Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿಬಿಜಿ ರಾಮ್ ಜಿ ಯೋಜನೆ : ವಿರಾಜಪೇಟೆಯಲ್ಲಿ ಅನುಷ್ಠಾನಕ್ಕೆ ಸಿದ್ಧತೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿಬಿಜಿ ರಾಮ್ ಜಿ ಯೋಜನೆ : ವಿರಾಜಪೇಟೆಯಲ್ಲಿ ಅನುಷ್ಠಾನಕ್ಕೆ ಸಿದ್ಧತೆ

ಜುಲೈ 1, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜು.1 NEWS DESK : ಮಹತ್ಮಾ ಗಾಂಧಿ ನರೇಗಾ ಯೋಜನೆ ಬದಲಾಗಿ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆ ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದ್ದು, ವಿರಾಜಪೇಟೆ ತಾಲ್ಲೂಕಿನಲ್ಲಿ ಅನುಷ್ಠಾನಕ್ಕೆ ಸಿದ್ಧತೆ ಆರಂಭಿಸಲಾಗಿದೆ. ವಿರಾಜಪೇಟೆ ತಾಲ್ಲೂಕು ಸಾಮಥ್ರ್ಯ ಸೌಧದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆ ಸಂಬಂಧಿಸಿದಂತೆ ಒಂದು ದಿನದ ಕಾರ್ಯಾಗಾರಕ್ಕೆ ವಿರಾಜಪೇಟೆ ತಾ.ಪಂ.ಇಒ ರಾಜೇಶ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿ, ಅವರು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜಿವಿಕ್ ಮಿಷನ್ (ಗ್ರಾಮೀಣ) ಯೋಜನೆ ಯಶಸ್ವಿಯಾಗಿ ಅನುಷ್ಠಾನ ಮಾಡುವ ಉದ್ದೇಶದಿಂದ ರೂಪುರೇಷ ಸಿದ್ದ ಮಾಡಿಕೊಳ್ಳಲಾಗುತ್ತಿದ್ದು, ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು. ವಿಬಿಜಿ ರಾಮ್‍ಜಿ ಕಾಯ್ದೆ ವೈಶಿಷ್ಟಗಳು, ಸಾಂಸ್ಥಿಕ ರಚನೆ ಮತ್ತು ಸಾಂಸ್ಥಿಕ ಚೌಕಟ್ಟು ಮತ್ತು ಯೋಜನಾ ಚೌಕಟ್ಟು, ಯೋಜನಾ ಪ್ರಕ್ರಿಯೆಯ ಹಂತಗಳು ಮತ್ತು ಒಗ್ಗೂಡಿಸುವಿಕೆ ಬಗ್ಗೆ ಸಹಾಯಕ ನಿರ್ದೇಶಕರಾದ ಎಂ.ಡಿ.ಶ್ರೀನಿವಾಸ್ (ಗ್ರಾ.ಉ) ಅವರು ಮಾಹಿತಿ ನೀಡಿದರು. ಯೋಜನೆಯ ಮುಖ್ಯ ಉದ್ದೇಶ ತಿಳಿಸುತ್ತಾ, ಸ್ವಯಂ ಪ್ರೇರಿತವಾಗಿ ಆಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ವಯಸ್ಕರ ಸದಸ್ಯರ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಕಡ್ಡಾಯ ಉದ್ಯೋಗ ಖಾತ್ರಿ, ವಿಕಸಿತ ಗ್ರಾಮ ಪಂಚಾಯಿತಿ ಯೋಜನೆಗಳ ಮೂಲಕ ಒಗ್ಗೂಡಿಸುವಿಕೆ ಸ್ಯಾಚುರೇಷನ್ ಆಧಾರಿತ ಯೋಜನೆ ಮತ್ತು ಸರ್ಕಾರದ ಸಮಗ್ರ ಕಾರ್ಯಾಚರಣೆ ವಿತರಣೆ ಸಾಂಸ್ಥಿಕರಿಸುವುದು, ಕೃಷಿ ಕಾಲದಲ್ಲಿ ಕೃಷಿ ಕಾರ್ಮಿಕರ ಸಮರ್ಪಕ ಲಭ್ಯತೆಗೆ ಸುಗಮಗೊಳಿಸಲು 60 ದಿನಗಳ ವಿರಾಮ ಕೊಟ್ಟು ಪರಿಪೂರ್ಣತೆ ಸಾಧಿಸಲು ಕಾಮಗಾರಿಗಳ ಒಗ್ಗೂಡಿಸುವಿಕೆಗಾಗಿ ವಿಕಸಿತ ಭಾರತ ರಾಷ್ಟ್ರೀಯ ಗ್ರಾಮೀಣ ಮೂಲಸೌಕರ್ಯದ ಜೊತೆಗೆ ಸಮಗ್ರ ಡಿಜಿಟಲ್ ವ್ಯವಸ್ಥೆಯ ಮೂಲಕ ಆಡಳಿತ ಹೊಣೆಗಾರಿಕೆ ಮತ್ತು ನಾಗರಿಕರ ಪಾಲ್ಗೊಳ್ಳುವಿಕೆ ಆಧುನಿಕರಿಸುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದು ತಿಳಿಸಿದರು. ಯೋಜನೆ ಅಡಿಯಲ್ಲಿ ತಂತ್ರಜ್ಞಾನದ ಪಾತ್ರ ಮತ್ತು ಅನುಮತಿಸಲಾದ ಕಾಮಗಾರಿಗಳ ಬಗ್ಗೆ ಮಾಹಿತಿಯನ್ನು ತಾಲ್ಲೂಕು ಐಇಸಿ ಸಂಯೋಜಕರಾದ ನರೇಂದ್ರ ಮಾಹಿತಿ ನೀಡಿದರು. ಅರ್ಹ ಗ್ರಾಮೀಣಾ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಉದ್ಯೋಗ ಕಲ್ಪಿಸಲಾಗುವುದು. (ಗಂಡು ಹೆಣ್ಣಿಗೆ ಸಮಾನ ಕೂಲಿ ರೂ.382.) ಈ ಯೋಜನೆಯು ಭಾರತ ಸರ್ಕಾರದ ಒಂದು ಮಹತ್ವಕಾಂಕ್ಷೆಯ ದೃಷ್ಟಿಕೋನವಾಗಿದ್ದು, ಸ್ವಾತಂತ್ರ್ಯದ 100 ವರ್ಷಗಳ ನೆನಪಿಗಾಗಿ 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂದು ಮಾಹಿತಿ ನೀಡಿದರು. ಕಾರ್ಯಗಾರದಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿ, ವಿರಾಜಪೇಟೆ/ ಪೊನ್ನಂಪೇಟೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ನರೇಗಾ ಯೋಜನೆಯ ತಾಂತ್ರಿಕ ಸಿಬ್ಬಂದಿ ವರ್ಗದವರು ಹಾಗೂ ಗ್ರಾಮ ಪಂಚಾಯಿತಿ ಡೇಟಾ ಎಂಟ್ರಿ ಅಪರೇಟರ್, ಇತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.6 ರಂದು ವಿಷ್ಣುಮೂರ್ತಿ ಕೋಲ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಬಾಳಲೆ-ದೇವನೂರು : ನ.3 ರಂದು ವಿದ್ಯುತ್ ವ್ಯತ್ಯಯ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ನ.2 NEWS DESK :  ಗೋಣಿಕೊಪ್ಪ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್1 ನಲ್ಲೂರು, ಎಫ್2 ಬಾಳಲೆ…

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.