Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*
  • *ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*
  • *ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*
  • *ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*
  • *ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*
  • *ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*
  • *ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*
  • *ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*
  • *ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*
  • *ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಮಿತಿ ಮೀರಿದ ವನ್ಯಜೀವಿಗಳ ಉಪಟಳ : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ವಾಹನ ಜಾಥಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಲ್ಲಿ ಮಿತಿ ಮೀರಿದ ವನ್ಯಜೀವಿಗಳ ಉಪಟಳ : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ವಾಹನ ಜಾಥಾ*

ಜುಲೈ 6, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ NEWS DESK ಜು.6 : ವನ್ಯಜೀವಿ ದಾಳಿಯನ್ನು ತಡೆಯುವಲ್ಲಿ ಮತ್ತು ಕೊಡಗಿನ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಸೂಚಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಬೃಹತ್ ವಾಹನ ಜಾಥಾ ಮತ್ತು ಪ್ರತಿಭಟನಾ ಸಭೆ ನಡೆಸಿತು.
ನಗರದ ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ ಯದುವೀರ್ ಒಡೆಯರ್ ಅವರು ವನ್ಯಜೀವಿ ದಾಳಿಯನ್ನು ತಡೆಯುವಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಸಂಪÀÆರ್ಣವಾಗಿದೆ ವಿಫಲವಾಗಿದೆ. ಆದರೆ ಈ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸರಕಾರದಿಂದ ಅಗತ್ಯ ನೆರವು ದೊರಕಿಲ್ಲವೆಂದು ಕಾಂಗ್ರೆಸ್ ಆರೋಪಿಸುತ್ತಿದೆ. ಇದು ಸತ್ಯಕ್ಕೆ ದೂರವಾದ ಮಾತು, ಕೇಂದ್ರದ ಅರಣ್ಯ ಮತ್ತು ಪರಿಸರ ಸಚಿವÀ ಭೂಪೇಂದ್ರ ಯಾದವ್ ಅವರು, ಕಾಡಾನೆ ಹಾವಳಿ ತಡೆಗೆ 350 ಕೋಟಿ ರೂ.ಗಳ 5 ವರ್ಷಗಳ ಅವಧಿಯ ಯೋಜನೆಯನ್ನು ಒದಗಿಸಲು ಮುಂದಾಗಿದ್ದಾರೆ ಎಂದರು.
