Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*
  • *ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*
  • *ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕನ್ನಡ ಜಾಗೃತಿ ಸಮಿತಿ ಸಭೆ : ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹಾದಿಮನಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕನ್ನಡ ಜಾಗೃತಿ ಸಮಿತಿ ಸಭೆ : ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ : ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹಾದಿಮನಿ*

ಜುಲೈ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ ಜು.1 NEWS DESK : ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರು ತಿಳಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಕನ್ನಡ ಜಾಗೃತಿ ಸಮಿತಿ ಸಭೆಯಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ, ಅನುಷ್ಠಾನ ಮತ್ತು ಜಾಗೃತಿ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು. ಕನ್ನಡ ಅತ್ಯಂತ ಪ್ರಾಚೀನ ಮತ್ತು ಶ್ರೀಮಂತ ಭಾಷೆಯಾಗಿದ್ದು, ಮುಂದಿನ ದಿನಗಳಲ್ಲಿ ಕನ್ನಡದ ಭವಿಷ್ಯವನ್ನು ಮತ್ತಷ್ಟು ಉಜ್ವಲಗೊಳಿಸಲು ಕನ್ನಡ ಜಾಗೃತಿ ಸಮಿತಿಯ ಜವಾಬ್ದಾರಿಗಳು ಅತ್ಯಂತ ನಿರ್ಣಾಯಕ. ಆ ದಿಸೆಯಲ್ಲಿ ಕನ್ನಡ ಜಾಗೃತಿ ಸಮಿತಿ ಆಧುನಿಕ ಜಗತ್ತಿಗೆ ಕನ್ನಡವನ್ನು ಕೊಂಡೊಯ್ಯುವ ಮಾರ್ಗದರ್ಶಿ ಸಮಿತಿಯಾಗಿ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರು ತಿಳಿಸಿದರು. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಸಂಬಂಧ ಈಗಾಗಲೇ ಅಧಿನಿಯಮ ಜಾರಿಯಾಗಿದ್ದು, ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲೆಯ ಗಡಿಭಾಗ ಸೇರಿದಂತೆ ನಗರ, ಪಟ್ಟಣ ಹಾಗೂ ಎಲ್ಲೆಡೆ ಅಳವಡಿಸಿರುವ/ ಅಳವಡಿಸುವ ನಾಮಫಲಕದಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಳ ಗಮನಕ್ಕೆ ತಂದು ಸ್ಥಳೀಯ ಸಂಸ್ಥೆ ಮೂಲಕ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ಅವರು ಮಾತನಾಡಿ, ಈಗಾಗಲೇ ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಹಲವು ಸಭೆಗಳನ್ನು ಮಾಡಲಾಗಿದ್ದು, ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು. ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಬಿ.ಎಸ್.