗೆ ಶಕ್ತಿ ತುಂಬುವುದು ನಮ್ಮ ‘ಮತ’. ನಾವು ಚಲಾಯಿಸುವ ಪ್ರತಿಯೊಂದು ಮತವೂ ದೇಶದ ಭವಿಷ್ಯವನ್ನು ರೂಪಿಸುವ ಮತ್ತು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಪವಿತ್ರ ಕರ್ತವ್ಯವಾಗಿದೆ. ಅಗತ್ಯ ದಾಖಲೆ ನೀಡಿ – ಮತದಾನದ ಹಕ್ಕನ್ನು ಉಳಿಸಿಕೊಳ್ಳಿ >>> (ಶಾಸಕ ಡಾ.ಮಂತರ್ ಗೌಡ, ಮಡಿಕೇರಿ)