ರಾಜ್ಯ ಕಾಂಗ್ರೆಸ್ ಸರಕಾರ ಜಿಲ್ಲೆಯ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿಲ್ಲ. ಇಲ್ಲಿಯವರೆಗೆ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ, ಅರಣ್ಯ ಸಚಿವರೇ ಇಲ್ಲದೆ ಅರಣ್ಯ ಇಲಾಖೆ ಸಮರ್ಪಕವಾಗಿ ಕೆಲಸ ನಿರ್ವಹಿಸದಂತಾಗಿದೆ ಎಂದು ಟೀಕಿಸಿದರು.
ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ ಅವರು ಮಾತನಾಡಿ, ವನ್ಯಜೀವಿ ಮತ್ತು ಕಾಡಾನೆ ಹಾವಳಿ ತಡೆಗೆ ರಾಜ್ಯದ ಕಾಂಗ್ರೆಸ್ ಸರಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಮಲೆನಾಡ ಭಾಗದ ಎಲ್ಲಾ ಜಿಲ್ಲೆಗಳು ಒಗ್ಗೂಡಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದರು.
ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾತನಾಡಿ, ಬಿಜೆಪಿ ಪಕ್ಷ ತನ್ನ ಅಧಿಕಾರದ ಕೊನೆಯ ಅವಧಿಯ 2023-24ನೇ ಸಾಲಿನಲ್ಲಿ ಕಾಡಾನೆ ಮಾನವ ಸಂಘರ್ಷ ತಡೆಗೆ 120 ಕೋಟಿ ರೂ.ಗಳನ್ನು ಒದಗಿಸಿದೆ. ಅದರಲ್ಲಿ ಚಿಕ್ಕಾಸನ್ನು ಈ ಕಾಂಗ್ರೆಸ್ ಸರ್ಕಾರ ಸದ್ಬಳಕೆ ಮಾಡಿಲ್ಲ. ನಮ್ಮ ಅವಧಿಯಲ್ಲಿ ಮಾಡಿದ್ದ ಕಂದಕ, ಸೋಲಾರ್ ಬೇಲಿಗಳ ಕನಿಷ್ಟ ನಿರ್ವಹಣೆೆಯೂ ನಡೆದಿಲ್ಲ. ಹೀಗಿದ್ದೂ ಕಳೆದ ಬಜೆಟ್‌ನಲ್ಲಿ ಮುಂದಿನ 5ವರ್ಷಕ್ಕೆ ಕಾಡಾನೆ-ಮಾನವ ಸಂಘರ್ಷ ಪರಿಹಾರಕ್ಕೆ 1500ಕೋಟಿ ರೂ. ಸೂಚಿಸಲಾಗಿದ್ದರು, ಇದಕ್ಕೆ ಅನುಮೋದನೆಯನ್ನು ಇಲ್ಲಿಯವರೆಗೂ ನೀಡಿಲ್ಲವೆಂದು ಗೇಲಿ ಮಾಡಿದರು.
ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ, ಜಿಲೆಯ ಸಿ ಮತ್ತು ಡಿ ಜಮೀನನ್ನು ಅರಣ್ಯಕ್ಕೆÀ ಹಸ್ತಾಂತರಿಸಬೇಕೆನ್ನುವ ಆದೇಶವನ್ನು ಪರಿಸರವಾದಿಗಳ ಪಿತೂರಿಯಿಂದ ಹೊರಡಿಸಲಾಗಿದೆ. ಇಂದು ಸರಕಾರದ ಆದೇಶದಿಂದ ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಶಾಂತಳ್ಳಿ, ಕೂತಿ, ಸೂರ್ಲಬ್ಬಿ ವಿಭಾಗದ 5 ಸಾವಿರಕ್ಕು ಹೆಚ್ಚಿನ ಕುಟುಂಬಗಳು ಬೀದಿ ಪಾಲಾಗುವ ಸ್ಥಿತಿ ಎದುರಾಗಿದೆ ಎಂದು ಆರೋಪಿಸಿದರು.
ಮೂರು ನಾಲ್ಕು ತಲೆಮಾರಿನಿಂದ ಸಿ ಮತ್ತು ಡಿ ಜಮೀನಿನಲ್ಲಿ ನೆಲೆಸಿರುವವರಿಗೆ ಅವರ ಜಾಗಕ್ಕೆ ಹಕ್ಕುಪತ್ರವನ್ನು ಒದಗಿಸುವ ನಿಟ್ಟಿನ ಕಾರ್ಯವನ್ನು ನಮ್ಮ ಅವಧಿಯಲ್ಲಿ ಮಾಡಲಾಗಿದೆ. ಆದರೆ, ಕಾಂಗ್ರೆಸ್ ಸರಕಾರ ಇದನ್ನು ತೆಗೆಯುವ ಪ್ರಯತ್ನಕ್ಕೆ ಮುಂದಾಗಿರುವುದಲ್ಲದೆ, ಹಾರಂಗಿ ಜಲಾಶಯದಿಂದ ಮುಳುಗಡೆಯಾದ ಜಾಗಕ್ಕೆ ಪರ್ಯಾಯವಾಗಿ ಅತ್ತೂರು ಗ್ರಾಮದಲ್ಲಿ ಸಂತ್ರಸ್ತರಿಗೆ ನೀಡಿದ ಜಾಗವನ್ನು ಕಂದಾಯ ಗ್ರಾಮವಾಗಿ ಘೋಷಿಸುವ ಬಿಜೆಪಿ ಸರಕಾರದ ಪ್ರಯತ್ನಗಳನ್ನು ತಿರಸ್ಕರಿಸಿರುವುದಾಗಿ ಟೀಕಿಸಿದರು.


ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವನ್ಯ ಜೀವಿ ಹಾವಳಿಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡಯುತ್ತಿರುವ ಜೀವಹಾನಿ, ಕೃಷಿ ಹಾನಿಗೆ ಸಂಬAಧಿಸಿದAತೆ ಬಿಜೆಪಿ ವಿವಿಧ ಹೋರಾಟಗಳನ್ನು ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆಯಲ್ಲಿ ರೂಪಿಸಿದೆ. ಹೀಗಿದ್ದೂ ಸರ್ಕಾರವಾಗಲಿ, ಅರಣ್ಯ ಇಲಾಖೆಯಾಗಲಿ ಇದಕ್ಕೆ ಸೂಕ್ತವಾಗಿ ಸ್ಪಂದಿಸಿಲ್ಲ. ಬದಲಾಗಿ ಕಾಡಾನೆ ದಾಳಿಯಿಂದ ಮೃತ ಪಟ್ಟವರಿಗೆ ಪರಿಹಾರ ನೀಡುವ ಕಾರ್ಯವಷ್ಟೆ ನಡೆಯುತ್ತಿದೆ. ಪರಿಹಾರದ ಮೂಲಕ ಯಾವುದೇ ಜೀವಕ್ಕೆ ಬೆಲೆ ಕಟ್ಟಲಾಗದೆಂದು ತಿಳಿಸಿದರು.
ತಲೆತಲಾಂತರಗಳಿಮದ ಸಿ ಮತ್ತು ಡಿ ಜಮೀನಿನಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ಕುಟುಂಬಗಳನ್ನು, ಒಕ್ಕಲೆಬ್ಬಿಸುವ ಪ್ರಯತ್ನಕ್ಕೆ ಸರ್ಕಾರ ಮುಂದಾಗಿದೆ. ಇದನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದಲ್ಲದೆ, ಸಿ ಮತ್ತು ಡಿ ಜಮೀನನ್ನು ಅರಣ್ಯಕ್ಕೆÀ ಸೇರಿದ್ದೆನ್ನುವ ಸುತ್ತೋಲೆ, ಆದೇಶಗಳನ್ನು ಹಿಂದಕ್ಕೆ ಪಡೆಯಬೇಕು. ಈ ಹಿಂದೆಯೆ ಬಿಜೆಪಿಯು ಜಿಲ್ಲೆಯ ವನ್ಯ ಜೀವಿ ಹಾವಳಿಗೆ ಸಂಬAಧಿಸಿದAತೆ ಅಧಿಕಾರಿಗಳು, ಸ್ಥಳೀಯ ಪ್ರಮುಖರು. ಜನಪ್ರತಿನಿಧಿಗಳನ್ನು ಒಳಗೊಂಡAತೆ ಸಭೆ ಕಡೆಯುವಂತೆ ಆಗ್ರಹಿಸಿದ್ದೇವೆ. ಹೀಗಿದ್ದರು ಸ್ಥಳೀಯ ಜನಪ್ರತಿನಿಧಿಗಳು ತಮ್ಮ ಪ್ರತಿಷ್ಠೆಗಾಗಿ ಸಭೆಯನ್ನು ಬೆಂಗಳೂರಿನಲ್ಲಿ ಕರೆಯುತ್ತಿರುವ ಬಗ್ಗೆ ನಮ್ಮ ಧಿಕ್ಕಾರವಿರುವುದಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಎಂಎಲ್‌ಸಿ ಎಸ್.ಜಿ.ಮೇದಪ್ಪ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ತದರ್ಶಿಗಳಾದ ವಿ.ಕೆ.ಲೋಕೇಶ್, ಚಲನ್ ಕುಮಾರ್, ಮಾಜಿ ಅಧ್ಯಕ್ಷರುಗಳಾದ ರಾಬಿನ್ ದೇವಯ್ಯ, ಬಿ.ಬಿ.ಭಾರತೀಶ್, ರಾಜ್ಯ ಬಿಜೆಪಿ ಕೃಷಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಬಿ.ಸಿ.ನವೀನ್, ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಸ್ವಾಗತಿಸಿ, ವಕ್ತಾರ ಬಿ.ಕೆ.ಅರುಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ವ್ಯಾಪ್ತಿಯ ಸೋಮವಾರಪೇಟೆ, ಸಿದ್ದಾಪುರ, ಪೊನ್ನಂಪೇಟೆ, ವಿರಾಜಪೇಟೆ, ಭಾಗಮಂಡಲ ಮತ್ತು ಮಡಿಕೇರಿ ಮಂಡಲ ವ್ಯಾಪ್ತಿಯಿಂದ ಸೋಮವಾರ ಬೆಳಗ್ಗೆ ಬಿಜೆಪಿ ಕಾರ್ಯಕರ್ತರು ವಾಹನಗಳಲ್ಲಿ ಬೃಹತ್ ಜಾಥ ನಡೆಸಿದರು. ಫೋಟೋ :: ಬಿಜೆಪಿ ಪ್ರೊಟೆಸ್ಟ್