ಲೋಕೇಶ್ ಸಾಗರ್ ಅವರು ಮಾತನಾಡಿ, ಸರ್ಕಾರಿ ಬಸ್ಸು ಸೇರಿದಂತೆ ಇತರ ಭಾಷೆಗಳಲ್ಲಿ ಜಾಹೀರಾತು ಅಳವಡಿಸಲಾಗುತ್ತಿದ್ದು, ಅದು ಕನ್ನಡದಲ್ಲೇ ಅಳವಡಿಸುವಂತಾಗಬೇಕು, ಅಲ್ಲದೇ ಶಾಲಾ-ಕಾಲೇಜುಗಳಲ್ಲಿ ನಾಡಗೀತೆ ಮತ್ತು ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು. ಮತ್ತೋರ್ವ ಸದಸ್ಯ ಅಮಿನ್ ಮೋಸಿನ್ ಅವರು ಮಾತನಾಡಿ, ಕೊಡಗಿನಲ್ಲಿ ಸಾಕಷ್ಟು ಮಂದಿ ಕನ್ನಡಕ್ಕಾಗಿ ತಮ್ಮದೇ ಆದ ಕೊಡುಗೆ ನೀಡಿದವರಿದ್ದಾರೆ. ಅಲ್ಲದೇ ವಿವಿಧ ಪ್ರಶಸ್ತಿಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅಂತಹ ಸಾಧಕರನ್ನು ಹಾಗೂ ಕೊಡಗಿನ ಮೂಲ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಸಂಗ್ರಹಾಲಯ ತೆರೆಯಬೇಕು. ಈ ನಿಟ್ಟಿನಲ್ಲಿ ಸಂಗ್ರಹಾಲಯಕ್ಕೆ ಮಡಿಕೇರಿಯಲ್ಲಿ ಜಾಗ ಗುರುತಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮಾತನಾಡಿ, ಜಿಲ್ಲೆಯ ಸರ್ಕಾರಿ ವೆಬ್‍ಸೈಟ್‍ನಲ್ಲಿ ಸಾಧಕರ ಕೊಡುಗೆ ಪರಿಚಯಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರವಾಸಿ ತಾಣ ರಾಜಸೀಟಿನಲ್ಲಿ ಪ್ರವಾಸಿಗರ ಗಮನ ಸೆಳೆಯಲು ಕೊಡಗಿನ ಸಂಸ್ಕøತಿ ಪ್ರತಿಬಿಂಬಿಸುವ ಕಲಾಚಿತ್ರಗಳನ್ನು ಹಾಗೂ ಸಾಧಕರ ಫೋಟೋ ಅಳವಡಿಸಲು ಕ್ರಮ ಕೈಗೊಳ್ಳುವ ಕುರಿತು ಸಂಬಂಧಿಸಿದವರೊಂದಿಗೆ ಚರ್ಚಿಸಲಾಗುವುದು. ಸಂಗ್ರಹಾಲಯ ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಕೆ.ವಿ.ಸುನಿಲ್ ಕುಮಾರ್ ಅವರು ಮಾತನಾಡಿ, ಶಾಲಾ ಕಾಲೇಜುಗಳಲ್ಲಿ ಕನ್ನಡ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು. ಈ ಸಂದರ್ಭ ಕುಮಾರ್ ಅವರು ಮಾತನಾಡಿ ಪ್ರೌಢಶಾಲೆ ಹಾಗೂ ಕಾಲೇಜು ಹಂತದ ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ, ಚಿತ್ರಕಲೆ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನವನ್ನು ನೀಡುವುದರ ಮೂಲಕ ಪ್ರೋತ್ಸಾಹಿಸುವ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಸದಸ್ಯರಾದ ಡಾ.ರಾಧಿಕ ಕುಟ್ಟಪ್ಪ ಅವರು ಮಾತನಾಡಿ ಕನ್ನಡ ಭಾಷೆ ಸಂಸ್ಕೃತಿ ಕುರಿತು ಕಾರ್ಯಗಾರ ಏರ್ಪಡಿಸಬೇಕು, ಶಾಲಾ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಕ ಹಲವು ಕಾರ್ಯಕ್ರಮ ಆಯೋಜಿಸಬೇಕು ಎಂದು ಸಲಹೆ, ಮಾರ್ಗದರ್ಶನ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಕ್ಯಾಂಡಿ ಕ್ರಷ್‌ನಲ್ಲಿ 22,222ನೇ ಲೆವೆಲ್ ತಲುಪಿ ವಿಶ್ವ ದಾಖಲೆ ಬರೆದ 19 ವರ್ಷದ ಬಿಹಾರದ ಯುವಕ!*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗು ಸುರಕ್ಷಾ ಆಂದೋಲನ ಸಮಿತಿಯಿಂದ ಜನಜಾಗೃತಿ ಸಭೆ*

ಅಕ್ಟೋಬರ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.08: ದೇಶದ ಸುರಕ್ಷತೆಗೆ ಸವಾಲಾಗಿರುವ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕೊಡಗು…

*ಅಪರಾಧ ದೂರು ಪ್ರಕ್ರಿಯೆ ಕುರಿತು ಕಾನೂನು ಸ್ವಯಂಸೇವಕರಿಗೆ ಮಡಿಕೇರಿಯಲ್ಲಿ ತರಬೇತಿ*

ಅಕ್ಟೋಬರ್ 8, 2026

*ಹಾಕತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 8, 2026

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.