
ಸುಂಟಿಕೊಪ್ಪ ಜು.2 NEWS DESK : ಸಣ್ಣ ಪ್ರಮಾಣದ ಮಳೆ ಮತ್ತು ಗಾಳಿಗೆ ಕೆದಕಲ್ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಇದ್ದ ಬೃಹತ್ ಮರವೊಂದು ಹೆದ್ದಾರಿಗೆ ಬಿದ್ದ ಪರಿಣಾಮ 2 ಬದಿಯ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಗುರುವಾರದಂದು ಅಲ್ಪಪ್ರಮಾಣದ ಮಳೆ ಸುರಿಯುತ್ತಿದ್ದು, ಬಿರುಸಿನ ಗಾಳಿಯ ಪರಿಣಾಮ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಪರಿಣಾಮ ಬಾರೀ ವಾಹನಗಳ ಸಂಚಾರಕ್ಕೆ ತೊಡಕು ಉಂಟಾಯಿತು. ಕಿಲೋ ಮೀಟರ್ ದೂರದವರೆಗೆ ವಾಹನಗಳು ಸರತಿ ಸಾಲಿನಲ್ಲಿ ಸುಮಾರು 2 ಗಂಟೆಗಳ ಕಾಲಗಳ ಸ್ಥಗಿತಗೊಂಡು ಪ್ರಯಾಣಿಕರು ವಾಹನ ಸವಾರರಿಗೆ ತೀವ್ರ ತೊಂದರೆಯನ್ನು ಉಂಟುಮಾಡಿತು. ಸ್ಥಳಕ್ಕೆ ಅಗ್ನಿಶಾಮಕ ದಳದವರು, ಗ್ರಾಮಸ್ಥರು ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.









