
ವಿರಾಜಪೇಟೆ ಜು.2 NEWS DESK : ವಿರಾಜಪೇಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್-2026)ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ನಡೆಯಿತು. ಜಾಥಾಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಎಸ್.ಪಿ.ರೈಮಂಡ್ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ಅರ್ಹ ಮತದಾರರು ಪಟ್ಟಿಯಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಳ್ಳುವುದು ಹಾಗೂ ವಿವರಗಳನ್ನು ಪರಿಶೀಲಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಸಂಯೋಜಕರು ಹಾಗೂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಪವಿತ್ರ ಅವರು, ಎಸ್.ಐ.ಆರ್ ನ ಉದ್ದೇಶಗಳು, ಮತದಾರನು ಪಾಲ್ಗೊಳ್ಳುವ ಹಂತಗಳು ಹಾಗೂ ಮತದಾನದ ಮಹತ್ವದ ಕುರಿತು ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗುತ್ತಾ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿಯನ್ನು ಮೂಡಿಸಿದರು. ಈ ಸಂದರ್ಭ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