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರಿಗೆ ಆಗ್ರಹ: ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಮಡಿಕೇರಿ : ಅ.8 ರಂದು ವಿದ್ಯುತ್ ವ್ಯತ್ಯಯ*

ಅಕ್ಟೋಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.7 NEWS DESK : 66/11ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ಎಫ್1 ಕೋಟೆ ಮತ್ತು ಎಫ್5…

*ಸೈನಿಕ ಶಾಲೆ ಕೊಡಗಿನಲ್ಲಿ 20ನೇ ಅಂತರ ನಿಲಯ ವಾರ್ಷಿಕ ಕ್ರೀಡಾಕೂಟ ಸಮಾರೋಪ; ಸುಬ್ರೊತೊ ನಿಲಯಕ್ಕೆ ಸಮಗ್ರ ಚಾಂಪಿಯನ್‌ಶಿಪ್‌ | ದಕ್ಷಿಣ ವಲಯ ಸ್ಪರ್ಧೆಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶುಭ ಹಾರೈಕೆ*

ಅಕ್ಟೋಬರ್ 7, 2026

*ಶ್ರೀ ಕೋಟೆ ಮಹಾಗಣಪತಿ ದಸರಾ ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿಯ ಸುವರ್ಣ ಮಹೋತ್ಸವ; ಗಮನ ಸೆಳೆದ ಬೃಹತ್ ವಾಹನ ಜಾಥಾ; ಕಂಗೊಳಿಸುತ್ತಿರುವ ವಿದ್ಯುತ್ ದೀಪಾಲಂಕಾರಮಂಟಪ ಸಮಿತಿಯ ಸುವರ್ಣ ಮಹೋತ್ಸವ : ಗಮನ ಸೆಳೆದ ಬೃಹತ್ ವಾಹನ ಜಾಥಾ : ಕಂಗೊಳಿಸುತ್ತಿರುವ ವಿದ್ಯುತ್ ದೀಪದ ಅಲಂಕಾರ*

ಅಕ್ಟೋಬರ್ 7, 2026

*ವಿಶ್ವದ ಅಗ್ರ ಶೇ.2 ವಿಜ್ಞಾನಿಗಳ ಪಟ್ಟಿಗೆ ಡಾ. ಜೆ.ಜಿ.ಮಂಜುನಾಥ*

ಅಕ್ಟೋಬರ್ 7, 2026

*ಆನೆಕಾಡು ಹೆದ್ದಾರಿ ಅಪಘಾತ ವಲಯಗಳ ಕುರಿತು ತುರ್ತು ಸಭೆ*

ಅಕ್ಟೋಬರ್ 7, 2026

*ವಿರಾಜಪೇಟೆ : ವಿಕಸನ, ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ಅಗತ್ಯ : ಗಣ್ಯರ ಕರೆ*

ಅಕ್ಟೋಬರ್ 7, 2026

*ವಿರಾಜಪೇಟೆ : ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಮಾಜದ ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ*

ಅಕ್ಟೋಬರ್ 7, 2026

*ಮೂರ್ನಾಡಿನಲ್ಲಿ ಅ.8ರಿಂದ ಎನ್‌ಎಸ್‌ಎಸ್ ವಿಶೇಷ ವಾರ್ಷಿಕ ಶಿಬಿರ*

ಅಕ್ಟೋಬರ್ 7, 2026

*ಗನ್-ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಅ.9ರಂದು ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 7, 2026

*ಆಳವಾದ ಅಧ್ಯಯನ, ತಾರ್ಕಿಕ ಚಿಂತನೆ ವಿದ್ಯಾರ್ಥಿಗಳ ಆಲೋಚನೆಗಳಿಗೆ ಶಕ್ತಿ: ಪ್ರೊ. ಸುರೇಶ್ ಎಂ.*

ಅಕ್ಟೋಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.